ಸುಮಾರು ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ದಂಪತಿ ನಾಪತ್ತೆ
Team Udayavani, Aug 6, 2022, 11:09 PM IST
ಪಡುಬಿದ್ರಿ: ಸುಮಾರು ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಶಿಫಾಶೇಖ್ (25) ಹಾಗೂ ರಿಯಾಜ್ (28) ನಂದಿಕೂರು-ಅಡ್ವೆಯ ಮನೆಯಿಂದ ಉಡುಪಿಗೆ ಮೊಬೈಲ್ ಖರೀದಿಸಿ ಬರುವುದಾಗಿ ಹೇಳಿ ಆ. 1ರಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮುಂಚೆ ತೀರಿಕೊಂಡಿದ್ದರು. ಆ ವೇಳೆ ಬಿಎಎಂಎಸ್ ಕಡೆಯ ವರ್ಷದಲ್ಲಿ ಕಲಿಯುತ್ತಿದ್ದ ಈಕೆಯು ವಿದ್ಯಾಭ್ಯಾಸ ಮೊಟಕುಗೊಳಿಸಿ ರಿಯಾಜ್ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು.
ಈಗ ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲನ್ನು ಮನೆಯಿಂದ ತೆಗೆದುಕೊಂಡು ಹೋಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ