ಉಡುಪಿ: ಡಿವೈಡರ್ ಗೆ ನುಗ್ಗಿದ ಕಾರು: ಓರ್ವ ಗಂಭೀರ
Team Udayavani, Sep 6, 2019, 9:54 AM IST
ಉಡುಪಿ: ಕುಂದಾಪರ- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಶಾರದಾ ಇಂಟರ್ ನ್ಯಾಷನಲ್ ಹೋಟೇಲ್ ಬಳಿ ಕಾರೊಂದು ರಸ್ತೆ ಡಿವೈಡರ್ ಗೆ ನುಗ್ಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.