B.K. Hariprasad ವಿರುದ್ಧ ತನಿಖೆಗೆ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ


Team Udayavani, Jan 3, 2024, 11:25 PM IST

B.K. Hariprasad ವಿರುದ್ಧ ತನಿಖೆಗೆ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಿರುವ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಒಳಪಡಿಸಿ ಅವರಲ್ಲಿರುವ ಮಾಹಿತಿಯನ್ನು ಪಡೆಯಬೇಕು. ಇಲ್ಲವಾದರೆ ಮುಂದೆ ಯಾವುದೇ ಅಹಿತಕರ ಘಟನೆ ನಡೆದರೂ ಅದಕ್ಕೆ ಕಾಂಗ್ರೆಸ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆಯಾಗಲಿದ್ದಾರೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 59 ರಾಮ ಭಕ್ತರು ಹೋಗುತ್ತಿದ್ದ ರೈಲಿನ ಬೋಗಿಗೆ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ ಗೋದ್ರಾ ಘಟನೆಯನ್ನು ಹರಿಪ್ರಸಾದ್‌ ಈಗ ಯಾಕೆ ನೆನಪಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ರಾಮ ಮಂದಿರ ನಿರ್ಮಾಣವನ್ನು ಮೊದಲಿನಿಂದಲೂ ಕಾಂಗ್ರೆಸ್‌ ವಿರೋಧಿಸುತ್ತಲೇ ಬಂದಿದೆ. ಭೂಮಿ ಪೂಜೆ ಸಂದರ್ಭದಲ್ಲಿ ಸಂಸತ್‌ ಒಳಗೆ ಕಪ್ಪುಪಟ್ಟಿ ಧರಿಸಿದ್ದರು. ನಕಾರಾತ್ಮಕ ಹೇಳಿಕೆ ನೀಡಿದ್ದರು, ಈಗ ಕರಸೇವಕರನ್ನು ಬಂಧಿಸುತ್ತಿದ್ದಾರೆ. ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದ ಕಾಂಗ್ರೆಸ್‌ ಈಗ ಜನರಲ್ಲಿ ಭೀತಿ, ಗೊಂದಲ ಸೃಷ್ಟಿಸುತ್ತಿದೆ ಎಂದು ದೂರಿದರು.

ದ್ವೇಷ ರಾಜಕಾರಣ
ರಾಜ್ಯದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದೆ. 31 ವರ್ಷ ಹಿಂದಿನ ಪ್ರಕರಣವನ್ನು ಈಗ ಮುನ್ನೆಲೆಗೆ ತಂದು ಬಂಧಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌ನ ಪೂರ್ಣ ಪೀಠ ತೀರ್ಪು ನೀಡಿದ ಪ್ರಕರಣವನ್ನು ಪೊಲೀಸರು ಹೇಗೆ ತನಿಖೆ ಮಾಡಲಿದ್ದಾರೆ? ವಾರಂಟ್‌ ನೀಡಲು ನ್ಯಾಯಾಲಯ ಹೇಳಿದ್ದಲ್ಲ ಕಾಂಗ್ರೆಸ್‌ ಸರಕಾರ ಹೇಳಿರಬೇಕು. ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಭಾಗಿಯಾದವರನ್ನು ನಿರಪರಾಧಿಗಳು ಎನ್ನುವರಿಂದ ಏನು ನಿರೀಕ್ಷೆ ಮಾಡಲು ಸಾಧ್ಯ? ರಾಮ ಮಂದಿರ ನಿರ್ಮಾಣದಿಂದ ಇಡೀ ದೇಶವೇ ಸಂಭ್ರಮದಲ್ಲಿದೆ. ಇದನ್ನು ಸಹಿಸಲಾಗದೆ ಬಡಪಾಯಿಗಳ ಮೇಲೆ ದುರುದ್ದೇಶದಿಂದ ಪ್ರಕರಣ ಹಾಕುತ್ತಿದ್ದಾರೆ. ಇದು ದ್ವೇಷ ರಾಜಕಾರಣವಲ್ಲದೇ ಮತ್ತೆನೂ ಅಲ್ಲ ಎಂದರು.

ಸಚಿವರಿಗೆ ಬುದ್ಧಿ ಹೇಳಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಊರಿಗೆಲ್ಲ ಬುದ್ಧಿ ಹೇಳುತ್ತಾರೆ ಆದರೆ ಅವರ ಸಚಿವ ಸಂಪುಟದ ಸಚಿವರು ಹೇಗೆ ನಡೆದುಕೊಳ್ಳಬೇಕು, ಮಾತನಾಡಬೇಕು ಎಂಬುದನ್ನು ಕಲಿಸಿಲ್ಲ. ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮುಖ್ಯಸ್ಥರು, ಮಕ್ಕಳಿಗೆ ನೈತಿಕ ಶಿಕ್ಷಣ ಕಲಿಸುವ, ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ತಿಳಿಸಬೇಕಾದ ಶಿಕ್ಷಣ ಸಚಿವರು ಬಿಜೆಪಿ ನಾಯಕರ ವಿರುದ್ಧ ಕೀಳು ಮಟ್ಟದ ಪದ ಪ್ರಯೋಗ ಮಾಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಇರುವವರ ವೈಯಕ್ತಿಕ ಘಟನೆಗಳು ಸಾರ್ವಜನಿಕವಾಗಿಯೇ ಪರಿಗಣಿಸಲಾಗುತ್ತದೆ. ಟೀಕೆಗಳು ಸೌಜನ್ಯ ಮೀರಬಾರದು. ಸಚಿವರಲ್ಲಿ ಗೌರವದ ನಡವಳಿಕೆ ಇರಬೇಕು. ಹಂಗಿಸುವ ಭಾಷೆಯಲ್ಲಿ ಮಾತನಾಡುವುದು ಸರಿಯಲ್ಲ. ಟೀಕೆ ಮಾಡಿದ ಎಲ್ಲರನ್ನು ಹೀಗೆ ನೋಡಿದರೆ ಸಚಿವರ ಶಿಷ್ಟಾಚಾರಕ್ಕೆ ಮುಖ್ಯಮಂತ್ರಿಯವರ ಸಹಮತ ಇರಲಿದೆಯೇ ಎಂದು ಪ್ರಶ್ನಿಸಿದರು.

ತನಿಖೆಗೆ ಆಗ್ರಹ
ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆಯಿದೆ ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆಯನ್ನು ಗಮನಿಸಿದಾಗ ರಾಜ್ಯದಲ್ಲಿ ಕಾಂಗ್ರೆಸ್‌ ಅಂತಹ ಷಡ್ಯಂತ್ರ ಮಾಡುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು. ಹಾಗಾಗಿ ಅವರ ಹೇಳಿಕೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ| ವೈ. ಭರತ್‌ ಶೆಟ್ಟಿ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಪ್ರಸಾದ್‌ ಕಾಂಗ್ರೆಸ್‌ನ ದೊಡ್ಡ ನಾಯಕ. ಅವರ ಗುಂಪಿನಲ್ಲಿ ಹಲವಾರು ವಿಚಾರಗಳು ಚರ್ಚೆಯಾಗುತ್ತವೆ. ಯಾವುದೋ ಒಂದು ಸಭೆಯಲ್ಲಿ ಕಾಂಗ್ರೆಸ್‌ ಪ್ರಾಯೋಜಿತ ಗೋಧ್ರಾದಂತಹ ಕೃತ್ಯ ನಡೆಸುವ ಬಗ್ಗೆಯೂ ಚರ್ಚಿಸಿರಬಹುದು. ಅದನ್ನು ಹರಿಪ್ರಸಾದ್‌ ಅವರು ಸೂಚ್ಯವಾಗಿ ಬಹಿರಂಗಗೊಳಿಸಿದ್ದಾರೆ. ಇದನ್ನು ಹಗರುವಾಗಿ ಪರಿಗಣಿಸಬಾರದು ಎಂದರು.

ರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠೆ ಸಂದರ್ಭ ಸಾರ್ವತ್ರಿಕ ರಜಾ ಘೋಷಣೆಗೆ ಶಾಸಕರು ಮನವಿ ಮಾಡಿರುವುದು ಸರಿಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು. ಕೇಂದ್ರ ಸರಕಾರ ಈ ಬಗ್ಗೆ ತೀರ್ಮಾನ ಮಾಡಲಿದೆ. ರಾಜ್ಯದ ತೀರ್ಮಾನ ಪ್ರಕಟಿಸಬೇಕು. ರಾಮಮಂದಿರ ರಾಜಕೀಯ ವಿಷಯವಲ್ಲ. ಜನರ ಭಾವೈಕ್ಯದ ವಿಷಯವಾಗಿದೆ. ಟ್ರಸ್ಟ್‌ ವತಿಯಿಂದ ಪ್ರಮುಖರಿಗೆ ಆಹ್ವಾನ ಬರಲಿದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.