ನಂದಳಿಕೆಯಲ್ಲಿ ಭೀಕರ ಅಪಘಾತ: ಸಹೋದರರಿಬ್ಬರು ಸಾವು
Team Udayavani, Jul 10, 2022, 4:06 PM IST
ಬೆಳ್ಮಣ್: ಇನ್ನೋವಾ ಕಾರು-ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸಹೋರರಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಂದಳಿಕೆ ಮಾವಿನಕಟ್ಟೆಯ ಬಳಿ ನಡೆದಿದೆ.
ನಂದಳಿಕೆಯ ನಿವಾಸಿಗಳಾದ ಸತೀಶ್ ಕುಲಾಲ್(28) ಹಾಗೂ ಸಂದೀಪ್ ಕುಲಾಲ್ ಮೃತ ದುರ್ದೈವಿಗಳು.
ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಸಂದೀಪ್ ಸ್ಥಳದಲ್ಲಿಯೇ ಮೃತ ಪಟ್ಟರೆ, ಸತೀಶ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆ: 6 ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ
ಸಂದೀಪ್ ಅವಿವಾಹಿತರಾಗಿದ್ದು, ಸತೀಶ್ ಗೆ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ತಿಳಿದು ಬಂದಿದೆ.
ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಠಾಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ