ಬೆಂಗಳೂರು – ಮಂಗಳೂರು ಬಸ್ಸು ಸಂಚಾರ ಬಹುತೇಕ ರದ್ದು

ಚಾರ್ಮಾಡಿ, ಶಿರಾಡಿ, ಸಂಪಾಜೆ ಸಂಕಟ ; ಕರಾವಳಿ ಸಂಪರ್ಕ ಕಟ್

Team Udayavani, Aug 9, 2019, 10:51 PM IST

Road-Cut

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತವಾಗಿರುವ ದೃಶ್ಯ.

ಮಂಗಳೂರು: ಬೆಂಗಳೂರು ಮಹಾನಗರವನ್ನು ಕರಾವಳಿ ಭಾಗಗಳೊಂದಿಗೆ ಸಂಪರ್ಕಿಸುವ ಮೂರು ಪ್ರಮುಖ ಘಾಟಿ ರಸ್ತೆಗಳಾದ ಚಾರ್ಮಾಡಿ, ಶಿರಾಡಿ ಮತ್ತು ಸಂಪಾಜೆ ಘಾಟಿಗಳು ಸಂಪೂರ್ಣ ಬಂದ್ ಆಗಿವೆ. ಇದರಿಂದಾಗಿ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕರಾವಳಿಯ ಇನ್ನಿತರ ಕಡೆಗೆ ಇಂದು ಹೊರಡಬೇಕಾಗಿದ್ದ ಎಲ್ಲಾ ಬಸ್ ಸೇವೆಗಳು ರದ್ದುಗೊಂಡಿವೆ.

ಘಾಟಿ ರಸ್ತೆ ಭಾಗದಲ್ಲಿ ಅತಂತ್ರ ಸ್ಥಿತಿ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ರಾತ್ರಿ 10.30ರ ಬಳಿಕ ಕೆ.ಎಸ್.ಆರ್.ಟಿ.ಸಿ ಸಹಿತ ಎಲ್ಲಾ ಖಾಸಗಿ ಟ್ರಾವೆಲ್ಸ್ ಗಳು ತಮ್ಮ ಪ್ರಯಾಣವನ್ನು ಮೊಟಕುಗೊಳಿಸಿವೆ. ಇದರಿಂದಾಗಿ ಬೆಂಗಳೂರಿನಿಂದ ಕರಾವಳಿ ಕಡೆಗೆ ಹೊರಟಿದ್ದ ನೂರಾರು ಪ್ರಯಾಣಿಕರು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಉಡುಪಿ ಸಿದ್ಧಾಪುರ ಮೂಲಕ ಸಾಗುವ ಬಾಳೆಬರೆ ಘಾಟಿ ಸಂಚಾರಕ್ಕೆ ಮುಕ್ತವಾಗಿದ್ದು ಕರಾವಳಿಯಿಂದ ಬೆಂಗಳೂರು ಮತ್ತು ಘಟ್ಟ ಪ್ರದೇಶಗಳಿಗೆ ಹೋಗುವವರಿಗೆ ಈ ರಸ್ತೆಯ ಮೂಲಕ ಸಾಗಬಹುದಾಗಿದೆ. ಇತ್ತ ಮಣಿಪಾಲ, ಉಡುಪಿ ಭಾಗಗಳಿಂದ ಶಿರಾಡಿ ಮಾರ್ಗದ ಮೂಲಕ ಹೋಗಬೇಕಾಗಿದ್ದ KSRTC ಬಸ್ಸುಗಳೆಲ್ಲಾ ಮಂಗಳೂರಿನವರೆಗೆ ತೆರಳಿ ವಾಪಾಸಾಗಿವೆ.

ಬೆಂಗಳೂರಿನಿಂದ ಮಂಗಳೂರು ಕಡೆ ಬರಬೇಕಾಗಿದ್ದ ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗಬೇಕಾಗಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಶುಕ್ರವಾರ ರಾತ್ರಿ 10 ಗಂಟೆಗಳವರೆಗೆ ಮಾತ್ರ ಸೀಮಿತ ಸಂಖ್ಯೆಯಲ್ಲಿ ಪ್ರಯಾಣ ಬೆಳೆಸಿವೆ. ಆದರೆ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಬೀಳುತ್ತಿರುವ ಕಾರಣ ಯಾವುದೇ ಸಂದರ್ಭದಲ್ಲೂ ಸಂಚಾರ ವ್ಯತ್ಯಯಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗಬೇಕಾಗಿದ್ದ ಕೆ.ಎಸ್.ಆರ್.ಟಿ.ಸಿ.ಯ ರಾಜಹಂಸ ಮತ್ತು ಸುವರ್ಣ ಕರ್ನಾಟಕ ಸಾರಿಗೆ ಬಸ್ಸುಗಳನ್ನು ಸೀಮಿತ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿ 10 ಗಂಟೆಗಳವರೆಗೆ ಬಿಡಲಾಗಿದೆ. ಮತ್ತು ಪುತ್ತೂರು ಡಿಪೋದಿಂದ ನಾಲ್ಕು ಬಸ್ಸುಗಳನ್ನು ಬದಲೀ ಮಾರ್ಗದಲ್ಲಿ ಬೆಂಗಳೂರು ಮತ್ತು ಮೈಸೂರು ಕಡೆಗೆ ಬಿಡಲಾಗಿದೆ ಎಂಬ ಮಾಹಿತಿಯನ್ನು ಮಂಗಳೂರು ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಂ. ಅಶ್ರಫ್ ಅವರು ‘ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.