ಜ್ಞಾನದ ಕ್ರಾಂತಿಯಾಗಲಿ: ಅನಂತ ಕುಮಾರ್‌ ಹೆಗಡೆ

Team Udayavani, Dec 4, 2018, 2:20 AM IST

ananth-kumar-3-12.jpg

ಸಿದ್ದಾಪುರ: ಭಾರತೀಯ ಮಣ್ಣಿನಲ್ಲಿ ಹುದುಗಿರುವ ಪರಂಪರೆಯನ್ನು ಹೊರ ಪ್ರಪಂಚಕ್ಕೆ ವೈಜ್ಞಾನಿಕವಾಗಿ ತೆರದುಕೊಳ್ಳವ ಹಾಗೇ ಕೆಲಸವಾಗಬೇಕು ಎಂದು ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಅವರು ಹೇಳಿದರು. ಅವರು ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್‌ ಹಾಗೂ ಯುವ ವಿಪ್ರವೇದಿಕೆ ಜಂಟಿ ಆಶ್ರಯದಲ್ಲಿ ಡಿ.2ರಂದು ಸಿದ್ದಾಪುರ ಶ್ರೀ ಅನಂತಪದ್ಮನಾಭ ಸಭಾಗೃಹದಲ್ಲಿ ನಡೆದ ಯುವ ವಿಪ್ರೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ಭಾರತೀಯ ಮಣ್ಣಿನಲ್ಲಿರುವ ಸತ್ವ, ಸಿದ್ಧಾಂತ, ಧರ್ಮ, ನೀತಿ, ಸಂಸ್ಕೃತಿಯನ್ನು ಪ್ರಪಂಚಕ್ಕೆ ಪರಿಚಯಿಸುವ ಕೆಲಸ ಈಗ ಆಗುತ್ತಿದೆ. ಪ್ರಪಂಚಕ್ಕೆ ಬದುಕಿನ ಸಿದ್ಧಾಂತ, ತತ್ವವನ್ನು ಹೇಳುವ ತಾಕತ್ತು ಭಾರತಕ್ಕೆ ಇದೆ. ಅದನ್ನು ಹೇಳುವ ಕೆಲಸವಾಗಬೇಕಾದರೆ ಜ್ಞಾನದ ಕ್ರಾಂತಿಯಾಗಬೇಕೆಂದು ತಿಳಿಸಿದರು.

ಹಿಂದೂ ಧರ್ಮ, ಸಂಸ್ಕೃತಿ ಹಾಗೂ ಪರಂಪರೆಯನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ವಿದೇಶೀಯರು ಆಳಿದಾಗ ಅವರು ನಂಬಿಕೆಯ ಬಗ್ಗೆ ಅವಹೇಳನ ಮಾಡಿಲ್ಲ. ಆದರೆ ಸ್ವಾತಂತ್ರ್ಯದ ಅನಂತರದ ದಿನಗಳಿಂದ ನಂಬಿಕೆಯ ಅವಹೇಳನ ನಡೆಯುತ್ತಿದೆ. ಎಷ್ಟೆ ಅವಹೇಳನಗಳು ನಡೆದರೂ ನಮ್ಮ ದೇಶದ ಭಾಷೆ, ಸಂಸ್ಕೃತಿ ನಾಶಮಾಡಲು ಸಾಧ್ಯವಾಗಿಲ್ಲ. ಅದು ಇನ್ನಷ್ಟು ಗಟ್ಟಿಯಾಗಿ ಸಾಗುತ್ತಿದೆ ಎಂದರು. ಕುಂದಾಪುರ ತಾಲೂಕು ಯುವ ವಿಪ್ರವೇದಿಕೆ ಅಧ್ಯಕ್ಷ ವಿಶ್ವಾಸ್‌ ಕುಂಜತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೃಷ್ಣಾನಂದ ಚಾತ್ರ, ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್‌ ಅಧ್ಯಕ್ಷ ರಾಘವೇಂದ್ರ ಅಡಿಗ, ಮಹಿಳಾ ವೇದಿಕೆ ಅಧ್ಯಕ್ಷೆ ಪವಿತ್ರಾ ಆರ್‌. ಅಡಿಗ, ಸಿದ್ದಾಪುರ ವಲಯಾಧ್ಯಕ್ಷ ರಂಗನಾಥ ಉಡುಪ, ಯುವ ವಿಪ್ರ ವೇದಿಕೆ ಸಿದ್ದಾಪುರ ವಲಯಾಧ್ಯಕ್ಷ ವಸಿಷ್ಟ ಮಂಜ, ತಾಲೂಕು ವಿಪ್ರ ಕಾರ್ಯದರ್ಶಿ ವಿನಾಯಕ ಅಡಿಗ ಗುಡ್ಡಟ್ಟು ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಎನ್‌. ಸತೀಶ ಅಡಿಗ ಸ್ವಾಗತಿಸಿದರು. ಪಂಚಾಂಗಕರ್ತ ವಾಸುದೇವ ಜೋಯಿಸ್‌ ತಟೋಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ವೆಂಕಟರಮಣ ಭಟ್‌ ಕಾರ್ಯಕ್ರಮ ನಿರೂಪಿಸಿದರು. ನಾಗೇಶ್‌ ಭಟ್‌ ಯಳಂತೂರು ವಂದಿಸಿದರು.

ಟಾಪ್ ನ್ಯೂಸ್

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

ಐದರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 10 ವರ್ಷ ಜೈಲು

Untitled-1

ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ದೃಢಕಲಶ ಸಂಪನ್ನ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.