ಬಡತನವನ್ನು ಸವಾಲಾಗಿ ಸ್ವೀಕರಿಸಿ ಸಾಧಿಸಿ ವಿದ್ಯಾರ್ಥಿಗಳಿಗೆ ಡಾ| ಎಚ್‌.ಎಸ್‌. ಬಲ್ಲಾಳ್‌ ಕರೆ


Team Udayavani, Nov 25, 2022, 5:45 AM IST

tdy-39

ಉಡುಪಿ: ಪೋಸಾರ್‌ ಹರಿ ಶೆಣೈ ಮತ್ತು ಸಖು ಬಾೖ ಅವರ ಹೆಸರಿನಲ್ಲಿ ಪುತ್ರ ಡಾ| ಕೃಷ್ಣ ಶೆಣೈ ಅವರು ಎಂಜಿಎಂ ಕಾಲೇಜಿನಲ್ಲಿ ಸ್ಥಾಪಿಸಿರುವ ದತ್ತಿನಿಧಿಯ ಉದ್ಘಾಟನೆ ಹಾಗೂ ಇದಕ್ಕೆ ಸಂಬಂಧಿಸಿದ ಒಡಂಬಡಿಕೆಯ ವಿನಿಮಯವು ನೂತನ ರವೀಂದ್ರ ಮಂಟಪದಲ್ಲಿ ಗುರುವಾರ ಜರಗಿತು.

ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಅಧ್ಯಕ್ಷ, ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಅವರು ಮಾತನಾಡಿ, ಬಡತನವನ್ನು ಸವಾಲಾಗಿ ಸ್ವೀಕರಿಸಿ ಜೀವನದಲ್ಲಿ ಸಾಧನೆ ಮಾಡಬೇಕು. ಪಾಲಕರು ಮಕ್ಕಳಿಗೆ ನೀಡಬಹುದಾದ ದೊಡ್ಡ ಆಸ್ತಿ ಎಂದರೆ ಶಿಕ್ಷಣ. ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು ಎಂದರು.

ಮಣಿಪಾಲ ಫೈನಾನ್ಸ್‌ ಕಾರ್ಪೊರೇಶನ್‌ ಲಿ. ಎಂಡಿ ಟಿ. ನಾರಾಯಣ ಎಂ. ಪೈ ಅವರು ಮಾತನಾಡಿ, ಸಮಾಜಕ್ಕೆ ಡಾ| ಟಿಎಂಎ ಪೈ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಜತೆಗೆ ಡಾ| ಕೃಷ್ಣ ಶೆಣೈ ಅವರು ಕಾಲೇಜಿನ ಹಳೇ ವಿದ್ಯಾರ್ಥಿಯಾಗಿ ಮಾಡುತ್ತಿರುವ ಸೇವೆಯನ್ನು ಶ್ಲಾಘಿಸಿದರು.

ಉದಾತ್ತ ಗುರಿ ಹೊಂದಬೇಕು:

ದತ್ತಿನಿಧಿಯ ಪ್ರಾಯೋಜಕರೂ ಆದ ಸನ್‌ ವ್ಯಾಲಿ ಎಲೆಕ್ಟ್ರಾನಿಕ್ಸ್‌ ಅಧ್ಯಕ್ಷ ಮತ್ತು ಸಿಇಒ ಡಾ| ಕೃಷ್ಣ ಶೆಣೈ ಅವರು ಮಾತನಾಡಿ, ವಿದ್ಯಾರ್ಥಿಗಳು ಉದಾತ್ತ ಗುರಿ ಹೊಂದಿರಬೇಕು. ಆಗ ದೊಡ್ಡ ಸಾಧನೆ ಸಾಧ್ಯ. ಕಠಿನ ಪರಿಶ್ರಮದಿಂದ ಎಲ್ಲವನ್ನು ಸಾಧಿಸಲು ಸಾಧ್ಯವಿದೆ ಎಂದರು.

ಎಂಜಿಎಂ ಕಾಲೇಜು ಟ್ರಸ್ಟ್‌ ಅಧ್ಯಕ್ಷ ಟಿ. ಸತೀಶ್‌ ಪೈ, ಡಾ| ಕೃಷ್ಣ ಶೆಣೈ ಅವರ ಪತ್ನಿ ಲೀಲಾ ಕೆ. ಶೆಣೈ, ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ನ ಕಾರ್ಯದರ್ಶಿ ವರದರಾಯ ಪೈ, ಮಹಾಲಕ್ಷ್ಮೀ, ಪಿಯು ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಡಾ| ಕೃಷ್ಣ ಶೆಣೈ ಅವರ ಕುಟುಂಬದ ಸದಸ್ಯರು, ಸ್ನೇಹಿತರು ಉಪಸ್ಥಿತರಿದ್ದರು.

ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ ಸ್ವಾಗತಿಸಿದರು. ಕಂಪ್ಯೂಟರ್‌ ವಿಜ್ಞಾನ ವಿಭಾಗ ಮುಖ್ಯಸ್ಥ ಡಾ| ಎಂ. ವಿಶ್ವನಾಥ ಪೈ ವಂದಿಸಿದರು. ಇಂಗ್ಲಿಷ್‌ ವಿಭಾಗದ ಪ್ರಾಧ್ಯಾಪಕಿ ಸೌಮ್ಯಲತಾ ನಿರೂಪಿಸಿದರು. ಡಾ| ಕೃಷ್ಣ ಶೆಣೈ ಕುಟುಂಬದ ಸದಸ್ಯರು, ಪ್ರಾಧ್ಯಾಪಕರು, ಸ್ನೇಹಿತರು ಅವರ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.

ದತ್ತಿನಿಧಿ ವಿವರ :

ಡಾ| ಕೃಷ್ಣ ಶೆಣೈ ಅವರು ತಮ್ಮ ತಂದೆ-ತಾಯಿ ಹೆಸರಿನಲ್ಲಿ ಎಂಜಿಎಂ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಿರುವ ಪೋಸಾರ್‌ ಹರಿ ಶೆಣೈ ಮತ್ತು ಸಖು ಬಾೖ ದತ್ತಿನಿಧಿಯು 2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ.

ಅದರಂತೆ ಎಂಜಿಎಂ ಪಿಯುಸಿ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ವರ್ಷದ ಅಂತಿಮ ಪರೀಕ್ಷೆಯ ಟಾಪರ್‌ಗೆ ವಿಶ್ರಾಂತ ಪ್ರಾಂಶುಪಾಲ ಪ್ರೊ| ಶ್ರೀಶ ಆಚಾರ್ಯ ಅವರ ಹೆಸರಿನಲ್ಲಿ 25,000 ರೂ.ಗಳ ಚೆಕ್‌ ವಿತರಿಸಲಾಗುತ್ತದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅಂತಿಮ ಪರೀಕ್ಷೆಯ ಟಾಪರ್‌ಗೆ ವಿಶ್ರಾಂತ ಪ್ರಾಂಶುಪಾಲ ಪ್ರೊ| ಅಲ್ವಿನ್‌ ಡಿ’ಸೋಜಾ ಅವರ ಹೆಸರಿನಲ್ಲಿ 25,000 ಚೆಕ್‌ ನೀಡಲಾಗುತ್ತದೆ. ಹಾಗೆಯೇ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿ ಐಐಟಿಯಲ್ಲಿ ಎಂಜಿನಿಯರಿಂಗ್‌ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ವಿಶ್ರಾಂತ ಪ್ರಾಂಶುಪಾಲ ಪ್ರೊ| ಕೆ. ರಾಮದಾಸ್‌ ಅವರ ಹೆಸರಿನಲ್ಲಿ 25,000 ರೂ. ಚೆಕ್‌ ನೀಡುವ ಒಪ್ಪಂದದ ದಾಖಲಾತಿ ಪತ್ರವನ್ನು ಡಾ| ಕೃಷ್ಣ ಶೆಣೈ ಹಾಗೂ ಡಾ| ಎಚ್‌.ಎಸ್‌. ಬಲ್ಲಾಳ್‌ ಅವರು ವಿನಿಮಯ ಮಾಡಿಕೊಂಡರು.

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.