ಬ್ರಹ್ಮಾವರದಲ್ಲಿ ಇಂದಿನಿಂದ ಕೃಷಿ ಮೇಳ
ಅ. 19, 20 ಕೃಷಿ ಮೇಳ ; ವಿಚಾರ ಸಂಕಿರಣ ; ವಸ್ತು ಪ್ರದರ್ಶನ
Team Udayavani, Oct 19, 2019, 4:03 AM IST
ಬ್ರಹ್ಮಾವರ: ಇಲ್ಲಿನ ಕೃಷಿ ವಿಜ್ಞಾನ ಕೇಂದ್ರ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಅ. 19 ಮತ್ತು 20ರಂದು ಕೃಷಿ ಮೇಳ ಜರಗಲಿದೆ.
ಉದ್ಘಾಟನಾ ಸಮಾರಂಭ ಬಳಿಕ ಗೇರು ಮತ್ತು ಇತರ ತೋಟಗಾರಿಕೆ ಬೆಳೆಗಳ ವಿಚಾರ ಸಂಕಿರಣ ನಡೆಯಲಿದೆ. 2ನೇ ದಿನ ಲಾಭದಾಯಕ ಸಮಗ್ರ ಕೃಷಿ ಪದ್ಧತಿಗಳು, ನೆಲ ಜಲ ಸಂರಕ್ಷಣೆ, ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಮತ್ತು ಹೈ-ಟೆಕ್ ತೋಟಗಾರಿಕೆ ಎಂಬ ವಿಚಾರ ಸಂಕಿರಣಗಳನ್ನು ಏರ್ಪಡಿಸಲಾಗಿದೆ. ಇಲಾಖಾ ಮುಖ್ಯಸ್ಥರು, ಹಿರಿಯ ವಿಜ್ಞಾನಿಗಳು, ಪ್ರಗತಿಪರ ಕೃಷಿಕರು ವಿಷಯ ತಜ್ಞರಾಗಿ ಭಾಗವಹಿಸಿ ಮಾಹಿತಿಯನ್ನು ನೀಡಲಿದ್ದಾರೆ. ರೈತರು ಮುಕ್ತವಾಗಿ ಮುಖಾ ಮುಖೀ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಕೃಷಿ ಸಂಬಂ ಧಿತ ಸಮಸ್ಯೆಗಳಿಗೆ ಪರಿಹಾರಗಳನ್ನು ಪಡೆಯಲು ಅವಕಾಶವಿದೆ.
ಉತ್ತಮ ವೇದಿಕೆ
ನೂತನ ಕೃಷಿ ತಂತ್ರಜ್ಞಾನಗಳನ್ನು ನೋಡಿ ತಿಳಿಯುವುದು, ಚರ್ಚಾಗೋಷ್ಠಿಗಳ ಮುಖಾಂತರ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳುವುದು, ಕ್ಷೇತ್ರ ಭೇಟಿಗಳ ಮೂಲಕ ಬೆಳೆ ಪ್ರಾತ್ಯಕ್ಷಿಕೆಗಳನ್ನು ನೋಡಿ ಅಲ್ಲಿಯ ತಜ್ಞರೊಂದಿಗೆ ಸಮಾಲೋಚನೆ ನಡೆಸುವುದು, ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ವಿವಿಧ ಸಂಸ್ಥೆಗಳು ಅಭಿವೃದ್ಧಿ ಪಡಿಸಿದ ತಂತ್ರಜ್ಞಾನ ಹಾಗೂ ಉಪಕರಣಗಳ ಬಗೆಗಿನ ಸಂಪೂರ್ಣ ಮಾಹಿತಿ ಸ್ಥಳದಲ್ಲೇ ಒದಗಿಸುವ ಉತ್ತಮ ವೇದಿಕೆಯಾಗಿದೆ. ಕೃಷಿ ಸಂಬಂಧಿ ತ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸುವುದು ಉದ್ದೇಶವಾಗಿದೆ.
ಏನೇನಿದೆ?
ಮುಖ್ಯವಾಗಿ ವಿವಿಧ ಭತ್ತದ ತಳಿಗಳು ಮತ್ತು ಬೀಜೋತ್ಪಾದನೆ, ಭತ್ತದಲ್ಲಿ ಚಾಪೆ ನೇಜಿ ತಯಾರಿ ಮತ್ತು ಶ್ರೀ ಪದ್ಧತಿ ಬೇಸಾಯ, ತೆಂಗಿನಲ್ಲಿ ಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ, ತೋಟಗಾರಿಕಾ ಬೆಳೆಗಳಲ್ಲಿ ಕಸಿ ಕಟ್ಟುವಿಕೆ, ಛಾವಣಿ ಕೈತೋಟ ಮತ್ತು ಮಡಹಾಗಲ ಪ್ರಾತ್ಯಕ್ಷಿಕೆ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರೆಗೊಬ್ಬರ ಮತ್ತು ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನುಗಾರಿಕೆ, ಆಡು, ಮೊಲ, ಕೋಳಿ, ಹಂದಿ ಮತ್ತು ಬಾತುಕೋಳಿ ಸಾಕಾಣಿಕೆ ಪ್ರಾತ್ಯಕ್ಷಿಕೆ ಇದೆ. ಹೈಡ್ರೋಫೋನಿಕ್ಸ್ ವಿಧಾನದಲ್ಲಿ ಮೇವಿನ ಬೆಳೆ ಉತ್ಪಾದನೆ, ಸಿಒ 4 ಮತ್ತು 5 ಮೇವಿನ ಹುಲ್ಲಿನ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ, ಜೈವಿಕ ಅನಿಲ ಉತ್ಪಾದನಾ ಘಟಕಗಳ ವೀಕ್ಷಣೆ, ಮೌಲ್ಯಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ, ಆಲಂಕಾರಿಕ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಕೃಷಿ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಕೃಷಿಮೇಳದಲ್ಲಿ ಸುಮಾರು 200 ಮಳಿಗೆಗಳು ಇರಲಿವೆ.
ಮಾರ್ಗಸೂಚಿ
ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋ ಧನಾ ಕೇಂದ್ರವು ಬ್ರಹ್ಮಾವರ ಬಸ್ ನಿಲ್ದಾಣದಿಂದ ಕುಂಜಾಲು ರಸ್ತೆಯಲ್ಲಿ 2 ಕಿ.ಮೀ. ದೂರದಲ್ಲಿದೆ. ಬ್ರಹ್ಮಾವರ ಬಸ್ ನಿಲ್ದಾಣದಿಂದ ಸಂಶೋಧನಾ ಕೇಂದ್ರಕ್ಕೆ ವಾಹನ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ