ಅಪ್ರಾಪ್ತ ವಯಸ್ಕರಿಗೆ ವಾಹನ ಕೊಟ್ಟರೆ ಕೇಸು ದಾಖಲು

ಬೈಕ್‌-ಕಾರು ನೀಡುವ ಪೋಷಕರೇ ಎಚ್ಚರ

Team Udayavani, Jan 14, 2021, 8:10 AM IST

ಅಪ್ರಾಪ್ತ ವಯಸ್ಕರಿಗೆ ವಾಹನ ಕೊಟ್ಟರೆ ಕೇಸು ದಾಖಲು

ಸಾಂದರ್ಭಿಕ ಚಿತ್ರ

ಕಾರ್ಕಳ: ಅಪ್ರಾಪ್ತ ವಯಸ್ಕರಾಗಿದ್ದು ವಾಹನ ಚಾಲನೆ ಮಾಡುವವರ ವಿರುದ್ಧ ಕಾರ್ಕಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ಸಿಕ್ಕಿಬಿದ್ದರೆ ಪೋಷಕರ ವಿರುದ್ಧವೇ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸುತ್ತಿದ್ದಾರೆ.

ಕಾರ್ಕಳ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಚಾಲಕ ಚಲಾಯಿಸುತ್ತಿದ್ದ ಕಾರು ಮತ್ತು ಟೆಂಪೋ ಮಧ್ಯೆ ಜ. 12ರಂದು ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಎರಡೂ ವಾಹನಗಳಿಗೂ ಹಾನಿಯಾಗಿದೆ. ಟೆಂಪೋ ಚಾಲಕ ನಗರ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸಿದ ನಗರ ಠಾಣೆ ಪೊಲೀಸರು ಅಪ್ರಾಪ್ತ ವಯಸ್ಸಿನ ಕಾರು ಚಾಲಕನ ಪೋಷಕರ ವಿರುದ್ಧ ಪ್ರಕರಣ ದಾಖ ಲಿಸಿದ್ದಾರೆ. ಬಳಿಕ ನಗರದಲ್ಲಿ  ನಿಯಮ ಉಲ್ಲಂ ಸುವವರ ವಿರುದ್ಧ ಕಠಿನ ಕ್ರಮಕ್ಕೆ  ಪೊಲೀಸರು  ಮುಂದಾಗಿದ್ದಾರೆ.

ನಿಯಮ ಉಲ್ಲಂಘನೆ :

ನಗರದಲ್ಲಿ  ಅಪ್ರಾಪ್ತ ವಯಸ್ಕರ ವಾಹನ ಚಾಲನೆ ಹೆಚ್ಚಾಗಿದೆ. ಶಾಲೆ, ಕಾಲೇಜುಗಳು ಆರಂಭವಾಗುತ್ತಿದ್ದಂತೆ ಮಕ್ಕಳು ದ್ವಿಚಕ್ರ, ಲಘು ವಾಹನಗಳಲ್ಲಿ  ನಿಯಮ ಉಲ್ಲಂ ಸಿ ಓಡಾಡುವುದು ಕಂಡುಬರುತ್ತಿದೆ. ಒಂದೇ ಬೈಕಲ್ಲಿ ಮೂರ್ನಾಲ್ಕು ಮಂದಿ ಸವಾರಿ ಮಾಡುತ್ತಿರುತ್ತಾರೆ. 12ರಿಂದ 14 ವರ್ಷದೊಳಗಿನ ಮಕ್ಕಳೇ ಇದರಲ್ಲಿ ಹೆಚ್ಚಾಗಿದ್ದಾರೆ. ಹೆಲ್ಮೆಟ್‌ ಧರಿಸದೆ ನಿಯಮ ಉಲ್ಲಂ ಸಿ ಓಡಾಡುವುದು ಕಾಣಬರುತ್ತದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ನಿರ್ಧರಿಸಿದ್ದಾರೆ.

ಅನಾಹುತಕ್ಕೆ ದಾರಿ :

18 ವರ್ಷಕ್ಕೆ ಮೊದಲು ವಾಹನ ಚಲಾಯಿಸಲು ಕಾನೂನಿನಲ್ಲಿ ಅವಕಾಶವಿಲ್ಲವೆಂದು ತಿಳಿದಿದ್ದರೂ ಹುಶಾರಾಗಿ ಹೋಗಿ ಬರಬೇಕು ಎಂದು ಎಚ್ಚರಿಕೆ ಕೊಟ್ಟು ಗಾಡಿ ಕೊಡುವ ಪೋಷಕರಿದ್ದಾರೆ. ಆದರೆ ಇದರಿಂದ ಸಮಸ್ಯೆಗಳೇ ಹೆಚ್ಚು ಎಂಬುದರ ಅರಿವಿಲ್ಲ. ನಿಯಮಗಳನ್ನು ಪಾಲಿಸದೆ ವಾಹನ ಚಾಲನೆ ಮಾಡುವುದರಿಂದ ಮತ್ತಷ್ಟು ಅಪಾಯ ಸಂಭವಿಸುವ ಸಾಧ್ಯತೆಯಿದೆ.

ಪೊಲೀಸರ ಎಚ್ಚರಿಕೆ ಮಧ್ಯೆಯೂ ಹೆಚ್ಚಳ :

ಮೋಟಾರು ವಾಹನ ಕಾಯಿದೆ ಕಲಂ 184ರಡಿ ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟ ಪೋಷಕರು ಅಥವಾ ವಾಹನ ಮಾಲೀಕರಿಗೆ, ಅಪ್ರಾಪ್ತರಿಗೆ ದಂಡ ವಿಧಿಸಲಾಗುತ್ತಿದೆ. ಮೋಟಾರು ವಾಹನ ಕಾಯ್ದೆಯಂತೆ 50 ಲಕ್ಷ ರೂ ತನಕವೂ ದಂಡ ವಿಧಿಸಲು ಅವಕಾಶವಿದೆ. ಈ ವಿಚಾರದಲ್ಲಿ ಎಷ್ಟೇ ಎಚ್ಚರಿಕೆ ನೀಡಿದರೂ ಘಟನೆಗಳು ಮರುಕಳಿಸುತ್ತಲೇ ಇವೆ.

2019ರಲ್ಲಿ   ಸಾಣುರು ಬಳಿ ಅಪ್ರಾಪ್ತ ವಾಹನ ಚಾಲನೆ ಮಾಡಿದ್ದ  ಸಂದರ್ಭ ಇಬ್ಬರು ಮೃತಪಟ್ಟ ಘಟನೆ ನಡೆದಿತ್ತು. ಬಳಿಕ ಘಟನೆಗಳು ನಡೆಯದಿದ್ದರೂ, ಅಪ್ರಾಪ್ತರು ವಾಹನ ಚಲಾಯಿಸುವ ಪ್ರಕರಣಗಳು ಏರಿಕೆಯಾಗುತ್ತಿವೆ.

ಲೈಸೆನ್ಸ್‌  ಹೊಂದದೆ ವಾಹನ ಚಲಾಯಿಸುವುದು ಕಾನೂನು ಬಾಹಿರ.  ಚಾಲನೆ ಪರವಾನಿಗೆ ಹೊಂದದಿದ್ದಲ್ಲಿ ರಸ್ತೆ ನಿಯಮಗಳ ಬಗ್ಗೆ ತಿಳಿಯುವುದಿಲ್ಲ.  ಮಕ್ಕಳಿಗಿಂತ ಹೆಚ್ಚಾಗಿ ಪೋಷಕರೇ ಅಪ್ರಾಪ್ತ ವಯಸ್ಕರಿಗೆ ವಾಹನ ಕೊಡುವ ವಿಚಾರದಲ್ಲಿ  ಜಾಗೃತರಾಗಿರಬೇಕು.ತೇಜಸ್ವಿ, ಪೊಲೀಸ್‌ ಉಪ ನಿರೀಕ್ಷಕರು, ಗ್ರಾಮಾಂತರ ಠಾಣೆ ಕಾರ್ಕಳ

ಅಪ್ರಾಪ್ತ  ವಯಸ್ಕರು ವಾಹನ ಚಲಾಯಿಸುವುದು ಕಂಡು ಬಂದಲ್ಲಿ  ಅವರ ಮೇಲೆ ಮತ್ತು ಹೆತ್ತವರ  ಮೇಲೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಕಾಯ್ದೆ  ಪ್ರಕಾರ ದಂಡ , ಕೇಸ್‌ ಹಾಕಲಾಗುವುದು.ಮಧು ಬಿ.ಇ., ಪೊಲೀಸ್‌ ಉಪನಿರೀಕ್ಷಕರು, ನಗರ  ಪೊಲೀಸ್‌ ಠಾಣೆ ಕಾರ್ಕಳ

 ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.