ಸರಕಾರಿ ಸೌಲಭ್ಯಗಳ ಅರಿವು ಇರಲಿ: ಸಚಿವ ಪ್ರಮೋದ್
Team Udayavani, Mar 10, 2017, 2:06 PM IST
ಉಡುಪಿ: ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ, ಚುನಾಯಿತ ಸರಕಾರಗಳ ಅನೇಕ ಯೋಜನೆಗಳ ಅರಿವು ಜನಸಾಮಾನ್ಯರಿಗೆ ಇಲ್ಲದೆ ಇರುವುದು ವಿಷಾದನೀಯ. ಅಂತಹ ಯೋಜನೆಗಳ ಅರಿವು ಪಡೆದು ಸರಕಾರದ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಿ, ಆ ಮೂಲಕ ಜಾಗೃತ ಸಮಾಜ ನಿರ್ಮಾಣವಾಗಬೇಕೆಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಅಜ್ಜರಕಾಡಿನ ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಡುಪಿ ಉಜ್ವಲ್ ಡೆವಲಪರ್, ಹಿರಿಯಡಕ ಲಯನ್ಸ್ ಕ್ಲಬ್, ಜಿಲ್ಲಾ ಆರೋಗ್ಯ ಇಲಾಖೆ ಉಡುಪಿ ಇವರ ಸಹಯೋಗದಿಂದ ವಿದ್ಯಾರ್ಥಿಗಳಿಗೆ ಏಡ್ಸ್ ಜಾಗೃತಿ ಕುರಿತು ಮಾಹಿತಿ ನೀಡಲಾಯಿತು.
ಪ್ರಾಂಶುಪಾಲರಾದ ಪ್ರೊ| ಬಿ. ಜಗದೀಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಡಾ| ಮಹಾಬಲೇಶ್ವರ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಡಾ| ರೋಶನ್ ಕುಮಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಉದಯವಾಣಿ-ಎಂಐಟಿ ಮಳೆ ನೀರು ಕೊಯ್ಲು ಕಾರ್ಯಾಗಾರ: ಸಮಸ್ಯೆಗೆ ಮೊದಲೇ ಪರಿಹಾರ: ಡಾ| ರಾಣ ಕರೆ
ಮದುವೆ ಹಾಲ್ನಲ್ಲಿ ಕಣ್ಮರೆಯಾದ ಚಿನ್ನದ ಸರ ದೈವ ಸನ್ನಿಧಿಯಲ್ಲಿ ಪತ್ತೆ!
ಅಗರಬತ್ತಿ ಉದ್ಯಮಕ್ಕೆ ಅಗತ್ಯದ ವಿನಾಯಿತಿ: ಶೋಭಾ ಕರಂದ್ಲಾಜೆ
ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಉಜ್ವಲ ಭವಿಷ್ಯಕ್ಕಾಗಿ T.A.T