ಶೇ.100 ಲಸಿಕೀಕರಣ: ಕೂಡಿ ಬರುತ್ತಿರುವ ಕಾಲ


Team Udayavani, Sep 13, 2021, 3:40 AM IST

ಶೇ.100 ಲಸಿಕೀಕರಣ:  ಕೂಡಿ ಬರುತ್ತಿರುವ ಕಾಲ

ಕೆಲವೊಂದು ಯೋಜನೆಗಳಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಛಾಪು ಇದೆ. ಅಂತೆಯೇ ಶೇ.100 ಕೊರೊನಾ ನಿರೋಧಕ ಲಸಿಕೆ ಪಡೆದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಕಾಲ ಸನ್ನಿಹಿತವಾಗುತ್ತಿದೆ. ಇದು ಕೊರೊನಾ ಸೋಂಕು ಮುಕ್ತ ಜಿಲ್ಲೆಯಾಗಲು ಅತ್ಯಗತ್ಯ ಕೂಡ. ಕೊರೊನಾದಿಂದಾಗಿ ಸ್ಥಾಗಿತ್ಯವನ್ನು ಅನುಭವಿಸುತ್ತಿರುವ ಆರ್ಥಿಕ, ಸಾಮಾಜಿಕ ಚಟುವಟಿಕೆಗಳ ಪುನಶ್ಚೇತನದ ದೃಷ್ಟಿಯಿಂದಲೂ ಇದು ಸಹಕಾರಿ.

ಜನವರಿಯಿಂದ ಆರಂಭಗೊಂಡ ಲಸಿಕೀಕರಣದ ಪ್ರಕ್ರಿಯೆ ಈಗ ನಿರ್ಣಾಯಕ ಕಾಲಘಟ್ಟಕ್ಕೆ ತಲುಪುತ್ತಿದೆ. ಈಗ ಉಡುಪಿ ಜಿಲ್ಲೆಯಲ್ಲಿ ಸುಮಾರು ಶೇ.84ರಷ್ಟು ಜನರಿಗೆ ಮೊದಲ ಡೋಸ್‌ ಲಸಿಕೆಯನ್ನು ನೀಡಲಾಗಿದೆ. 18 ವರ್ಷ ಮೇಲ್ಪಟ್ಟ 10 ಲಕ್ಷ ಜನರಲ್ಲಿ ಸುಮಾರು 8.4 ಲಕ್ಷ ಜನರು ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ. ಸುಮಾರು ಶೇ.33ರಷ್ಟು ಜನರು 2ನೇ ಡೋಸ್‌ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಅಂದರೆ ಮೂರನೆಯ ಒಂದು ಭಾಗದಷ್ಟು ಜನರು ಕೊರೊನಾ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ. ಇನ್ನು ಶೇ.14ರಷ್ಟು ಜನರಿಗೆ ಮೊದಲ ಡೋಸ್‌, 3ನೇ ಎರಡು ಪಾಲು ಜನರಿಗೆ ಎರಡನೆಯ ಡೋಸ್‌ ಲಸಿಕೆ ಸಿಗಬೇಕಾಗಿದೆ. ಜನಸಂಖ್ಯಾವಾರು ಲಸಿಕೀಕರಣದ ದೃಷ್ಟಿಯಲ್ಲಿ ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆ 2ನೇ ಜಿಲ್ಲೆಯಾಗಿದೆ.

ಇದೇ ಸೆ. 17ರಂದು ಎಲ್ಲೆಡೆ ಮೆಗಾಮೇಳವನ್ನು ಆಯೋಜಿಸಲಾಗುತ್ತಿದ್ದು ದೊಡ್ಡ ಪ್ರಮಾಣದಲ್ಲಿ ಲಸಿಕೆಗಳು ಜಿಲ್ಲೆಗೆ ಬರಲಿವೆ. ಸೆ. 17ರಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಹಿಡಿದು ಜಿಲ್ಲಾಸ್ಪತ್ರೆವರೆಗಿನ ಎಲ್ಲ ಸ್ತರಗಳಲ್ಲಿ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಹೀಗೆ ಜಿಲ್ಲೆಯ ಸುಮಾರು 150 ಕಡೆಗಳಲ್ಲಿ ಲಸಿಕೆ ಶಿಬಿರಗಳು ನಡೆಯಲಿವೆ. ಅಂದು ಆರೋಗ್ಯ ಇಲಾಖೆ ಜತೆ ವಿವಿಧ ನರ್ಸಿಂಗ್‌ ಸಂಸ್ಥೆಗಳು, ಆಸ್ಪತ್ರೆಗಳ ವೈದ್ಯರು, ಶಿಕ್ಷಣ ಇಲಾಖೆ, ಸ್ವಯಂಸೇವಾ ಸಂಘಟನೆಗಳು ಸಹಕರಿಸಲಿದ್ದು ಲಸಿಕೆ ಅಭಿಯಾನದ ಯಶಸ್ಸಿಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಲಿವೆ. ಈ ವರೆಗೆ ಲಸಿಕೆ ಪಡೆಯದೆ ಇರುವ ಜನರು  ಪ್ರಥಮ ಡೋಸನ್ನು ಮತ್ತು 2ನೇ ಡೋಸ್‌ ಪಡೆದುಕೊಳ್ಳಲು ಬಾಕಿ ಇರುವ ಸುಮಾರು 12,000 ಜನರು ಅಂದು ಸಮೀಪದ ಲಸಿಕೆ ಶಿಬಿರಗಳಿಗೆ ತೆರಳಿ ಲಸಿಕೆ ಪಡೆಯಬೇಕಾಗಿದೆ. ಅಲ್ಲಿಯವರೆಗೆ ಜಿಲ್ಲೆಗೆ ಪೂರೈಕೆಯಾಗಿರುವ ಲಸಿಕೆಗಳನ್ನು ನೀಡುವ ಪ್ರಕ್ರಿಯೆ ಮುಂದುವರಿಯಲಿದ್ದು ಜನರು ಇದರ ಪ್ರಯೋಜನವನ್ನೂ ಪಡೆದುಕೊಳ್ಳಬಹುದು.

ಪ್ರಾರಂಭಿಕ ಹಂತದಲ್ಲಿ ಲಸಿಕೆ ಪಡೆಯಲು ಮುಂದಾಗದ ಜನರು, ಅನಂತರ ಸೋಂಕು ವ್ಯಾಪಿಸಿದಾಗ ಒಮ್ಮೆಲೆ ಲಸಿಕೆಗಾಗಿ ಪರದಾಡಿದ್ದು, ಸರಕಾರ, ವ್ಯವಸ್ಥೆಯನ್ನು ದೂಷಿಸಿದ್ದು, ಲಸಿಕೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವಾಗ ಮತ್ತೆ ಉದಾಸೀನ ಪಡುತ್ತಿರುವುದು ಹೀಗೆ ಕಳೆದ ಆರೆಂಟು ತಿಂಗಳ ಅವಧಿಯಲ್ಲಿ ಈ ಎಲ್ಲ ಅನುಭವ

ಗಳು ನಮ್ಮ ಕಣ್ಣ ಮುಂದೆ ಇದೆ. ಆರೋಗ್ಯದ ವಿಷಯದಲ್ಲಿ ಇನ್ನೂ ಟ್ರಯಲ್‌ ಆ್ಯಂಡ್‌ ಎರರ್‌ ಥಿಯರಿಯನ್ನು ಅನ್ವಯಿಸಿಕೊಳ್ಳುವುದು ತರವಲ್ಲ. ಸದ್ಯ ಜಿಲ್ಲಾಡಳಿತ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ನಿರೋಧಕ ಲಸಿಕೆ ನೀಡಲು ಕಟಿ ಬದ್ಧವಾಗಿ ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಇನ್ನೇನಿದ್ದರೂ ಸಾರ್ವಜನಿಕರದೇ ಪ್ರಮುಖ ಪಾತ್ರ. ಲಸಿಕೆ ಇರುವಾಗ ಪಡೆದುಕೊಳ್ಳುವ ಜಾಣತನವನ್ನು ಜನರು ಈಗಿಂದೀಗಲೇ ಮೆರೆಯಬೇಕು. ಇದು ವೈಯಕ್ತಿಕವೂ ಹೌದು, ನೆರೆಕರೆ-ಸಾಮುದಾಯಿಕ ಹಿತಚಿಂತನೆಯೂ ಹೌದು.

-ಸಂ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.