ಕಟಾವಿಗೆ ಮೊದಲೇ ಬೆಂಬಲ ಬೆಲೆ ಘೋಷಿಸಿ


Team Udayavani, Dec 15, 2019, 4:01 AM IST

zx-40

ಕಲಸಿಗೆಗೆ ಭತ್ತವನ್ನು ಹಾಕುವ ಮೂಲಕ ಸಮ್ಮೇಳನವನ್ನು ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಉದ್ಘಾಟಿಸಿದರು.

ಕುಂದಾಪುರ: ಬೆಳೆಗಳಿಗೆ ವೈಜ್ಞಾನಿಕ ರೀತಿಯಲ್ಲಿ ಲಾಭದಾಯಕ ಬೆಲೆ ನಿಗದಿಪಡಿಸಿ, ಕಟಾವಿಗೆ ಮೊದಲೇ ಬೆಂಬಲ ಬೆಲೆ ಘೋಷಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಬೇಕು ಎನ್ನುವ ನಿರ್ಣಯವನ್ನು ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ರೈತ ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು.

ಭಾರತೀಯ ಕಿಸಾನ್‌ ಸಂಘ ಉಡುಪಿ ಜಿಲ್ಲಾ ಸಮಿತಿಯು ಕುಂದಾಪುರದ ಶ್ರೀ ವ್ಯಾಸರಾಜ ಕಲಾ ಮಂದಿರದಲ್ಲಿ ಆಯೋಜಿಸಿದ ಜಿಲ್ಲಾ ರೈತ ಸಮ್ಮೇಳನದಲ್ಲಿ ಕೃಷಿಕರ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಸಲುವಾಗಿ ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

ಉದ್ಘಾಟನೆ
ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಉದ್ಘಾಟಿಸಿದರು. ಕಿಸಾನ್‌ ಸಂಘದ ರಾಷ್ಟ್ರೀಯ ಅಧ್ಯಕ್ಷ ಐ.ಎನ್‌. ಬಸವೇ ಗೌಡ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ್‌ ಹೆಗ್ಡೆ, ಕಾಸರಗೋಡಿನ ಸಿಪಿಸಿಆರ್‌ಐ ವಿಜ್ಞಾನಿ ಡಾ| ರವಿ ಭಟ್‌, ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ, ರಾಜ್ಯ ಕಾರ್ಯಕಾರಣಿ ಸದಸ್ಯ ಬಿ.ವಿ. ಪೂಜಾರಿ, ಜಿಲ್ಲಾ ಹಾಪ್‌ಕಾಮ್ಸ್‌ ಮಂಗಳೂರಿನ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ, ಜಿಲ್ಲಾಧ್ಯಕ್ಷ ನವೀನ್‌ಚಂದ್ರ ಜೈನ್‌ ನಿಟ್ಟೆ, ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಜಪ್ತಿ, ತಾ| ಅಧ್ಯಕ್ಷ ಸೀತಾರಾಮ ಗಾಣಿಗ ಹಾಲಾಡಿ ಉಪಸ್ಥಿತರಿದ್ದರು.

ಸಮ್ಮೇಳನದ ಪ್ರಮುಖ ನಿರ್ಣಯಗಳು
 ಸಾವಯವ ಕೃಷಿಗೆ ಪ್ರೋತ್ಸಾಹದೊಂದಿಗೆ ಪಾರಂಪರಿಕ ತಳಿ ಸಂರಕ್ಷಣೆಗೆ ಆದ್ಯತೆ
 ಡಾ| ಕಸ್ತೂರಿ ರಂಗನ್‌ ವರದಿ ಜಾರಿಗೂ ಮುನ್ನ ಜನಜೀವನಕ್ಕೆ ಮಾರಕವಾದ “ಬಫರ್‌ ಜೋನ್‌’ ಮತ್ತಿತರ ಅಂಶಗಳನ್ನು ಕೈಬಿಡಬೇಕು. ಪರಿಸರ ಸೂಕ್ಷ್ಮ ಪ್ರದೇಶಗಳ ಭೌತಿಕ ಸಮೀಕ್ಷೆ ನಡೆಸಿ, ನಕ್ಷೆ ತಯಾರಿಸಬೇಕು.
 ಪರಿಸರ – ಪಶ್ಚಿಮ ಘಟ್ಟಕ್ಕೆ ಮಾರಕ ಬೃಹತ್‌ ಕೈಗಾರಿಕೆಗಳಿಗೆ ಉಡುಪಿಯಲ್ಲಿ ಅವಕಾಶ ನೀಡಬಾರದು.
 ಜಿಲ್ಲೆಗೆ ಪ್ರತ್ಯೇಕ ಕೇಂದ್ರ ಸಹಕಾರಿ ಬ್ಯಾಂಕ್‌, ಹಾಪ್‌ಕಾಮ್ಸ್‌ ಸ್ಥಾಪನೆ.
 ಪ್ರಾಕೃತಿಕ ಜಲ ಸಂರಕ್ಷಣೆಗೆ ಒತ್ತು ನೀಡಬೇಕು.
 ಮರಳು ಗಣಿಗಾರಿಕೆಗೆ ಸಮರ್ಪಕ ನೀತಿ ರೂಪಿಸಿ ತೊಂದರೆಯನ್ನು ಪರಿಹರಿಸಬೇಕು.
 ವಾರಾಹಿ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕು.
 ಪ್ರಾಕೃತಿಕ ವಿಕೋಪಕ್ಕೊಳಗಾಗುವ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು.
 ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲಿನ 110 ಎಕರೆ ಭೂಮಿಯನ್ನು ಕೃಷಿ ಸಂಬಂಧಿತಾ ಸಂಸ್ಕರಣಾ ಘಟಕಗಳಿಗೆ ಮಾತ್ರ ಬಳಸಬೇಕು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.