ಕೃಷಿ ಯೋಜನೆ: ಫ‌ಲಾನುಭವಿಗಳ ಮಾಹಿತಿಗೆ ಸೂಚನೆ

ಯರ್ಲಪಾಡಿ ಗ್ರಾ.ಪಂ.: ಕೆಡಿಪಿ ಸಭೆ

Team Udayavani, Aug 2, 2019, 5:12 AM IST

ಅಜೆಕಾರು: ಯರ್ಲಪಾಡಿ ಗ್ರಾಮ ಪಂಚಾಯತ್‌ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು ಪಂಚಾಯತ್‌ ಅಧ್ಯಕ್ಷರಾದ ವಸಂತ್‌ ಕುಲಾಕ್‌ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.

ಕೃಷಿ ಇಲಾಖೆಯ ವಿವಿಧ ಯೋಜನೆಗಳಡಿ ಸರಕಾರದ ಸಬ್ಸಿಡಿ ಆಧಾರದಲ್ಲಿ ಕೃಷಿ ಸಲಕರಣೆ ಮತ್ತು ಯಂತ್ರೋಪಕರಣ ಯೋಜನೆಗೆ ಪಂಚಾಯತ್‌ನಿಂದ ಶಿಫಾರಸು ಮಾಡಿದ ಮೇಲೆ ಅಂತಿಮವಾಗಿ ಆಯ್ಕೆಗೊಂಡ ಅರ್ಹ ಫ‌ಲಾನುಭವಿಗಳ ಮಾಹಿತಿಯನ್ನು ಪಂಚಾಯತ್‌ ಆಡಳಿತಕ್ಕೆ ನೀಡುವಂತೆ ಪಂಚಾಯತ್‌ ಅಧ್ಯಕ್ಷ ವಸಂತ ಕುಲಾಲ್‌ ಸೂಚಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಕೃಷಿ ಅಧಿಕಾರಿಯವರು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದರು. ಬೆಳೆ ಸಮೀಕ್ಷೆ ಮಾಡುವಾಗ ರೈತರು ಸೂಕ್ತ ಮಾಹಿತಿ ನೀಡಿದಲ್ಲಿ ಬೆಳೆ ವಿಮೆ ಹಾಗೂ ಸರಕಾರದ ಇತರ ಸವಲತ್ತು ಪಡೆಯಲು ಸಹಕಾರಿಯಾಗುತ್ತದೆ ಎಂದರು.

ಪಂಚಾಯತ್‌ ವ್ಯಾಪ್ತಿಯಲ್ಲಿ ಇಂಡಸ್‌ ಟವರ್‌ ನಿರ್ಮಾಣವಾಗಿದ್ದು ಪಂ.ಗೆ ಯಾವುದೇ ತೆರಿಗೆ ಪಾವತಿ ಆಗಿಲ್ಲ. ಈ ನಿಟ್ಟಿನಲ್ಲಿ ಮೆಸ್ಕಾಂಗೆ ನೀಡಿರುವ ನೀರಾಪೇಕ್ಷಣೆಯನ್ನು ಪಂಚಾಯತ್‌ ಸಾಮಾನ್ಯ ಸಭೆ ರದ್ದುಗೊಳಿಸಿ ಸಂಪರ್ಕ ಕಡಿತಗೊಳಿಸಲು ನಿರ್ಣಯ ಕೈಗೊಂಡಿದೆ. ಈ ಬಗ್ಗೆ ಮೆಸ್ಕಾಂಗೂ ತಿಳಿಸಲಾಗಿದೆ ಆದರೆ ಮೆಸ್ಕಾಂ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಮೆಸ್ಕಾಂ ಅಧಿಕಾರಿಯವರನ್ನು ಪ್ರಶ್ನಿಸಲಾಯಿತು.

ಈ ಬಗ್ಗೆ ಮಾತನಾಡಿದ ಮೆಸ್ಕಾಂ ಅಧಿಕಾರಿ ಟವರ್‌ಗೆ ನೀಡಿರುವ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಕಡಿತಗೊಳಿಸಲು ಜಿಲ್ಲಾಧಿಕಾರಿಯವರ ಅನುಮತಿ ಅಗತ್ಯ ಎಂದು ಹೇಳಿದರು.

ಸಭೆಯಲ್ಲಿ ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕೆ, ಪಶುಸಂಗೋಪನೆ, ಕಂದಾಯ, ಗ್ರಂಥಾಲಯ, ಶಿಕ್ಷಣ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮಾಹಿತಿ ನೀಡಿದರು. ಪಿಡಿಒ ಪ್ರಮೀಳಾ ನಾಯಕ್‌ ಸದಸ್ಯ ಕಾರ್ಯದರ್ಶಿಯಾಗಿದ್ದರು. ಕಾರ್ಯದರ್ಶಿ ಸುನಂದಾ ಎಸ್‌. ಸ್ವಾಗತಿಸಿ ವಂದಿಸಿದರು. ಸಿಬಂದಿ
ಸಹಕರಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಉಡುಪಿ: ಕೋವಿಡ್‌- 19 ಸೋಂಕು ಲಕ್ಷಣ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಗುರುವಾರ ಮೂವರು ಐಸೋಲೇಶನ್‌ ವಾರ್ಡ್‌ಗೆ ದಾಖಲಾಗಿದ್ದಾರೆ. ಈ ಪೈಕಿ ಒರ್ವ ಮಹಿಳೆ ಹಾಗೂ...

  • ಉಡುಪಿ: ಇಡೀ ಜಗತ್ತನ್ನೇ ಸಂಕಷ್ಟಕ್ಕೆ ತಳ್ಳಿರುವ ಕೋವಿಡ್‌- 19 ನಿವಾರಣೆ ಅತ್ಯಂತ ಭಯಾನಕ ಸವಾಲಾಗಿದ್ದು, ಅದನ್ನು ಎದುರಿಸಲು ವಿಶ್ವಶಾಂತಿ ಧರ್ಮಸಂಸ್ಥೆಯ ಪ್ರತಿನಿಧಿಗಳು...

  • ಉಡುಪಿ/ಮಂಗಳೂರು: ಶ್ರೀರಾಮ ನವಮಿ ಮಹೋತ್ಸವವನ್ನು ಕೋವಿಡ್‌- 19 ಭೀತಿ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಗುರುವಾರ ಸರಳವಾಗಿ ಆಚರಿಸಲಾಯಿತು. ಪ್ರತಿವರ್ಷ ವಿಜೃಂಭಣೆಯಿಂದ...

  • ಕುಂದಾಪುರ: ಕುಂದಾಪುರ ಉಪವಿಭಾಗದ ಪೊಲೀಸ್‌ ಸಹಾಯಕ ಅಧೀಕ್ಷಕ ಹರಿರಾಮ್‌ ಶಂಕರ್‌ ಅವರ ಸೂಚನೆಯಂತೆ ಕುಂದಾಪುರ, ಬೈಂದೂರು ತಾಲೂಕಿನ ಠಾಣೆಗಳ ಪೊಲೀಸರು ಎಸ್‌ಸಿ, ಎಸ್‌ಟಿ...

  • ಉಡುಪಿ: ಕೋವಿಡ್ ಸೋಂಕಿನ ಶಂಕೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬುಧವಾರ ಆಸ್ಪತ್ರೆಗಳ ಐಸೊಲೇಶನ್‌ ವಾರ್ಡುಗಳಲ್ಲಿ 13 ಮಂದಿ ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆ ಹೊಂದಿರುವ...

ಹೊಸ ಸೇರ್ಪಡೆ