ಬೈಂದೂರು ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ
Team Udayavani, Dec 14, 2019, 11:02 AM IST
ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರು ಹೊಸ ಬಸ್ ನಿಲ್ದಾಣದ ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಭಟ್ಕಳ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಬಸ್ ಗೆ ಟಿಪ್ಪರ್ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯಾದ ಪರಿಣಾಮ ಬಸ್ ಹಾಗೂ ಟಿಪ್ಪರ್ ನ ಮುಂಭಾಗ ಜಖಂಗೊಂಡಿದೆ. ಯಾವುದೇ ಪ್ರಾಣ ಹಾನಿ ಸಂಭಿವಿಸಿಲ್ಲ ಎನ್ನಲಾಗಿದೆ.