ಆ್ಯಂಬುಲೆನ್ಸ್ನಲ್ಲೇ ಗಂಡು ಮಗುವಿಗೆ ಜನ್ಮ
Team Udayavani, Feb 18, 2020, 5:37 AM IST
ಉಡುಪಿ: ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಮಹಿಳೆಯೋರ್ವರು ಆ್ಯಂಬುಲೆನ್ಸ್ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ರವಿವಾರ ನಡೆದಿದೆ.
ಮಲ್ಪೆಯ ತೀತಾ ನಾಯಕ ಅವರ ಪತ್ನಿ ಮಾಲಿಬಾಯಿ ಅವರಿಗೆ ರವಿವಾರ ಮಧ್ಯಾಹ್ನದ ವೇಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಮಲ್ಪೆಯ 108 ಆ್ಯಂಬುಲೆನ್ಸ್ಗೆ ಕರೆ ಮಾಡಲಾಯಿತು. ತತ್ಕ್ಷಣವೇ ಆಗಮಿಸಿದ ವಾಹನ ಅವರನ್ನು ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರೆತರುವ ವೇಳೆ ಕರಾವಳಿ ಬೈಪಾಸ್ನ ಮಾರ್ಗಮಧ್ಯದಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದಾರೆ.
ತಾಯಿ ಹಾಗೂ ಮಗು ಆರೋಗ್ಯವಾಗಿದೆ. ಆ್ಯಂಬುಲೆನ್ಸ್ನಲ್ಲಿ ತುರ್ತುವೈದ್ಯಕೀಯ ತಜ್ಞ ಸಂತೋಷ್ ಆರ್.ಹಾಗೂ ಚಾಲಕ ಸಂಜೀವ್ ಷಾ ಜಮ್ಕಂಡಿ ಅವರು ಉಪಸ್ಥಿತರಿದ್ದರು. ಆಸ್ಪತ್ರೆಯಲ್ಲಿ ಡಾ| ಮೇಧಾ ಅವರು ತಾಯಿ ಹಾಗೂ ಮಗುವಿನ ಆರೈಕೆಯನ್ನು ನೋಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ