ಕಟಪಾಡಿ: ನೆರೆ ನೀರಿನಲ್ಲಿ ಮೃತದೇಹ ಹೊತ್ತುಕೊಂಡು ಹೋಗಿ ಶವಸಂಸ್ಕಾರ
Team Udayavani, Jul 2, 2022, 10:25 AM IST
ಕಟಪಾಡಿ: ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಶವವನ್ನು ನೆರೆ ನೀರಿನಲ್ಲಿಯೇ ಹೊತ್ತುಕೊಂಡು ಹೋಗಿ ಶವ ಸಂಸ್ಕಾರ ನಡೆಸಿದ ಘಟನೆ ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ದೇವರಕುದ್ರು ಎಂಬಲ್ಲಿ ಶುಕ್ರವಾರ ನಡೆದಿದೆ.
ದೇವರಕುದ್ರುಗೆ ಸಂಪರ್ಕ ರಸ್ತೆ ಇದ್ದರೂ ರಸ್ತೆ, ತೋಟದಲ್ಲಿ ನೆರೆ ನೀರು ತುಂಬಿದ್ದ ಕಾರಣದಿಂದ ಆ್ಯಂಬುಲೆನ್ಸ್ ಮನೆಯವರೆಗೆ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ ಮಟ್ಟು ದೇವರಕುದ್ರು ಬೊಮ್ಮನ್ ತೋಟದ ರಾಮಪ್ಪ ಕುಂದರ್ ಪತ್ನಿ ಬೇಬಿ ಪೂಜಾರಿ ಅವರ ಪಾರ್ಥಿವ ಶರೀರವನ್ನು ಸುಮಾರು ಅರ್ಧ ಕಿ.ಮೀ. ದೂರದವರೆಗೆ ಹೊತ್ತುಕೊಂಡು ಹೋಗಬೇಕಾಯಿತು.
ಇದನ್ನೂ ಓದಿ:ಏಕನಾಥ್ ಶಿಂಧೆ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ
ಬಳಿಕ ಆ್ಯಂಬುಲೆನ್ಸ್ ಮೂಲಕ ಸಾಗಿಸಿ ಕೋಟೆ ಗ್ರಾ.ಪಂ.ನ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಸಲಾಯಿತು ಎಂದು ಸ್ಥಳೀಯ ಲಕ್ಷ್ಮಣ್ ಅಂಚನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ.21 : ಕಟಪಾಡಿಯಲ್ಲಿ ಯುವವಾಹಿನಿ ಡೆನ್ನಾನ ಡೆನ್ನಾನ ಸಾಂಸ್ಕೃತಿಕ ಸ್ಪರ್ಧೆ
ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ
ಶಿರ್ವ: ಮನೆಗೆ ನುಗ್ಗಿ ಹಲ್ಲೆ, ಹಾನಿ;ಮೂವರ ವಿರುದ್ಧ ಪ್ರಕರಣ ದಾಖಲು
ಉಡುಪಿ: ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್, ಕೋಮು ಸೌಹಾರ್ದತೆಗೆ ಆದ್ಯತೆ; ನೂತನ ಎಸ್ಪಿ
ಉಡುಪಿ: ಸಾರ್ವಕರ್ ಫ್ಲೆಕ್ಸ್: ಬಿಜೆಪಿ ಯುವ ಮೋರ್ಚದಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ