ಕಾಲಹರಣ ಸಲ್ಲ, ಕ್ಷೇತ್ರಕಾರ್ಯ ಮುಖ್ಯ: ಡಿಸಿ ತಾಕೀತು

Team Udayavani, Aug 22, 2019, 5:04 AM IST

ಉಡುಪಿ: ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕ್ಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ, ಜನರ ಸಮಸ್ಯೆ ಆಲಿಸಿ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಎಂದು ನೂತನ ಜಿಲ್ಲಾಧಿಕಾರಿ ಜಿ. ಜಗದೀಶ್‌ ಸೂಚಿಸಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲ ಅಧಿಕಾರಿಗಳು ಕಚೇರಿ ಗಳಿಂದಾಚೆಗೆ ತೆರಳಿ ಸಮಸ್ಯೆಗಳನ್ನು ಅರಿಯಬೇಕು ಮತ್ತು ಕಾಮಗಾರಿಗಳನ್ನು ಪರಿಶೀಲಿಸಬೇಕು. ಅಧೀನ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಬೇಕು. ಎಲ್ಲ ಅಧಿಕಾರಿ ಮತ್ತು ಸಿಬಂದಿ ಕಚೇರಿಗೆ ಸಮಯಕ್ಕೆ ಸರಿಯಗಿ ಆಗಮಿಸಿ, ಕೆಲಸ ಕಾರ್ಯಗಳನ್ನು ಮುಗಿಸುವಂತೆ ಮತ್ತು ಕರ್ತವ್ಯದ ಅವಧಿಯಲ್ಲಿ ವೃಥಾ ಕಾಲಹರಣ ಮಾಡದೆ ನಿಗದಿತ ಸಮಯದಲ್ಲಿ ಗುಣಮಟ್ಟದ ಕೆಲಸ ನಿರ್ವಹಿಸುವುದಕ್ಕೆ ಆದ್ಯತೆ ನೀಡಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಾನು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಸಾರ್ವಜನಿಕರನ್ನು ಅಲೆದಾಡಿಸಬೇಡಿ
ಕಚೇರಿಗೆ ಆಗಮಿಸುವ ಸಾರ್ವಜನಿಕರನ್ನು ಸೂಕ್ತ ರೀತಿಯಲ್ಲಿ ಗೌರವಿಸಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಅನವಶ್ಯಕವಾಗಿ ವಿವಿಧ ಕಚೇರಿಗಳಿಗೆ ಅಲೆದಾಡಿಸಬೇಡಿ. ನಿಮ್ಮ ಕಚೇರಿಯಲ್ಲಿ ಸಾರ್ವಜನಿಕರು ಕೋರುವ ಸೇವೆ ಇಲ್ಲವಾದಲ್ಲಿ ಸಂಬಂಧಪಟ್ಟ ಇಲಾಖೆಗೆ ತೆರಳಿ ಸೌಲಭ್ಯ ಪಡೆಯುವ ಬಗ್ಗೆ ಮಾಹಿತಿ ನೀಡಿ. ದೂರುಗಳು ಬಾರದಂತೆ ಕರ್ತವ್ಯ ನಿರ್ವಹಿಸಿ ಎಂದು ಜಗದೀಶ್‌ ಹೇಳಿದರು.

ಮೊಬೈಲ್‌ ಸ್ವಿಚ್‌ ಆಫ್ ಕೂಡದು
ಎಲ್ಲ ಅಧಿಕಾರಿಗಳು ತಮ್ಮ ಮೊಬೈಲ್‌ ಸ್ವಿಚ್‌ ಆಫ್ ಆಗದಂತೆ ಎಚ್ಚರಿಕೆ ವಹಿಸಬೇಕು. ಕರೆ ಮಾಡಿದಾಗ ಸಿಗುವಂತಿರಬೇಕು. ಕೇಂದ್ರ ಸ್ಥಾನದಲ್ಲಿ ಲಭ್ಯರಿದ್ದು ಹೊರಹೋಗುವಾಗ ಅನುಮತಿ ಪಡೆಯಬೇಕು. ಪ್ರಸ್ತಾವನೆಗಳನ್ನು ಸಲ್ಲಿಸುವಾಗ ಸ್ಪಷ್ಟ ಅಭಿಪ್ರಾಯಗಳೊಂದಿಗೆ ಪೂರ್ಣ ದಾಖಲೆಗಳ ಸಹಿತ ಸಲ್ಲಿಸಿ. ಕಡತಗಳ ಶೀಘ್ರ ವಿಲೇವಾರಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಇಲಾಖೆಗಳಲ್ಲಿ ಅಧಿಕಾರಿ ಮತ್ತು ಸಿಬಂದಿ ತಂಡವಾಗಿ ಕೆಲಸ ಮಾಡಿ ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸಬೇಕು. ಏನೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನನ್ನು ಭೇಟಿಯಾಗಿ ಚರ್ಚಿಸಿ ಎಂದು ಅಧಿಕಾರಿ ಗಳಿಗೆ ತಿಳಿಸಿದರು.
ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ