ಅಭಿವೃದ್ಧಿಯ ವರದಿ ಒಪ್ಪಿಸಲು “ಜನಸಂಪರ್ಕ ಸಭೆ’: ಸಚಿವ ಪ್ರಮೋದ್‌


Team Udayavani, May 28, 2017, 3:33 PM IST

270517SG2.jpg

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 4 ವರ್ಷಗಳಲ್ಲಿ ವಿವಿಧ ಇಲಾಖೆ ಮತ್ತು ಯೋಜನೆಗಳಡಿ ಮಾಡಲಾದ ಕಾಮಗಾರಿಗಳ ಬಗ್ಗೆ ಜನತೆಗೆ ವರದಿ ಒಪ್ಪಿಸಬೇಕು. ಇನ್ನಷ್ಟು ಕಾಮಗಾರಿಗಳು ನಡೆಯಬೇಕಿದ್ದರೆ ಜನರಿಂದಲೇ ನೇರವಾಗಿ ತಿಳಿದುಕೊಂಡು ಅದನ್ನು ಮಾಡಿಸಿಕೊಡಬೇಕೆಂಬ ನೆಲೆಯಲ್ಲಿ ವಿನೂತನ ಕಾರ್ಯಕ್ರಮವಾಗಿ ಈ ಜನಸಂಪರ್ಕ ಸಭೆ ಆಯೋಜಿಸಲಾಗಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಕರಂಬಳ್ಳಿ ನೇಕಾರರ ಕಾಲನಿಯ (ಡಾ| ಎ.ವಿ. ಬಾಳಿಗ ಆಸ್ಪತ್ರೆಯ ಹತ್ತಿರ) ಅಂಗನವಾಡಿ ಬಳಿ ಬಯಲು ರಂಗ ಮಂಟಪದಲ್ಲಿ ಶನಿವಾರ ನಡೆದ ಉಡುಪಿ ನಗರಸಭೆ ವ್ಯಾಪ್ತಿಯ ಕರಂಬಳ್ಳಿ ವಾರ್ಡ್‌ ಮಟ್ಟದ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ 1,769 ಕೋ. ರೂ. ಅಭಿವೃದ್ಧಿ ಕೆಲಸಗಳ ಪರಾಮರ್ಶೆಗಾಗಿ “ಗ್ರಾಮದೆಡೆ ವಿಶ್ವಾಸದ ನಡೆ’ ಎನ್ನುವ ವಿಶಿಷ್ಟ ಕಾರ್ಯಕ್ರಮದ ಮೂಲಕ ಜನರ ಕಷ್ಟ ಮತ್ತು ಬೇಡಿಕೆಗಳಿಗೆ ಸ್ಪಂದಿಸಲಾಗುತ್ತಿದೆ. ಜನರಿಂದ ಬಂದ ಬೇಡಿಕೆಗಳಿಗೆ ಸ್ಪಂದಿಸಿ ಸರಕಾರದಿಂದ ಅನುದಾನ ಬಂದಾಗ ಹಂತ ಹಂತವಾಗಿ ವಿವಿಧ ಕಾಮಗಾರಿಗಳನ್ನು ಮಾಡಿಸಿ ಕೊಡಲಾಗುವುದು. 800 ರೂ. ಮಿತಿಯೊಳಗಿನ ವಿದ್ಯುತ್‌ ಬಿಲ್‌ ಪಾವತಿಸುವವರು ಬಿಪಿಎಲ್‌ ಕಾರ್ಡ್‌ ಪಡೆದು ಸರಕಾರದಿಂದ ಸಿಗುವ ಹಲವು ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಸವಲತ್ತು ವಿತರಣೆ 
ಇದೇ ಸಂದರ್ಭ ಸಚಿವರು ಅರ್ಹಫ‌ಲಾನುಭವಿಗಳಿಗೆ ವಿವಿಧ ಪಿಂಚಣಿ, ಸವಲತ್ತುಗಳಾದ ವಿಧವಾ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ, ಅಂಗ ವಿಕಲವೇತನ, ಪ್ರೋತ್ಸಾಹಧನ ವಿತರಿಸಿದರು.

ಗ್ರಾಮಸ್ಥರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದ ಸಚಿವರು ಬಹುತೇಕ ಅರ್ಜಿಗಳಿಗೆ ವಿವಿಧ ಇಲಾಖಾಧಿಕಾರಿ ಗಳ ಮುಖಾಂತರ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕೆರೆ, ಕರಂಬಳ್ಳಿ ವಾರ್ಡ್‌ ಸದಸ್ಯೆ ಸೆಲಿನಾ ಕರ್ಕಡ, ಮಾಜಿ ಮಂಡಲ ಪ್ರಧಾನ ಗೋಪಾಲ ಶೆಟ್ಟಿ, ನಗರಸಭೆ ಸದಸ್ಯರಾದ ಸತೀಶ್‌ ಪುತ್ರನ್‌, ಆರ್‌.ಕೆ. ರಮೇಶ್‌, ರಮೇಶ್‌ ಕಾಂಚನ್‌, ಜನಾರ್ದನ್‌ ಭಂಡಾರ್ಕರ್‌, ಗಣೇಶ್‌ನೇರ್ಗಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ಸುದರ್ಶನ್‌, ಬ್ರಹ್ಮಾವರ ತಹಶೀ ಲ್ದಾರ್‌ ಪ್ರದೀಪ್‌ ಕುರುಡೇಕರ್‌ ಮೊದಲಾದವರು ಉಪಸ್ಥಿತರಿದ್ದರು.ನಗರಸಭೆ ಪೌರಾಯುಕ್ತ ಡಿ. ಮಂಜುನಾಥಯ್ಯ ಪ್ರಸ್ತಾವನೆಗೈದು ವಂದಿಸಿದರು. ಸುಧಾಕರ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು. 

ವಿಶೇಷ ಅನುದಾನಕ್ಕೆ ಬೇಡಿಕೆ
ಸಚಿವನಾಗುವ ಮೊದಲು ಆಶ್ವಾಸನೆ ಕೊಟ್ಟಂತೆ ಈಗಾಗಲೇ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ ಕಾಮಗಾರಿ ಮಾಡಲಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಜನರ ಪರವಾಗಿ ಮುಖ್ಯಮಂತ್ರಿ, ಇತರ ಸಚಿವರು ಹಾಗೂ ಅಧಿಕಾರಿಗಳಲ್ಲಿ ಭಿಕ್ಷುಕನಂತೆ ಅನುದಾನ ಕೇಳಿ ತಂದಿದ್ದೇನೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಅವರಲ್ಲಿ ವಿಶೇಷ ಅನುದಾನಕ್ಕಾಗಿ ಈಗಾಗಲೇ ಬೇಡಿಕೆ ಸಲ್ಲಿಸಿದ್ದೇನೆ. ಒಟ್ಟಾರೆ ಉಡುಪಿ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿದ್ದೇನೆ. ಜನರ ಆಶೀರ್ವಾದದಿಂದ ಸಚಿವನಾದ ನನಗೆ ಜನರ ಇನ್ನೂ ಹೆಚ್ಚಿನ ಚಾಕರಿ ಮಾಡಲು ಸಿದ್ಧನಿದ್ದೇನೆ ಎಂದು ಸಚಿವರು ಭರವಸೆ ನೀಡಿದರು.
 

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.