ಹಿರಿಯಡ್ಕ : ಕಾರು ಬೈಕ್ ಮುಖಾಮುಖಿ ಡಿಕ್ಕಿ

Team Udayavani, Aug 24, 2019, 12:29 PM IST

ಮಣಿಪಾಲ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಹಿರಿಯಡ್ಕ ಸಮೀಪದ ಕೊಟ್ನಕಟ್ಟೆಯಲ್ಲಿ ನಡೆದಿದೆ.

ಮಣಿಪಾಲ-ಕಾರ್ಕಳ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಈ ಅಪಘಾತ ನಡೆದಿದೆ. ಬೈಕ್ ಸವಾರನನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ.

ಕಾರ್ಕಳದಿಂದ ಮಣಿಪಾಲಕ್ಕೆ ಬರುತ್ತಿದ್ದ ಬೈಕ್ ಗೆ ಮಣಿಪಾಲ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅತೀ ವೇಗದಲ್ಲಿದ್ದ ಕಾರು ಬ್ರೇಕ್ ಹಾಕಿದ ಪರಿಣಾಮ ಜಾರಿ ಒಂದಷ್ಟು ದೂರ ಸಾಗಿ ಎದುರಿನಿಂದ ಬಂದ ಪಲ್ಸರ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಬೈಲೂರಿನ ಬೈಕ್ ಸವಾರ ಮಣಿಪಾಲಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದ ಎನ್ನಲಾಗಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಒಂದು ಕಾಲಿಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ತೀವ್ರತೆಗೆ ಬೈಕ್ ಮತ್ತು ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ