ಜಿಲ್ಲೆಯ ಹಳ್ಳಿ -ಹಳ್ಳಿಗಳಲ್ಲಿ ಜಾಗೃತಿ ಕಾರ್ಯ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ
Team Udayavani, May 1, 2022, 11:06 AM IST
ಉಡುಪಿ: ನಗರದ ಪ್ರದೇಶದಲ್ಲಿ ಹೆಚ್ಚು ಜನ ಜಾಗೃತಿ ಕಾರ್ಯಕ್ರಮ ಮಾಡುತ್ತಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಈಗ ಗ್ರಾಮೀಣ ಭಾಗದಲ್ಲೂ ಕಾನೂನಿನ ಅರಿವು ಮೂಡಿಸುವ ಕೆಲಸದಲ್ಲಿ ನಿರತವಾಗಿದೆ.
ಕೋವಿಡ್ ಸಂದರ್ಭದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಇ-ಲೋಕ ಅದಾಲತ್ ನಡೆಸಿ ನ್ಯಾಯಿಕ ಪ್ರಕರಣಗಳನ್ನು ಆನ್‌ಲೈನ್ ಮೂಲಕ ಇತ್ಯರ್ಥ ಮಾಡಲಾಗಿದೆ. 2021ರಲ್ಲಿ 11,397 ಪ್ರಕರಣಗಳನ್ನು ಇತ್ಯರ್ಥಪಡಿಸಿದೆ.
ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಅರ್ಜಿ ದಾರರ ಮನವೊಲಿಕೆಯ ಮೂಲಕ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತಿದ್ದು ವಕೀಲರ ಮಧ್ಯಸ್ಥಿಕೆ ವಹಿಸುತ್ತಾರೆ.
ಸ್ಥಳೀಯರಿಗೆ ಮಾಹಿತಿ
ಪ್ಯಾನ್ ಇಂಡಿಯಾ ಕಾನೂನು ಅರಿವು ಅಭಿಯಾನವನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ, ಜಿ.ಪಂ., ಪೊಲೀಸ್ ಇಲಾಖೆ ಮತ್ತು ಜಿಲ್ಲಾ ವಕೀಲರ ಸಂಘದ ಸಹಕಾರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತೀ ಪಂಚಾಯತ್‌ಗಳ ಮೂಲಕ ಹಳ್ಳಿ-ಹಳ್ಳಿಗಳಿಗೆ ತೆರಳಿ ಮಾಹಿತಿ ನೀಡಲಾಗಿದೆ. ಪ್ರಾಧಿಕಾರದಿಂದ ಸಿಗುವ ಉಚಿತ ಸೇವೆಗಳ ಬಗ್ಗೆ ಗ್ರಾಮೀಣ ಜನರಿಗೆ ಮಾಹಿತಿ ನೀಡಲಾಗುತ್ತಿದೆ.
ಜಾಗೃತಿ ಫಲಕಗಳ ಅಳವಡಿಕೆ
ಇದಕ್ಕಾಗಿ ಕಾನೂನು ವಿದ್ಯಾರ್ಥಿಗಳು, ಸ್ವಯಂ ಸೇವಕರು, ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗಿದೆ. ಸಾರ್ವಜನಿಕ ವಾಹನಗಳಲ್ಲಿಯೂ ಜಾಗೃತಿ ಫಲಕಗಳನ್ನು ಅಳವಡಿಕೆ ಮಾಡಲಾಗಿದೆ. ಎಲ್ ಇಡಿ ಸ್ಕ್ರೀನ್‌ಗಳ ಮೂಲಕವೂ ಕಾನೂನು ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ, ಜಿಲ್ಲಾ ಕಾರಾಗೃಹದಲ್ಲಿಯೂ ಮಾಹಿತಿ ಫಲಕಗಳನ್ನು ಅಳವಡಿಸಲಾಗಿದೆ.
ಸೇವೆ ಪಡೆಯುವುದು ಹೇಗೆ?
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉಚಿತ ಕಾನೂನು ಸಲಹೆ ಮತ್ತು ನೆರವು ಪಡೆಯಬಹುದಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲೂಕು ಕಾನೂನು ಸೇವಾ ಸಮಿತಿಗಳ ಬಗ್ಗೆ ಮಾಹಿತಿಗೆ 0820-2523355 ಸಂಪರ್ಕಿಸಬಹುದಾಗಿದೆ.
ಜೂ.25ಕ್ಕೆ ಲೋಕ ಅದಾಲತ್
2022ರಲ್ಲಿ ಈಗಾಗಲೇ ಒಮ್ಮೆ ಲೋಕ ಅದಾಲತ್ ನಡೆದಿದ್ದು, ಒಂದೇ ದಿನ 3,382 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಲಾಗಿತ್ತು. ಮುಂದಿನ ಲೋಕ ಅದಾಲತ್ ಜೂನ್ 25ಕ್ಕೆ ನಡೆಯಲಿದೆ.
ನಿರಂತರ ಅಭಿಯಾನ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ನೊಂದವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಜನರಿಗೆ ಈ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. –ಶರ್ಮಿಳಾ ಎಸ್., ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
ಮದುವೆ ಹಾಲ್ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!
ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ
ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಉಜ್ವಲ ಭವಿಷ್ಯಕ್ಕಾಗಿ T.A.T