ನಂದಳಿಕೆಯಲ್ಲಿ ತೋಡಿಗೆ ಬಿದ್ದ ಕಾರು: ಪ್ರಯಾಣಿಕರು ಪಾರು

Team Udayavani, Jul 12, 2019, 9:46 AM IST

ಬೆಳ್ಮಣ್‌: ಕಾರ್ಕಳ ತಾಲೂಕಿನ ನಂದಳಿಕೆಯಲ್ಲಿ ಗುರುವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬಿಟ್ಟು ತೋಡಿಗೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್‌ ಅದರಲ್ಲಿದ್ದ ಕಾರ್ಕಳ ಮೂಲದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಕಾರ್ಕಳದಿಂದ ಪಡುಬಿದ್ರಿಯತ್ತ ಸಾಗುತ್ತಿದ್ದ ಕಾರು ನಂದಳಿಕೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಸುರಕ್ಷತೆಗೆ ಹಾಕಲಾಗಿರುವ ಕಲ್ಲುಗಳಿಗೆ ಢಿಕ್ಕಿ ಹೊಡೆದು ಬಳಿಕ ಸುಮಾರು 20 ಅಡಿ ಆಳಕ್ಕೆ ಉರುಳಿಬಿದ್ದಿತ್ತು. ನಿರಂತರ ಮಳೆ ಸುರಿಯುತ್ತಿದ್ದರಿಂದ ಕಂದಕದಲ್ಲಿಯೂ ನೀರು ತುಂಬಿ ನದಿಯಂತಾಗಿತ್ತು. ಕಾರ್ಕಳ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಬಿದ್ದ ಜಾಗದಿಂದ ಸ್ವಲ್ಪ ದೂರದಲ್ಲಿ ತೆರೆದ ಬೃಹತ್‌ ಬಾವಿಯೊಂದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ