ಚಿತ್ತೂರು: ಗ್ರಾಮಸ್ಪಂದನ ಬಿಜೆಪಿ ಕಾರ್ಯಕರ್ತರ ಸಭೆ
Team Udayavani, Aug 7, 2017, 7:20 AM IST
ಕುಂದಾಪುರ : ಚಿತ್ತೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಪಂದನ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮ ಆ. 4ರಂದು ಜರಗಿತು.
ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಕ್ಷೇತ್ರ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್, ದೀಪಕ್ ಕುಮಾರ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷ ರಾಮಚಂದ್ರ ಮಂಜ, ಉಪಾಧ್ಯಕ್ಷ ಚಂದ್ರಯ್ಯ ಆಚಾರ್ ಕಳಿ, ತಾಲೂಕು ಪಂಚಾಯತ್ ಸದಸ್ಯರಾದ ಕರಣ್ ಕುಮಾರ ಪೂಜಾರಿ, ಉಮೇಶ ಶೆಟ್ಟಿ ಕಲ್ಗದ್ದೆ, ಇಂದಿರ ಶೆಟ್ಟಿ ಪಕ್ಷದ ಪ್ರಮುಖರಾದ ಅತುಲ್ ಕುಮಾರ ಶೆಟ್ಟಿ, ಪ್ರಕಾಶ ಪೂಜಾರಿ ಜೆಡ್ಡು, ಮಂಜುನಾಥ ದೇವಾಡಿಗ, ಶಿವರಾಜ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷ ರವಿರಾಜ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ ಶೆಟ್ಟಿ ಮಕ್ಕಿಮನೆ, ಚಂದ್ರ ಶೆಟ್ಟಿ ಕೂಳೂರು, ಸುರೇಶ ಪೂಜಾರಿ, ಅನಿಲ್ ಶೆಟ್ಟಿ, ರಾಜೇಶ ಶೆಟ್ಟಿ ಮತ್ತಿತರ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಿವೃತ್ತ ಯೋಧರಾದ ಅಶೋಕ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಮೋಹನದಾಸ ಶೆಟ್ಟಿ, ಹಾಗೂ ಹಿರಿಯ ಕಾರ್ಯಕರ್ತ ಜಯಕರ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.
ಅನಾರೋಗ್ಯ ದಿಂದ ಬಳಲುತ್ತಿರುವ ಕಂಚಿನ ಕೊಡ್ಲು ನಿವಾಸಿ ಸಂದೀಪ ಪೂಜಾರಿ ಅವರ ತಂದೆಗೆ ಚಿತ್ತೂರು ಗ್ರಾಮ ಸಮಿತಿ ವತಿಯಿಂದ ಧನಸಹಾಯ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್