ಮಕ್ಕಳ ಕಲಾತ್ಮಕತೆಯನ್ನು ಗುರುತಿಸುವುದು ಪೋಷಕರ ಕರ್ತವ್ಯ: ಅಲಪಾಟಿ ವಿಠ್ಠಲೇಶ್ವರ್

ಮಣಿಪಾಲದ ತ್ರಿವರ್ಣ ಕಲಾ ಕೇಂದ್ರದಲ್ಲಿ ‘ಕಲಾ ಸ್ಪೂರ್ತಿ’ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ

Team Udayavani, Aug 16, 2019, 2:07 AM IST

ಉಡುಪಿ : ಮಕ್ಕಳಲ್ಲಿರುವ ಕಲಾತ್ಮಕತೆಯನ್ನು ಗುರುತಿಸುವುದು ಪ್ರತೀ ಹೆತ್ತವರ ಕರ್ತವ್ಯ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಹ್ಯುಮಾನಿಟೀಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥರಾದ ಪ್ರೋಫೆಸರ್ ಅಲಪಾಟಿ ವಿಠ್ಠಲೇಶ್ವರ್ ಅವರು ಅಭಿಪ್ರಾಯಪಟ್ಟರು.

ಮಣಿಪಾಲದಲ್ಲಿರುವ ತ್ರಿವರ್ಣ ಕಲಾ ಕೇಂದ್ರದ ‘ಕಲಾ ಸ್ಪೂರ್ತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ವೇದಿಕೆ ವಿದ್ಯಾರ್ಥಿಗಳಿಗೆ ಮುಂದಿನ ಯಶಸ್ವಿಗೆ ಅವಕಾಶ ಕಲ್ಪಿಸಿದೆ ಹಾಗಾಗಿ ಇದೊಂದು ಅರ್ಥಪೂರ್ಣ ಕಾರ್ಯಕ್ರಮ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.


ಮುಖ್ಯ ಅತಿಥಿಗಳಾಗಿ ಕುಂಜಿಬೆಟ್ಟು ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಶನ್‌ ನ ಪ್ರಾಂಶುಪಾಲರಾದ ಶ್ರೀಮತಿ ಸುನೀತಾ, ಉಡುಪಿಯ ಇನ್ಫಿನಿಟ್ ಪವರ್ ಸೊಲ್ಯುಶನ್ಸ್ ನ ಉಧ್ಯಮಿ ಪ್ರಶಾಂತ್ ರಾವ್, ಉಡುಪಿ – ಇಂದ್ರಾಳಿ ಜೆಸಿಐ ಸ್ಥಾಪಕಾಧ್ಯಕ್ಷೆ ಶೆರ್ಲಿ ಮನೋಜ್ ಹಾಗೂ ತ್ರಿವರ್ಣ ಕಲಾ ಕೇಂದ್ರದ ಮುಖ್ಯಸ್ಥ, ಕಲಾಲಯದ ಹರೀಶ್ ಸಾಗಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ 70 ಜ್ಯೂನಿಯರ್ ವಿದ್ಯಾರ್ಥಿಗಳ ಕಲಾಕೃತಿ ಪ್ರದರ್ಶನ, 46 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮತ್ತು ಪೋಷಕರಿಗೆ ಕಲೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.

ದಿಯಾ ಕುಂದರ್ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಲಾ ಕೇಂದ್ರದ ಶಿಕ್ಷಕಿ ಪವಿತ್ರಾ ಸಿ. ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಲಾವಿದ ಹರೀಶ್ ಸಾಗಾ ಅವರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅದಿಥಿ ಎ. ರಾಜ್ ವಂದನಾರ್ಪಣೆ ಸಲ್ಲಿಸಿದರು.ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ