ಸ್ವಚ್ಛತೆಗೆ ಸ್ವಯಂ ಜಾಗೃತಿ ಅಗತ್ಯ: ಲಾಲಾಜಿ ಮೆಂಡನ್‌


Team Udayavani, Nov 15, 2019, 5:31 AM IST

1411RA2E_1411MN__1

ಪಡುಬಿದ್ರಿ: ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ರಸ್ತೆ ಬದಿ, ನದಿ, ಕಡಲ ತೀರಗಳಲ್ಲಿ ಮನೆ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದು ಹೆಚ್ಚು ಕಂಡು ಬಂದಿದೆ. ಇದರಿಂದ ಪಕ್ಷಿ, ಪ್ರಾಣಿ ಹಾಗೂ ಜಲಚರಗಳಿಗೆ ತೀವ್ರ ತೊಂದರೆ, ಹಾನಿಗಳಾಗುತ್ತಿವೆ. ಈ ಮೂಲಕ ಮಾನವರ ದೇಹದೊಳಕ್ಕೂ ತ್ಯಾಜ್ಯ ಸೇರಿ ಆರೋಗ್ಯ ಹದಗೆಡುತ್ತದೆ. ಈ ಬಗ್ಗೆ ಸ್ವಯಂ ಜಾಗೃತಿ ಅತ್ಯಗತ್ಯವಾಗಿದೆ ಎಂದು ಕಾಪು ಶಾಸಕ ಲಾಲಾಜಿ ಆರ್‌.ಮೆಂಡನ್‌ ಹೇಳಿದರು.

ನ. 14ರಂದು ಹೆಜಮಾಡಿಯ ಕಡಲ ತೀರದಲ್ಲಿ ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಹೆಜಮಾಡಿ ಗ್ರಾ. ಪಂ. ಸಹಯೋಗದೊಂದಿಗೆ ಕೇಂದ್ರ ಸರಕಾರದ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ, ಬ್ಲೂ ಫ್ಲ್ಯಾಗ್‌ ಬೀಚ್‌ ಅಭಿವೃದ್ಧಿ, ಉಡುಪಿ ಜಿಲ್ಲಾ ಕರಾವಳಿ ಬೀಚ್‌ ಅಭಿವೃದ್ಧಿ ಸಮಿತಿ ಹಾಗೂ ಪರಿಸರದ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಸ್ವತ್ಛ ನಿರ್ಮಲ ಸಮುದ್ರ ತೀರ ಅಭಿಯಾನದಡಿ ಕಡಲ ತೀರದ ಸ್ವತ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೀತಿ ಸಂಶೋಧನಾ ಸಂಸ್ಥೆಯ ಸಂಪರ್ಕ ಅಧಿಕಾರಿ ನಾಗೇಂದ್ರ ಪ್ರಸಾದ್‌ ಮಾತನಾಡಿ, 2050ರ ಹೊತ್ತಿಗೆ ಸಮುದ್ರದಲ್ಲಿ ಮೀನುಗಳ ಸಂಖ್ಯೆಗಿಂತ ಪ್ಲಾಸ್ಟಿಕ್‌ ಕಂಡುಬರುವ ಅಪಾಯದ ಕುರಿತು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಇದು ನಮ್ಮ ಶರೀರಕ್ಕೂ ಸೇರುವ ಅಪಾಯವಿದೆ. ಹಾಗಾಗಿ ತ್ಯಾಜ್ಯ ವಿಲೇವಾರಿಗೆ ಕಟ್ಟುನಿಟ್ಟಿನ ಕಾರ್ಯಸೂಚಿ ಹಮ್ಮಿಕೊಳ್ಳಲೇಬೇಕಾಗಿದೆ ಎಂದರು.

ಹೆಜಮಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ ಯು. ಪುತ್ರನ್‌ ಅಧ್ಯಕ್ಷತೆ ವಹಿಸಿದ್ದರು. ಜಿ. ಪಂ ,ಸದಸ್ಯ ಶಶಿಕಾಂತ್‌ ಪಡುಬಿದ್ರಿ, ಉಡುಪಿ ತಾ. ಪಂ. ಅಧ್ಯಕ್ಷೆ ನೀತಾ ಗುರುರಾಜ್‌, ಸದಸ್ಯೆ ರೇಣುಕಾ ಪುತ್ರನ್‌, ಗ್ರಾ. ಪಂ. ಉಪಾಧ್ಯಕ್ಷ ಸುಧಾಕರ ಕರ್ಕೇರ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಚಂದ್ರಶೇಖರ ನಾಯಕ್‌, ರಾಜ್ಯ ರೆಡ್‌ಕ್ರಾಸ್‌ ನಿರ್ದೇಶಕ ಯತೀಶ್‌ ಬೆ„ಕಂಪಾಡಿ, ಕಾಪು ಬಿಜೆಪಿ ಅಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಹಿರಿಯರಾದ ನಾರಾಯಣ ಕೆ. ಮೆಂಡನ್‌, ಕರಾವಳಿ ಯುವಕ ವೃಂದದ ಅಧ್ಯಕ್ಷ ಅಶೋಕ್‌ ವಿ. ಕೆ, ಕಾರ್ಯದರ್ಶಿ ಶರಣ್‌ಕುಮಾರ್‌ ಮಟ್ಟು, ಪಿಡಿಒ ಮಮತಾ ವೈ. ಶೆಟ್ಟಿ, ಕೋಸ್ಟಲ್‌ ಟೂರಿಸಮ್‌ ಸಮಿತಿಯ ಕಾರ್ಯದರ್ಶಿ ಗೌರವ್‌ ಶೇಣವ, ಉದ್ಯಮಿ ಗುಣಪಾಲ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.ಬ್ಲೂ ಫ್ಲ್ಯಾಗ್‌ ಬೀಚ್‌ನ ಅಶೋಕ್‌ ಶೆಟ್ಟಿ ಸ್ವಾಗತಿಸಿದರು.

ವಿಜಯ ಶೆಟ್ಟಿ ವಂದಿಸಿದರು. ಪ್ರಿಯಾ ಕಾರ್ಯಕ್ರಮ ನಿರ್ವಹಿಸಿದರು.ಬಳಿಕ ಹೆಜಮಾಡಿ ಮತ್ತು ಪಡುಬಿದ್ರಿಯ ಎಲ್ಲಾ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಹೆಜಮಾಡಿ ಬೀಚ್‌ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಗಂಭೀರ ಸಮಸ್ಯೆ
ಉಡುಪಿ ಅಸೋಸಿಯೇಶನ್‌ ಆಫ್‌ ಕೋಸ್ಟಲ್‌ ಟೂರಿಸಂ ನ ಅಧ್ಯಕ್ಷ ಮನೋಹರ ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಸಮುದ್ರ ತೀರದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ಹೆಚ್ಚು ಕಂಡುಬರುತ್ತಿದೆ. ಸಂಶೋಧಕರ ಅಧ್ಯಯನ ಪ್ರಕಾರ ಕಡಲ ಮೀನುಗಳಲ್ಲಿ ಮೈಕ್ರೋ ಪ್ಲಾಸ್ಟಿಕ್‌ ಅಂಶ ಕಂಡುಬಂದಿರುವುದು ಗಂಭೀರ ವಿಚಾರ. ಈ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳದಿದ್ದಲ್ಲಿ ಮನುಷ್ಯರು ಗಂಭೀರ ಆರೋಗ್ಯ ಸಮಸ್ಯೆ ಎದುರಿಸಬೇಕಾದೀತು ಎಂದರು.

ಟಾಪ್ ನ್ಯೂಸ್

jagadish shettar

ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

2gold

ಮಂಗಳೂರು ವಿಮಾನ ನಿಲ್ದಾಣದಲ್ಲಿ 29,14,160 ಮೌಲ್ಯದ ಚಿನ್ನ ವಶ

thavarchand gahlot

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

1fire2

ಚಾರ್ಮಾಡಿ ಅರಣ್ಯದಲ್ಲಿ ಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

ಬಿ.ಸಿ.ಪಾಟೀಲ್

ಸೆಲ್ಯೂಟ್ ಹೊಡೆಯುತ್ತಿದ್ದ ಮೈದಾನದಲ್ಲಿ ಗೌರವ ಸ್ವೀಕರಿಸಿದ್ದು ನನ್ನ ಭಾಗ್ಯ: ಬಿ.ಸಿ.ಪಾಟೀಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಸೇರಿಲ್ಲ 3 ತಿಂಗಳ ದುಡಿಮೆ ಕಾಸು!

ಕೈಸೇರಿಲ್ಲ 3 ತಿಂಗಳ ದುಡಿಮೆ ಕಾಸು!

ಹಿಜಾಬ್‌ ವಿವಾದ: ಉನ್ನತ ಮಟ್ಟದ ಸಮಿತಿ ರಚನೆ ಯಥಾಸ್ಥಿತಿ ಕಾಯುವಂತೆ ನಿರ್ದೇಶನ

ಹಿಜಾಬ್‌ ವಿವಾದ: ಉನ್ನತ ಮಟ್ಟದ ಸಮಿತಿ ರಚನೆ ಯಥಾಸ್ಥಿತಿ ಕಾಯುವಂತೆ ನಿರ್ದೇಶನ

ಸಾವಿನಲ್ಲೂ ಸಾರ್ಥಕ್ಯ ಮೆರೆದ ಮಹಿಳೆ; ಅಂಗಾಂಗ ದಾನ, 6 ಜನರಿಗೆ ಪ್ರಯೋಜನ

ಸಾವಿನಲ್ಲೂ ಸಾರ್ಥಕ್ಯ ಮೆರೆದ ಮಹಿಳೆ; ಅಂಗಾಂಗ ದಾನ, 6 ಜನರಿಗೆ ಪ್ರಯೋಜನ

ಚಳಿ, ಮೋಡ ಹೆಚ್ಚಳ: ಗೇರು, ಮಾವು ಬೆಳೆಗೆ ಹಾನಿ

ಚಳಿ, ಮೋಡ ಹೆಚ್ಚಳ: ಗೇರು, ಮಾವು ಬೆಳೆಗೆ ಹಾನಿ

ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ

ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

5democracy

ಮತದಾರರ ಕೈಯಲ್ಲಿದೆ ಸುಭದ್ರ ಪ್ರಜಾಪ್ರಭುತ್ವ

jagadish shettar

ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್

4——–

ಕಲಬುರಗಿ-ಬೆಂಗಳೂರು ರೈಲು ಶೀಘ್ರ ಆರಂಭ

Untitled-1

ದೇಶದ ಉನ್ನತಿಗಾಗಿರುವ ಕಾನೂನುಗಳಿಗೆ ವಿರೋಧ ವಿಷಾಧನೀಯ

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.