ಅಂಗನವಾಡಿ ನೌಕರರ ಮುಷ್ಕರ : ಗ್ರಾಮೀಣ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ

Team Udayavani, Jul 11, 2019, 5:12 AM IST

ತೆಕ್ಕಟ್ಟೆ : ಅಂಗನವಾಡಿ ಕೇಂದ್ರದಲ್ಲಿ ಆಂಗ್ಲ ಮಾಧ್ಯಮ ಶಾಲಾ ಪೂರ್ವ ಶಿಕ್ಷಣ (ಎಲ್ಕೆಜಿ,ಯುಕೆಜಿ)ಕ್ಕೆ ಒತ್ತಾಯಿಸಿ ಜು.10 ರಂದು ರಾಜ್ಯವ್ಯಾಪಿ ಅಂಗನವಾಡಿ ಬಂದ್‌ ಮಾಡಿ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಮುಷ್ಕರಕ್ಕೆ ಕರೆ ನೀಡಿದರಾದರೂ ಗ್ರಾಮೀಣ ಭಾಗದ ಕುಂಭಾಸಿ, ಕೊರವಡಿ, ತೆಕ್ಕಟ್ಟೆ , ಮಾಲಾಡಿ, ಮಲ್ಯಾಡಿ , ಅಂಗನವಾಡಿ ಕೇಂದ್ರಗಳಲ್ಲಿ ಮುಷ್ಕರಕ್ಕೆ ಬೆಂಬಲ ನೀಡದೆ ಎಂದಿನಂತೆ ಕೇಂದ್ರಗಳು ತೆರೆದಿದ್ದು, ಪುಟಾಣಿಗಳು ಹಾಜರಿರುವ ದೃಶ್ಯ ಕಂಡು ಬಂದಿದೆ.

ಮುಷ್ಕರಕ್ಕೆ ಬೆಂಬಲ

ಬೇಳೂರು ಹಾಗೂ ಕೊರ್ಗಿ ಗ್ರಾ.ಪಂ. ವ್ಯಾಪ್ತಿಯ ಕೊರ್ಗಿ, ಹೊಸಮಠ, ಬೇಳೂರು, ಬೇಳೂರು ದೇವಸ್ಥಾನಬೆಟ್ಟು, ಬಡಾಬೆಟ್ಟು, ಗುಳ್ಳಾಡಿ, ಮೊಗೆಬೆಟ್ಟು ಭಾಗದಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮುಷ್ಕರದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಬೀಗ ಹಾಕಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಮಿಶ್ರ ಪ್ರತಿಕ್ರಿಯೆಗೆ ಕಾರಣ

ಕುಂದಾಪುರ ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸಂಘಟನೆಗಳು ಎರಡೆರಡು ಇರುವ ಕಾರಣದಿಂದಾಗಿ ತಾಲೂಕಿನ ಕೆಲವು ಭಾಗಗಳಲ್ಲಿ ಮುಷ್ಕರದ ಬಗ್ಗೆ ಮಾಹಿತಿಯೇ ಇಲ್ಲ ಎನ್ನುವ ಮಾತು ಕೇಳಿ ಬಂತು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕುಂದಾಪುರ: ರಾಜ್ಯದ ನಿರ್ವಸಿತ ಮೀನುಗಾರರಿಗೆ ಆಶ್ರಯ ಕಲ್ಪಿಸುವ ಮತ್ಸ್ಯಾಶ್ರಯ ಯೋಜನೆಯನ್ನು ಮೀನುಗಾರರ ಬೇಡಿಕೆಯಂತೆ ರಾಜೀವ್‌ ಗಾಂಧಿ ವಸತಿ ನಿಗಮದ ಬದಲು ಮತ್ತೆ...

  • ಮುಖ್ಯವಾಹಿನಿ ರಾಜಕೀಯ ಪಕ್ಷಗಳಿಗೆ ಆಟದ ಮೈದಾನವಾಗುತ್ತಿರುವ ವಿದ್ಯಾರ್ಥಿಒಕ್ಕೂಟಗಳನ್ನು ಮುಂದಿನ 10 ವರ್ಷಗಳವರೆಗೆ ನಿಷೇಧಿಸಬೇಕು. ಈ ವಿದ್ಯಾರ್ಥಿ ಒಕ್ಕೂಟಗಳಿಂದಾಗಿ...

  • ನಗದು ರಹಿತ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುವರ ಪ್ರಮಾಣ ಹೆಚ್ಚುತ್ತಿದ್ದು,ಹಣ ವರ್ಗಾವಣೆ, ಬಿಲ್‌ ಪಾವತಿ ಗಳನ್ನು ಕಾರ್ಡ್‌ ಅಥವಾ ಆ್ಯಪ್‌ಗ್ಳ ಮೂಲಕ ಮಾಡುತ್ತಿದ್ದಾರೆ....

  • ಯಾವುದೇ ಚಿತ್ರರಂಗವಿರಲಿ, ಸಾಮಾನ್ಯವಾಗಿ ಸ್ಟಾರ್‌ ನಟರು ಅಲ್ಲಿನ ಹಿರಿಯ ನಿರ್ದೇಶಕರು, ಅದರಲ್ಲೂ ಸಾಕಷ್ಟು ಹಿಟ್‌ ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯವಾದ...

  • ದರ್ಶನ್‌ ನಾಯಕರಾಗಿ ನಟಿಸಿರುವ "ಒಡೆಯ' ಚಿತ್ರದ ಹಾಡು, ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಡುಗಡೆಯ ಹಂತದಲ್ಲಿರುವ "ಒಡೆಯ' ಬಗ್ಗೆ...