ಮಲ್ಪೆ : ಮೀನಿನಲ್ಲಿ ರಾಸಾಯನಿಕ ಪತ್ತೆಯಾಗಿಲ್ಲ
Team Udayavani, Aug 5, 2018, 10:41 AM IST
ಉಡುಪಿ: ಮಲ್ಪೆ ಬಂದರು, ಉಡುಪಿ ಮಹಿಳಾ ಮೀನು ಮಾರುಕಟ್ಟೆ ಮತ್ತು ಕುಂದಾಪುರದ ಮೀನು ಮಾರುಕಟ್ಟೆಗಳ ಮೀನುಗಳ ಮಾದರಿಗಳನ್ನು ಪರಿಶೀಲಿಸಲಾಗಿದ್ದು ಯಾವುದೇ ರಾಸಾಯನಿಕ ಅಂಶ ಪತ್ತೆ ಆಗಿಲ್ಲ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಲಹಾ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.ಮೀನು ಕೆಡದಂತೆ ಫಾರ್ಮಾಲಿನ್ ರಾಸಾಯನಿಕ ಬಳಕೆ ಮಾಡಲಾಗುತ್ತಿದೆಯೇ ಎಂದು ತಿಳಿಯಲು ಮಲ್ಪೆ ಬಂದರಿನಿಂದ ಹೊರ ಹೋಗುವ ಮೀನು ಲಾರಿಗಳ ಮೀನು ಮತ್ತು ಮಲ್ಪೆಗೆ ಆಗಮಿಸುವ ಹೊರ ರಾಜ್ಯದ ಲಾರಿಗಳ ಮೀನುಗಳನ್ನೂ ಪರಿಶೀಲಿಸಲಾಗಿದೆ. ಅವುಗಳಲ್ಲಿ ಫಾರ್ಮಾಲಿನ್ ಅಂಶ ಪತ್ತೆಯಾಗಿಲ್ಲ.
ಮೈಸೂರಿನ ಪ್ರಯೋಗಾಲಯ ವರದಿ
ಪರಿಶೀಲನೆಗೆ ತೆಗೆದುಕೊಂಡ ಒಟ್ಟು 15 ಮಾದರಿಗಳನ್ನು ಮೈಸೂರಿನ ಎನ್ಎಬಿಎಲ್ (ನ್ಯಾಷನಲ್ ಅಕ್ರಿಡರೇಟೆಡ್ ಬೋರ್ಡ್ ಫಾರ್ ಲ್ಯಾಬೋರೇಟರಿಗೆ ಪರಿಶೀಲನೆಗೆ ಕಳುಹಿಸಲಾಗಿತ್ತು. ಜಿಲ್ಲೆಯ ಮೀನುಗಳಲ್ಲಿ ಯಾವುದೇ ರಾಸಾಯನಿಕ ಬಳಕೆ ಆಗಿಲ್ಲ ಎಂದು ವರದಿ ಬಂದಿದೆ. ಹಾಗಾಗಿ ಆತಂಕ ಬೇಡ ಎಂದು ಅಧಿಕಾರಿಗಳು ತಿಳಿಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರು ತಯಾರಿಕಾ ಘಟಕಗಳಿಗೆ ಮತ್ತು ಆಹಾರ ತಯಾರಿಕಾ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಯವರು ಆಹಾರ ಸುರಕ್ಷಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರೋಹಿಣಿ, ಆರೋಗ್ಯ ಇಲಾಖೆ ಮತ್ತು ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ