ಎಲ್ಲೆಂದರಲ್ಲಿ ಬಸ್ಸು ನಿಲುಗಡೆ; ಬೇಕಿಲ್ಲಿ ಸುಸಜ್ಜಿತ ಬಸ್ಸು ತಂಗುದಾಣ

Team Udayavani, Jul 13, 2017, 2:20 AM IST

SANTEKATTE.jpg

ಮಲ್ಪೆ: ವಾಣಿಜ್ಯ ಕೇಂದ್ರವಾಗಿ ಬೆಳೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ ತಾಗಿಕೊಂಡಿರುವ ಕಲ್ಯಾಣಪುರ ಸಂತೆಕಟ್ಟೆ ನಗರ ಅಪಾಯಕಾರಿ ತಾಣವಾಗಿ ಪರಿಣಮಿಸುತ್ತಿದ್ದು ಆಗಿಂದ್ದಾಗೆ ಇಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳು ಇದಕ್ಕೆ ಪ್ರಮುಖ ನಿದರ್ಶನವಾಗಿದೆ.

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ರಸ್ತೆ ನಿರ್ಮಾಣ ಮತ್ತು ವಾಹನಗಳ ಒತ್ತಡವೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ. ನಿತ್ಯ ಸಾವಿರಾರು ಜನ ಪ್ರಯಾಣಿಸುವ ಉಡುಪಿ ನಗರಸಭಾ ವ್ಯಾಪ್ತಿಯ ಈ ಪ್ರಮುಖ ಸ್ಥಳವಾದ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಪ್ರಯಾಣಿಕರಿಗೆ ತಂಗಲು ಒಂದು ಬಸ್ಸು ನಿಲ್ದಾಣದ ವ್ಯವಸ್ಥೆ ಇಲ್ಲದೆ ಅಲ್ಲಲ್ಲಿ ಜನದಟ್ಟಣೆ ಉಂಟಾಗಿ ಜನರಿಗೆ ಎಲ್ಲಿ ಹೋಗಬೇಕು, ಎಲ್ಲಿ ನಿಲ್ಲಬೇಕು ಎನ್ನುವುದು ತಿಳಿಯದೇ ಅತ್ತಿತ್ತ ಪೇಚಾಡುವ ಸ್ಥಿತಿಯೂ  ನಿರ್ಮಾಣವಾಗಿದೆ. ಹಾಗಾಗಿ ಇಲ್ಲಿನ ರಸ್ತೆಯಲ್ಲಿ ಸಂಚರಿಸುವುದು ಪ್ರಯಾಣಿಕರಿಗೆ ಮತ್ತು ವಾಹನ ಸವಾರರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು ಸಂತೆಕಟ್ಟೆ ಇದೀಗ ಅಪಾಯಕಾರಿ ಜಂಕ್ಷನ್‌ ಪಟ್ಟವನ್ನು ಪಡೆದುಕೊಂಡಿದೆ.

ಹೂಡೆ, ಬೆಂಗ್ರೆ ಕೆಮ್ಮಣ್ಣು ಗಳಿಂದ ಬಂದ ಸಿಟಿ ಬಸ್ಸುಗಳು ಸರ್ವಿಸ್‌ ರಸ್ತೆಯಲ್ಲಿ ಪ್ರಯಾ ಣಿಕರನ್ನು ಇಳಿಸದೆ ರಾಷ್ಟ್ರೀಯ ಹೆದ್ದಾರಿಯ ಇನ್ನೊಂದು  ಮಗ್ಗುಲಲ್ಲಿ ಇಳಿಸುದರಿಂದ ಶಾಲಾ ಮಕ್ಕಳು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಕೊಂಡು ಹೆದ್ದಾರಿ ದಾಟುವ ಪ್ರಮೇಯ ಒದಗಿದೆ. ಹೆದ್ದಾರಿ ಜಂಕ್ಷನ್‌ ಬಳಿ ಬಸ್ಸುಗಳು ಎಲ್ಲೆಂದರಲ್ಲಿ ನಿಲು ಗಡೆ ಮಾಡುವುದು, ರಸ್ತೆ ತಿರುವಿನಲ್ಲೆ ವಾಹನ ಗಳು ಅತೀ ವೇಗವಾಗಿ ಬಂದು ತಿರುವು ಪಡೆಯುದರಿಂದ ಮೂರು ಕಡೆ ಒಂದೇ ಬಾರಿ ವಾಹನ ಸಂಚರಿಸುವುದರಿಂದ ಇಕ್ಕಟಿನ ನಡುವೆ ವಾಹನ ಸವಾರರಿಗೆ ಗೊಂದಲವಾಗಿ ಪದೇ ಪದೇ ಅಪಘಾತಗಳು ನಡೆಯುತ್ತಲೇ ಇರುತ್ತದೆ ಎಂದು ನಾಗರಿಕರು ಆರೋಪಿಸುತ್ತಾರೆ.

ರಸ್ತೆಯೇ ಬಸ್ಸು ನಿಲ್ದಾಣ
ನಿತ್ಯ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಕಚೇರಿ ಹಾಗೂ ಇನ್ನಿತರ ಕೆಲಸಗಳಿಗೆ ಹೋಗುವ ಮಂದಿ ಹೆದ್ದಾರಿ ಮೇಲೆಯೇ ನಿಲ್ಲಬೇಕು. ಇದರಿಂದ ಅಪಘಾತಗಳು ಉಂಟಾಗುವ ಸಾಧ್ಯತೆಗಳು ಜಾಸ್ತಿ ಇದೆ. ಬಸ್ಸು ನಿಲ್ದಾಣ ಇಲ್ಲದೇ ಇರುವುದರಿಂದ ಇಲ್ಲಿಗೆ ಬರುವವರು ರಸ್ತೆ ಬದಿಯೇ ನಿಂತು ಬಸ್ಸು ಹತ್ತಬೇಕು.  ಹೊರಗಿನಿಂದ ಬಂದವರಿಗೆ ಇಲ್ಲಿನ ದಿಕ್ಕು ತಪ್ಪುವುದು ಸಹಜವಾಗಿದೆ. ಇಲ್ಲಿ ಜನರು ಮಳೆ ಬಿಸಿಲಿಗೆ ರಸ್ತೆ ಬದಿಯಲ್ಲೆ ಬಸ್ಸು ಕಾಯಬೇಕಾಗಿರುವುದರಿಂದ ರಸ್ತೆಯೇ ಬಸ್ಸು ನಿಲ್ದಾಣವಾಗಿದೆ. 

ಇನ್ನು ರವಿವಾರ ನಡೆಯುವ ಸಂತೆಯ ದಿನ ಜನರ ಸಂಕಟ ಹೇಳತೀರದು. ಸಂತೆಗೆ ಬಂದ ವಯಸ್ಸಾದ ಮಹಿಳೆಯರು ಪುರುಷರು ಇಲ್ಲಿನ ಯಾತಕೆ ಬಂದು ಸಿಕ್ಕಿ ಬಿದ್ದೆನೋ ಎಂದು ಪರಿತಪಿಸಿಕೊಳ್ಳುತ್ತಾರೆ.ಬಸ್ಸು ತಂಗುದಾಣಕ್ಕೆ ಆಗ್ರಹ
ಸಂತೆಕಟ್ಟೆಯ ಸರ್ವಿಸ್‌ ರಸ್ತೆಯಲ್ಲಿ ಉಡುಪಿ ಕಡೆಗೆ ಹೋಗುವ ಮತ್ತು ಕುಂದಾಪುರದ ಕಡೆಗೆ ಹೋಗಲು ಇಲ್ಲೊಂದು ತಂಗುದಾಣ ಅಗತ್ಯಬೇಕು ಎಂಬ ಬೇಡಿಕೆ ಇಲ್ಲಿನ ನಾಗರಿಕರದ್ದಾಗಿದೆ. ಹಲವಾರು ವರ್ಷಗಳ ಹಿಂದೆ ಇಲ್ಲಿದ್ದ ಬಸ್ಸು ನಿಲ್ದಾಣವನ್ನು ಎರಡು ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತಗೊಳಿಸುವ  ಹಿನ್ನಲೆಯಲ್ಲಿ ತೆರವುಗೊಳಿಸಲಾಗಿದೆ. ಅಂದಿನಿಂದ ಇವತ್ತಿನವರೆಗೂ ಜನರು ರಸ್ತೆಬದಿಯಲ್ಲೆ  ನಿಲ್ಲಬೇಕಾಗಿದೆ.

– ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.