ಬರಡು ಭೂಮಿಯನ್ನು ಬಂಗಾರ ಬೆಳೆವ ಜಮೀನಾಗಿಸಿದ ಭಗೀರಥ

ಇಡೀ ಊರನ್ನೇ ಸಾವಯವ ಗ್ರಾಮವಾಗಿಸುವಲ್ಲಿ ಯತ್ನ

Team Udayavani, Jan 13, 2020, 5:22 AM IST

0901KOTA2E

ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಅದನ್ನು ಬಿತ್ತಿ ಬೆಳೆದೇ ಆಗಬೇಕು. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ಕಿಸಾನ್‌ ದಿನಾಚರಣೆಯ ಸಂದರ್ಭ ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಸರಕಾರದಿಂದ ಪ್ರಶಸ್ತಿ -ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು ಪರಿಚಯಿಸುವ ಪ್ರಯತ್ನ.

ಕೋಟ: ಸಾಮಾನ್ಯ ಕಾರ್ಮಿಕನಾಗಿ ದುಡಿಯುತ್ತಿದ್ದವ ತನ್ನ ಬರಡುಭೂಮಿಯಲ್ಲಿ ಏನಾದರು ಸಾಧಿಸಬೇಕು ಎನ್ನುವ ಹಠಕ್ಕೆ ಬಿದ್ದು ನೀರಾವರಿ ವ್ಯವಸ್ಥೆ ಮಾಡಿ, ಹಲವು ವರ್ಷಗಳಿಂದ ಹಡಿಲು ಬಿದ್ದ ಭೂಮಿಯನ್ನು ಉತ್ತಿ-ಬಿತ್ತಿ ಬಂಗಾರದ ಬೆಳೆ ತೆಗೆವ ಮೂಲಕ ಮೂಗಿನ ಮೇಲೆ ಬೆರಳಿಡುವಂತೆ ಮಾಡಿದವರು ಆವರ್ಸೆಯ ಕೃಷ್ಣ ಕುಲಾಲರು. ಇವರ ಸಾಧನೆಗೆ ರಾಜ್ಯ ಸರಕಾರದ ಕೃಷಿ ಪಂಡಿತ ಪ್ರಶಸ್ತಿ ಇನ್ನೊಂದು ಗರಿಯನ್ನೂ ಮೂಡಿಸಿದೆ. ತನ್ನಲ್ಲಿರುವ 4.5 ಎಕರೆ ಭೂಮಿಯಲ್ಲಿ ಸಣ್ಣಪ್ರಮಾಣದಲ್ಲಿ ಕೃಷಿ ಮಾಡುತ್ತಿದ್ದ ಇವರು ಜಿಲ್ಲೆಗೆ ಹೊಸದಾಗಿ ಪರಿಚಯಗೊಂಡಿದ್ದ ಗ್ರಾಮಾಭಿವೃದ್ಧಿ ಯೋಜನೆಯ ಸಂಪರ್ಕಕ್ಕೆ ಬಂದು ಯೋಜನೆಯ ಸದಸ್ಯರಾದರು. ಗುಡ್ಡ ಪ್ರದೇಶವಾಗಿದ್ದ ಇವರ ಜಮೀನಿಗೆ ನೀರಾವರಿ ವ್ಯವಸ್ಥೆ ಇಲ್ಲದಿರುವುದರಿಂದ ಬೇಸಾಯ ಕಷ್ಟವಾಗಿತ್ತು. ಆಗ ನೀರಿಂಗಿಸುವಿಕೆ, ಮಳೆನೀರು ಕೊಯ್ಲು ವಿಧಾನಗಳನ್ನು ಜಮೀನಿನಲ್ಲಿ ಅಳವಡಿಸಿಕೊಂಡು ಕೃಷಿ ಹೊಂಡಗಳನ್ನು ಮಾಡಿ ನೀರು ಪಡೆದು ಕೃಷಿ ಮುಂದುವರಿಸಿದರು. ಕೇವಲ 7 ನೇ ತರಗತಿ ಕಲಿತಿದ್ದರೂ ಅಪಾರವಾದ ಕೃಷಿ ಜ್ಞಾನದಿಂದ ಕೃಷಿ ಪಂಡಿತರಿಗೆ ಪಾಠ ಹೇಳುವಷ್ಟು ತಿಳಿದುಕೊಂಡಿದ್ದಾರೆ.

ಸಾವಯವದ ಹರಿಕಾರ
ಆವರ್ಸೆ ಗ್ರಾಮವನ್ನು ನಿರಂತರವಾಗಿ ಮೂರು-ನಾಲ್ಕು ವರ್ಷಗಳ ಕಾಲ ಸರಕಾರ ಸಂಪೂರ್ಣ ಸಾವಯವ ಗ್ರಾಮವಾಗಿ ಘೋಷಿಸಲ್ಪಟ್ಟಿತ್ತು. ಹೀಗೆ ಸಾವಯವಗೊಳಿಸುವಲ್ಲಿ ಕುಲಾಲರ ಕೊಡುಗೆ ಸಾಕಷ್ಟಿದೆ. ಗ್ರಾಮಾಭಿವೃದ್ಧಿ ಯೋಜನೆಯ ಜತೆಗೂಡಿ ರೈತರ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ, ಮಾರ್ಗದರ್ಶನ ನೀಡಿ, ಅವರ ಜಮೀನಿನಲ್ಲಿ ದುಡಿದು ಗ್ರಾಮವನ್ನು ಸಾವಯವಗೊಳಿಸಿದ್ದರು.

ಸಮಗ್ರ ಕೃಷಿ ಅಳವಡಿಕೆ
ಇವರು ಕೇವಲ ಒಂದೇ ವಿಧಾನದ ಕೃಷಿಗೆ ಸೀಮಿತವಾಗಿಲ್ಲ ಭತ್ತ, ತೆಂಗು, ಅಡಿಕೆ, ಗೇರು, ಬಾಳೆ, ಕಾಳುಮೆಣಸು, ವೀಳ್ಯದೆಲೆ, ಅಲಸಂಡೆ, ಬೆಂಡೆ, ಕುಂಬಳಕಾಯಿ ಮುಂತಾದ ತರಕಾರಿಗಳು, ಜೇನು ಸಾಕಾಣಿಕೆ, ಕೋಳಿಸಾಕಾಣಿಕೆ, ನರ್ಸರಿ, ಅಗರ್‌ವುಡ್‌ ಹೀಗೆ ಸಮಗ್ರ ಕೃಷಿ ಪ್ರಪಂಚವೇ ಇವರ ಜಮೀನಿನಲ್ಲಿದೆ. ನಾಟಿ ಕೋಳಿ ಫಾರ್ಮ್ ಅಭಿವೃದ್ಧಿಗೊಳಿಸಿರುವ ಇವರು ಮೊಟ್ಟೆ ಹಾಗೂ ಮಾಂಸಕ್ಕಾಗಿ ಅವುಗಳನ್ನು ಮಾರಾಟ ಮಾಡುತ್ತಾರೆ. ದೇಶೀಯ ತಳಿಯ ಹಸುಗಳನ್ನು ಸಾಕಣೆ ಮಾಡುವ ಮೂಲಕ ಹೈನುಗಾರಿಕೆಯಲ್ಲೂ ತೊಡಗಿಸಿಕೊಂಡಿದ್ದಾರೆ.

ಇವರು ಸಾವಯವ ಮಾದರಿಯಲ್ಲಿ ಹತ್ತಾರು ಜಾತಿಯ ತರಕಾರಿಯನ್ನು ಬೆಳೆದು ಮಾರಾಟ ಮಾಡುತ್ತಾರೆ ಹಾಗೂ ಅದರ ಬೀಜಗಳನ್ನು ಸಂಗ್ರಹಿಸಿ ಸಣ್ಣ ಸಣ್ಣ ಪೊಟ್ಟಣಗಳನ್ನಾಗಿ ಮಾಡಿ ಕೃಷಿ ಮೇಳ ಹಾಗೂ ಅಂಗಡಿಗಳಲ್ಲಿ ಮಾರಾಟ ಮಾಡುತ್ತಾರೆ. ಇವರ ತರಕಾರಿ ಬೀಜಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ. ಮುಖ್ಯವಾಗಿ ಯಾವುದೇ ನೀರಿನ ಆಶ್ರಯವಿಲ್ಲದ ನಿರುಪಯುಕ್ತ ಗುಡ್ಡೆ ಜಾಗದಲ್ಲಿ ಗೇರು ಗಿಡಗಳನ್ನು ನಾಟಿ ಮಾಡಿದ್ದಾರೆ. ಮಳೆಗಾಲದ ಸಮಯದಲ್ಲಿ ಗೇರು ಗಿಡದ ಬುಡದಲ್ಲಿ ತರಕಾರಿಗಳನ್ನು ನಾಟಿ ಮಾಡುತ್ತಾರೆ ಹಾಗೂ ಹೆಚ್ಚಿನ ಲಾಭವನ್ನು ಅವರು ಪಡೆಯುತ್ತಾರೆ. ನೋಣಿ ಗಿಡಗಳನ್ನೂ ಅವರು ಬೆಳೆದಿದ್ದಾರೆ.

ಪುರಸ್ಕಾರಗಳು
ಕೃಷಿ ಇಲಾಖೆಗೆ ಸಂಪನ್ಮೂಲ ವ್ಯಕ್ತಿಯಾಗಿರುವ ಇವರು ರಾಜ್ಯದ ಹಲವು ಕಡೆ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ. ರಾಜ್ಯಮಟ್ಟದ ಕೃಷಿಕ ಸಾಧಕ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿ, 2011-12 ರಲ್ಲಿ ಸಾವಯವ ಕೃಷಿ ಕ್ಷೇತ್ರದಲ್ಲಿನ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಇವರ ಪತ್ನಿ ಜ್ಯೋತಿ ಕುಲಾಲ್‌ ಅವರು ಪತಿಯ ಕೆಲಸದಲ್ಲಿ ಹೆಗಲಾಗಿದ್ದು ಇವರಿಗೆ 2008-09 ರಲ್ಲಿ ರಾಜ್ಯಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ ಬೆಂಗಳೂರು ಕೃಷಿ ವಿವಿಯಿಂದ ಲಭ್ಯವಾಗಿದೆ. ಜತೆಗೆ ಜಿಲ್ಲಾ ಮಟ್ಟ, ತಾಲೂಕು ಮಟ್ಟದ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಕೃಷ್ಣ ಕುಲಾಲರಿಗೆ ಸಂದಿದೆ.

ಯಶಸ್ಸಿಗೆ ಗ್ರಾಮಾಭಿವೃದ್ಧಿ ಯೋಜನೆ ಕಾರಣ
ಕೃಷಿಯಲ್ಲಿ ಖಂಡಿತ ಲಾಭವಿದೆ. ಆದರೆ ಕಷ್ಟಪಟ್ಟು ದುಡಿಯುವ ಮನಃಸ್ಥಿತಿ ಬೇಕು ಹಾಗೂ ಲಾಭ-ನಷ್ಟದ ಲೆಕ್ಕಾಚಾರ ಹಾಕುವ, ನಷ್ಟವಾದ ಬೆಳೆಯನ್ನು ಬಿಟ್ಟು ಅದೇ ಕ್ಷೇತ್ರದಲ್ಲಿ ಪರ್ಯಾಯ ಬೆಳೆ ಬೆಳೆಯುವ ಸಂಶೋಧನಾತ್ಮಕ ಗುಣ ಅಗತ್ಯವಿದೆ. ಸಮಗ್ರ ಕೃಷಿಯಿಂದ ಅಧಿಕ ಲಾಭ ಸಾಧ್ಯವಿದೆ ಹಾಗೂ ಸಾಫ್ಟ್‌ ವೇರ್‌ ನೌಕರಿಯಂತಹ ವೈಟ್‌ ಕಾಲರ್‌ ಜಾಬ್‌ಗ ಕಡಿಮೆ ಇಲ್ಲದೆ ಕೃಷಿಯಿಂದ ಆದಾಯ ಪಡೆಯಲು ಸಾಧ್ಯವಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾನ್ಯ ಕಾರ್ಮಿಕನಾಗಿದ್ದ ನನಗೆ ಮಾಹಿತಿ, ಮಾರ್ಗದರ್ಶನಗಳನ್ನು ನೀಡಿ, ಅಗತ್ಯ ಸೌಕರ್ಯಗಳನ್ನು ಒದಗಿಸಿ ಕೃಷಿ ಪಂಡಿತನಾಗುವ ಮಟ್ಟಿಗೆ ಬೆಳೆಸಿತು. ಹೀಗಾಗಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಹಾಗೂ ಯೋಜನೆಯ ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳ ಸಹಕಾರವನ್ನು ಮರೆಯಲು ಅಸಾಧ್ಯ.
-ಕೃಷ್ಣ ಕುಲಾಲ್‌ ಆವರ್ಸೆ

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.