Cricket Betting: ಆ್ಯಪ್ನಲ್ಲಿ ಕ್ರಿಕೆಟ್ ಬೆಟ್ಟಿಂಗ್; ಪ್ರಕರಣ ದಾಖಲು
Team Udayavani, May 9, 2024, 6:49 PM IST
ಉಡುಪಿ: ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕುಂದಾಪುರದ ಗಾಂಧಿ ಮೈದಾನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಸುದರ್ಶನ್ ಮತ್ತು ಕರ್ತವ್ಯ ಅವರು ಜತೆಯಾಗಿ ಸೇರಿಕೊಂಡು ಬೆಟ್ಟಿಂಗ್ ಮೊಬೈಲ್ ಅಪ್ಲಿಕೇಶನ್ ಆ್ಯಪ್ ಸಹಾಯದಿಂದ ಸ್ಮಾರ್ಟ್ಫೋನ್ ಮೂಲಕ ಬುಧವಾರ ನಡೆದ ಹೈದರಾಬಾದ್ ಮತ್ತು ಲಕ್ನೋ ತಂಡಗಳ ನಡುವಣ ಪಂದ್ಯಕ್ಕೆ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರಿಗೆ ದೂರು ಬಂದಿತ್ತು.
ಬೆಟ್ಟಿಂಗ್ನಲ್ಲಿ ಸಂಗ್ರಹಿಸಿದ ಹಣವನ್ನು ಪಡೆದುಕೊಂಡು ಹೋಗಲು ಸ್ಥಳಕ್ಕೆ ಹೆಬ್ರಿ ನಿವಾಸಿ ತೇಜಸ್ ಬರುವ ಬಗ್ಗೆ ಮಾಹಿತಿ ಲಭಿಸಿತ್ತು. ತೇಜಸ್ ಎಂಬಾತ ಸುದರ್ಶನ್, ಕರ್ತವ್ಯ ಮತ್ತು ಇನ್ನೂ ಕೆಲವರಿಗೆ ಈ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಡುವ ಬಗ್ಗೆ ಮಾಹಿತಿ ಲಭಿಸಿದ್ದು, ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
4 ವರ್ಷ ಪೂರ್ಣಗೊಳ್ಳದೆ ಎಲ್ಕೆಜಿ ಪ್ರವೇಶವಿಲ್ಲ
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ