ಎಪಿಎಲ್‌ಗೆ ಸಿಗುತ್ತಿಲ್ಲ ಅಕ್ಕಿ; 3 ತಿಂಗಳುಗಳಿಂದ ಅವ್ಯವಸ್ಥೆ ; ಶೀಘ್ರ ಸರಿಪಡಿಸುವ ಭರವಸೆ

Team Udayavani, Dec 8, 2022, 7:10 AM IST

ಎಪಿಎಲ್‌ಗೆ ಸಿಗುತ್ತಿಲ್ಲ ಅಕ್ಕಿ; 3 ತಿಂಗಳುಗಳಿಂದ ಅವ್ಯವಸ್ಥೆ ; ಶೀಘ್ರ ಸರಿಪಡಿಸುವ ಭರವಸೆ

ಉಡುಪಿ: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಎಪಿಎಲ್‌ ಕಾರ್ಡ್‌ದಾರರಿಗೆ ನಿರ್ದಿಷ್ಟ ದರ ಪಡೆದು ನೀಡಲಾಗುತ್ತಿದ್ದ ಅಕ್ಕಿ ಎರಡು ಮೂರು ತಿಂಗಳುಗಳಿಂದ ವಿತರಣೆಯಾಗುತ್ತಿಲ್ಲ.

ಏಕವ್ಯಕ್ತಿ ಬಿಪಿಎಲ್‌ ಕಾರ್ಡ್‌ಗೆ ತಿಂಗಳಿಗೆ 5 ಕೆ.ಜಿ. ಹಾಗೂ ಎರಡು ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿರುವ ಕಾರ್ಡ್‌ಗೆ ಪ್ರತಿ ತಿಂಗ ಳಿಗೆ 10 ಕೆ.ಜಿ. ಅಕ್ಕಿ ಯನ್ನು ಕೆ.ಜಿ.ಗೆ 15 ರೂ.ಗಳಂತೆ ನೀಡಲಾಗುತ್ತದೆ. ಆದರೆ ಸೆಪ್ಟಂಬರ್‌ನಿಂದ ಸರಿಯಾಗಿ ಅಕ್ಕಿ ವಿತರಣೆಯಾ ಗುತ್ತಿಲ್ಲ.

ಎಪಿಎಲ್‌ ಕಾರ್ಡ್‌ಗೆ ಅಕ್ಕಿ ಸ್ಥಗಿತವಾಗಿರುವ ಬಗ್ಗೆ ನ್ಯಾಯ ಬೆಲೆ ಅಂಗಡಿಯಿಂದ ಸರಿಯಾದ ಮಾಹಿತಿಯೂ ಸಿಗುತ್ತಿಲ್ಲ. ಮುಂದಿನ ತಿಂಗಳು ಒಟ್ಟಿಗೆ ಬರ ಲಿದೆ ಎಂಬ ಉತ್ತರವೂ ಸಿಗುತ್ತಿದೆ.

ಉಡುಪಿಯಲ್ಲಿ 1,12,931 ಹಾಗೂ ದ.ಕ.ದಲ್ಲಿ 1,71,699 ಎಪಿಎಲ್‌ ಕಾರ್ಡ್‌ದಾರರಿದ್ದಾರೆ. ಇದರಲ್ಲಿ ಶೇ. 40 ರಿಂದ ಶೇ.60ರಷ್ಟು ಕಾರ್ಡ್‌ದಾರರು ತಿಂಗಳ ರೇಷನ್‌ ಪಡೆಯುತ್ತಿದ್ದಾರೆ. ಇಲಾಖೆಯ ಸಮಸ್ಯೆಯಿಂದ ಅವರಿಗೀಗ ಅಕ್ಕಿ ಸಿಗದಂತಾಗಿದೆ.

ಸಮಸ್ಯೆಯೇನು?
ಕೇಂದ್ರ ಸರಕಾರ ಈ ಹಿಂದೆ ಬಿಪಿಎಲ್‌ ಹಾಗೂ ಎಪಿಎಲ್‌ ಕಾರ್ಡ್‌ದಾರರಿಗೆ ಒಟ್ಟಿಗೆ ಕೇಂದ್ರ ಆಹಾರ ನಿಗಮದ ಮೂಲಕ ಅಕ್ಕಿ ಪೂರೈಸು ತ್ತಿತ್ತು. ಈಗ ಬಿಪಿಎಲ್‌ ಕಾರ್ಡ್‌ದಾರರಿಂದ ಎರಡು ಒಟಿಪಿ ಪಡೆದುಕೊಂಡು ಕೇಂದ್ರ ಹಾಗೂ ರಾಜ್ಯ ಸರಕಾರದ ಪಾಲನ್ನು ಪ್ರತ್ಯೇಕವಾಗಿ ನೀಡಲಾಗುತ್ತಿದೆ. ಹೀಗಾಗಿ ಕೇಂದ್ರದಿಂದ ಬಿಪಿಎಲ್‌ ಕಾರ್ಡ್‌ಗೆ ಎಷ್ಟು ಅಕ್ಕಿ ನೀಡಲಾಗುತ್ತಿದೆಯೋ ಅಷ್ಟನ್ನು ಮಾತ್ರ ಒದಗಿಸಲಾಗುತ್ತಿದೆ. ಎಪಿಎಲ್‌ ಕಾರ್ಡ್‌ದಾರರಿಗೆ ರಾಜ್ಯ ಸರಕಾರ ಪ್ರತ್ಯೇಕವಾಗಿ ಖರೀದಿಸಬೇಕಾಗಿದೆ. ಹೀಗಾಗಿ ಎರಡು ಮೂರು ತಿಂಗಳುಗಳಿಂದ ಹಂಚಿಕೆಯಲ್ಲಿ ವಿಳಂಬವಾಗುತ್ತಿದೆ ಎಂದು ಆಹಾರ, ನಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆಯ ಮೂಲಗಳು ತಿಳಿಸಿವೆ.

ಭತ್ತ ನೀಡಲು ನೋಂದಣಿ
ಭತ್ತ ಖರೀದಿ ಕೇಂದ್ರದಲ್ಲೂ
ರೈತರ ನೋಂದಣಿ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ಡಿ.6ರ ಅಂತ್ಯಕ್ಕೆ 37 ರೈತರು ನೋಂದಣಿ ಮಾಡಿಕೊಂಡಿದ್ದು, ಸುಮಾರು 940 ಕ್ವಿಂಟಾಲ್‌ ಭತ್ತ ಸಿಗುವ ನಿರೀಕ್ಷೆ ಯಿದೆ. ದಕ್ಷಿಣ ಕನ್ನಡದಲ್ಲಿ ಕೇವಲ 4 ರೈತರು ಮಾತ್ರ ನೋಂದಣಿ ಮಾಡಿ ಕೊಂಡಿದ್ದು, ಸುಮಾರು 80 ಕ್ವಿಂಟಾಲ್‌ ಭತ್ತ ಸಿಗುವ ಸಾಧ್ಯತೆಯಿದೆ. ರೈತರು ಭತ್ತವನ್ನು ಬೆಂಬಲ ಬೆಲೆ ಯಡಿ ನೀಡಲು ನೋಂದಣಿ ಮಾಡಿಸಿಕೊಳ್ಳು ವುದು ಅಗತ್ಯ ಎಂದು ಕರ್ನಾಟಕ ಆಹಾರ, ನಾಗರಿಕ ಸರಬ ರಾಜು ನಿಗಮದ ಉಡುಪಿ, ದ.ಕ. ಜಿಲ್ಲಾ ವ್ಯವಸ್ಥಾಪಕಿ ಅನುರಾಧಾ ತಿಳಿಸಿದರು.

ಎಪಿಎಲ್‌ ಕಾರ್ಡ್‌ ಮಾಹಿತಿ

ತಾಲೂಕು ಕಾರ್ಡ್‌
ಬೆಳ್ತಂಗಡಿ 15,346
ಬಂಟ್ವಾಳ 22,943
ಮಂಗಳೂರು 91,015
ಪುತ್ತೂರು 29,792
ಸುಳ್ಯ 12,603
ಕಾರ್ಕಳ 16,600
ಕುಂದಾಪುರ 16,883
ಉಡುಪಿ 38,666
ಕಾಪು 17,380
ಬ್ರಹ್ಮಾವರ 14,714
ಬೈಂದೂರು 5,506
ಹೆಬ್ರಿ 3,182

ಶೀಘ್ರ ಪೂರೈಕೆ
ತಾಂತ್ರಿಕ ಸಮಸ್ಯೆಯಿಂದ ಪೂರೈಕೆಯಲ್ಲಿ ವ್ಯತ್ಯಾಸವಾಗಿದೆ. ರಾಜ್ಯ ಮಟ್ಟ ದಲ್ಲಿ ಎಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ವಿತರಿಸಲು ಪ್ರತ್ಯೇಕ ಟೆಂಡರ್‌ ಆಗಿರುವುದರಿಂದ ಕೆಲವೇ ದಿನಗಳಲ್ಲಿ ಮೊದಲಿ ನಂತೆ ಅಕ್ಕಿ ದೊರೆಯಲಿದೆ.
-ಮೊಹಮ್ಮದ್‌ ಇಸಾಕ್‌, ಉಪ ನಿರ್ದೇಶಕ, ಆಹಾರ ಇಲಾಖೆ ಉಡುಪಿ

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.