ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರ ಪದಪ್ರದಾನ
Team Udayavani, Aug 3, 2017, 8:00 AM IST
ಮರವಂತೆ: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ವಿವಿಧ ಘಟಕಗಳ ಪದಪ್ರದಾನ ಸಮಾರಂಭವು ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಿದರು.
ವಂಡ್ಸೆ ಬ್ಲಾಕ್ ಹಿಂದುಳಿದ ವರ್ಗ ವಿಭಾಗ ಅಧ್ಯಕ್ಷ ಚಂದ್ರ ನಾಯ್ಕ, ಕಿಸಾನ್ ಘಟಕ ಅಧ್ಯಕ್ಷ ನಾಗಪ್ಪ ಕೊಠಾರಿ, ಬೈಂದೂರು ಯುವಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ವಂಡ್ಸೆ ಮಹಿಳಾ ಬ್ಲಾಕ್ ಅಧ್ಯಕ್ಷೆ ಲಲಿತಾ ಶೀÅನಿವಾಸ ಗಾಣಿಗ, ವಂಡ್ಸೆ ಬ್ಲಾಕ್ ಕಾರ್ಮಿಕ ಘಟಕ ಅಧ್ಯಕ್ಷ ಮುತ್ತಯ್ಯ ಪೂಜಾರಿ, ಬೈಂದೂರು ಬ್ಲಾಕ್ ಕಾರ್ಮಿಕ ಘಟಕ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಪರಿಶಿಷ್ಟ ಜಾತಿ ಘಟಕ ಅಧ್ಯಕ್ಷ ಜಗದೀಶ ಪದಾಧಿಕಾರಿಗಳಾಗಿ ಸ್ವೀಕರಿಸಿದರು.
ಈ ಸಂದರ್ಭ ಶಾಸಕ ಕೆ. ಗೋಪಾಲ ಪೂಜಾರಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೋಪಾಲ ಭಂಡಾರಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಅಲ್ಪ ಸಂಖ್ಯಾಕರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಎ. ಗಫೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಆರ್. ಸಭಾಪತಿ, ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೆಲಿಯೋ ಉಪಸ್ಥಿತರಿದ್ದರು.