ಅಮಾಸೆಬೈಲು ಗ್ರಾಮಸಭೆ :ನೀರಿನ ಸಮಸ್ಯೆ ಸರಿಪಡಿಸಲು ಗ್ರಾಮಸ್ಥರ ಆಗ್ರಹ

Team Udayavani, Sep 10, 2017, 7:05 AM IST

0609side7-Amasebailu-GP.jpg

ಸಿದ್ದಾಪುರ: ಅಮಾಸೆಬೈಲು ಗ್ರಾ.ಪಂ.ನ 2017-18ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಅಮಾಸೆಬೈಲು ವ್ಯ.ಸೇ.ಸ. ಸಂಘದ ಸಭಾಂಗಣದಲ್ಲಿ ಗ್ರಾ. ಪಂ. ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಗ್ರಾಮ ಸಭೆಯ ಆರಂಭವಾಗುತ್ತಿದ್ದಂತೆ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ, ಸಮರ್ಪಕವಾಗಿ ಮಾಡದ ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಯ ಬಗ್ಗೆ ಉತ್ತರ ನೀಡುವಂತೆ  ಆಗ್ರಹಿಸಿದಾಗ, ಚರ್ಚೆಗೆ ಗ್ರಾಸವಾಯಿತು. ಮಾರ್ಗದರ್ಶಿ ಅಧಿಕಾರಿ ಮಧ್ಯ ಪ್ರವೇಶಿಸಿ, ಗ್ರಾಮಸ್ಥರ ನಡುವೆ ಚರ್ಚೆಗಳು ಬೇಡ. ಪ್ರಶ್ನೆಗಳಿಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡಬೇಕು ಎಂದು ಹೇಳಿದಾಗ ಸಭೆಯು ಮುಂದುವರಿಯಿತು.

ವಿಧವೆಯರು ಹಾಗೂ ವಿಕಲಚೇತನರಿಗೆ ಸರಕಾರದಿಂದ ಮಂಜೂರಾಗಿ ಬಂದ ಮನೆಗಳು ಗ್ರಾ. ಪಂ. ನಿರ್ಲಕ್ಷ್ಯದಿಂದ ವಾಪಾಸಾದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ, ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು ನಮ್ಮಿಂದ ತಪ್ಪಾಗಿದೆ ಎಂದು ಕ್ಷÒಮೆಯಾಚಿಸಿದರು. ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದರು. ಸರಕಾರಿ ಜಾಗದಲ್ಲಿ ಬಾರ್‌ ನಡೆಸುತ್ತಿರುವ ಮತ್ತು ಎಲ್ಲ ಬಾರ್‌ಗಳಲ್ಲಿ ಮದ್ಯಕ್ಕೆ ಮೂಲ ಬೆಲೆಗಿಂತ ಹೆಚ್ಚು ಹಣ ಪಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ಆಕ್ಷೇಪ  ವ್ಯಕ್ತಪಡಿಸಿದರು. ಇದಕ್ಕೆ ಅಬಕಾರಿ ವೃತ್ತ ನಿರೀಕ್ಷಕ ಮಂಜುನಾಥ ಅವರು ಮಾತನಾಡಿ, ಮೂಲ ಬೆಲೆಗಿಂತ ಹೆಚ್ಚಿನ ದರ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ಅಂತಹ ಬಾರ್‌ಗಳ ಬಗ್ಗೆ ದೂರು ನೀಡಿದಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

ಚರ್ಚೆ: ಗ್ರಾ. ಪಂ. ಸರಿಯಾಗಿ ನಿರ್ಣಯಿಸದ ಪರಿಣಾಮ ಗ್ರಾಮಸ್ಥರಿಗೆ ಹಕ್ಕು ಪತ್ರ ಸಿಗದಿರುವ ಬಗ್ಗೆ, ಕಾಡುಪ್ರಾಣಿಗಳ ಹಾವಳಿ, ರೈತರಿಗೆ ಬೆಳೆ ಪರಿಹಾರ, ತೊಂಬಟ್ಟುವಿನಲ್ಲಿ ಆಶಾ ಕಾರ್ಯಕರ್ತೆಯರು ಯಾರು?. ಅವರು ಸರಿಯಾಗಿ ಕರ್ತವ್ಯ ನಿರ್ವಹಿಸದಿರುವ ಬಗ್ಗೆ, ಕೆಳಾಸುಂಕ ಪರಿಸರದ ಎಸ್‌ಟಿ ಕಾಲೋನಿ ರಸ್ತೆ ಸಂಪರ್ಕ ಇಲ್ಲದಿರುವುದು ಮುಂತಾದ ವಿಚಾರಗಳ ಬಗ್ಗೆ ಚರ್ಚೆಗಳು ನಡೆದವು.

ಗ್ರಾಮಸ್ಥರ ಪರವಾಗಿ ತಿಮ್ಮಪ್ಪ ಪೂಜಾರಿ ಮಂಡಾಡಿ, ಸದಾನಂದ ಶೆಟ್ಟಿ ರಟ್ಟಾಡಿ, ತಮ್ಮಯ್ಯ ನಾಯ್ಕ ಜಡ್ಡಿನಗದ್ದೆ, ಸೂರ್ಯನಾರಾಯಣ ಐತಾಳ್‌, ಶೇಖರ ಪೂಜಾರಿ ಅಮಾಸೆಬೈಲು, ಗಣಪತಿ ಪೂಜಾರಿ ತೊಂಬಟ್ಟು, ಟಿ. ಚಂದ್ರಶೇಖರ ಶೆಟ್ಟಿ, ಚಂದ್ರ ಶೆಟ್ಟಿ ಕೆಲಾ, ಸೀನಾ ನಾಯ್ಕ, ಜಯಪ್ರಕಾಶ ಶೆಟ್ಟಿ ರಟ್ಟಾಡಿ, ಪ್ರಭಾಕರ ನಾಯ್ಕ ಕೆಳಾಸುಂಕ, ಗುರುಪ್ರಸಾದ ಶೆಟ್ಟಿ ತೊಂಬಟ್ಟು ಮೊದಲಾದವರು ಗ್ರಾಮದ ಸಮಸ್ಯೆಯನ್ನು ಸಭೆಯ ಗಮನಕ್ಕೆ ತಂದರು.

ಕುಂದಾಪುರ ಸಹಾಯಕ ಕೃಷಿ ಅಧಿಕಾರಿ ವಿಟuಲ ರಾವ್‌ ಮಾರ್ಗದರ್ಶಿ ಅಧಿಕಾರಿ ಭಾಗವಹಿಸಿದರು.ಗ್ರಾ. ಪಂ. ಸದಸ್ಯರಾದ ಆರ್‌. ರಾಮಣ್ಣ ಹೆಗ್ಡೆ, ವೈ. ಕುಶಲ ತೋಳಾರ್‌, ಬಾಲಕೃಷ್ಣ ಶೆಟ್ಟಿ, ಗಣೇಶ್‌ ಶೆಟ್ಟಿ, ಕೃಷ್ಣ ಪೂಜಾರಿ ಕೊೃಲಾಡಿ, ಸಂದೀಪ ನಾಯ್ಕ, ಪ್ರಸನ್ನ ಶೆಟ್ಟಿ, ಶ್ರೀನಿವಾಸ ಪೂಜಾರಿ ತೊಂಬಟ್ಟು, ಬಾಬಿ, ಗಿರೀಶ್‌ ಪೂಜಾರಿ, ಕಸ್ತೂರಿ ಶೆಟ್ಟಿ, ಶೀಲಾವತಿ, ಶಾರದಾ, ಸುಮಂಗಲಾ, ವಸಂತಿ, ಜ್ಯೋತಿ, ಎಡಲಿನ್‌ ರೋಸಿ, ಉಪ ವಲಯಾರಣ್ಯಾಧಿಕಾರಿ ವೀರಣ್ಣ, ಮೆಸ್ಕಾಂ ಜೆಇ ಮಂಜುನಾಥ ಶ್ಯಾನುಭಾಗ್‌, ಪಂಚಾಯತ್‌ರಾಜ್‌ ಎಂಜಿನಿಯರ್‌ ಶ್ರೀಧರ ಪಾಲೇಕರ್‌, ಪಶು ವೈದ್ಯಾಧಿಕಾರಿ ಡಾ|  ರಾಕೇಶ್‌ ಎಂ., ವೈದ್ಯಾಧಿಕಾರಿ ಡಾ| ಹೇಮಲತಾ, ವನ್ಯಜೀವಿ ವಿಭಾಗದ ವಿನಯ ಜಿ. ನಾಯ್ಕ, ಪ್ರವೀಣ್‌ಕುಮಾರ್‌, ಅಂಗನವಾಡಿ ಮೇಲ್ವಿಚಾರಕಿ ಯೋಗಿನಿ ನಾಯಕ್‌, ಅಬಕಾರಿ ಇನ್‌ಸ್ಪೆಕ್ಟರ್‌ ಮಂಜುನಾಥ ಮೊದಲಾದವರು ಉಪಸ್ಥಿತರಿದ್ದರು.ಪಿಡಿಒ ಭಾಸ್ಕರ ಶೆಟ್ಟಿ ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.