ಬೈಕ್ ಮತ್ತು ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Nov 23, 2019, 11:07 AM IST
ಕಾರ್ಕಳ, ನ. 23: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬಜಗೋಳಿ ಅಬ್ಬೆಂಬಲ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಮುಡಾರು ಗ್ರಾಮದ ಸತೀಶ್ ಆಚಾರ್ಯ (40) ಅಪಘಾತದಲ್ಲಿ ಮೃತಪಟ್ಟ ಸವಾರ.ಸತೀಶ್ ಮುಂಜಾನೆ ಮಾಳದ ಮಲ್ಲಾರಇನಲ್ಲಿ ತಮ್ಮ ವೆಲ್ಡಿಂಗ್ ಶಾಪ್ ಗೆ ಹೋಗುತ್ತಿದ್ದ ದಾರಿಯಲ್ಲಿ ನಿಂತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತ ಸ್ರಾವವಾಗಿ ಸತೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸತೀಶ್ ಅವರಿಗೆ ಕಳೆದ ಆರು ತಿಂಗಳ ಹಿಂದೆ ವಿವಾಹವಾಗಿತ್ತು. ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ಯಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ