ಅಪಘಾತಪಡಿಸಿ ಪಾದಚಾರಿಯ ಸಾವಿಗೆ ಕಾರಣನಾದ ಆರೋಪಿಗೆ ಶಿಕ್ಷೆ
Team Udayavani, Aug 25, 2022, 1:02 AM IST
ಉಡುಪಿ: ಅಜಾಗರೂಕತೆಯಿಂದ ಬೈಕ್ ಚಲಾಯಿಸಿ ರಸ್ತೆ ಬದಿ ನಿಂತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018ರ ಡಿ. 17ರಂದು ಅಪರಾಹ್ನ 3.50ರ ಸುಮಾರಿಗೆ ಉಪ್ಪೂರಿನ ಮೂಡು ಅಮ್ಮುಂಜೆಯ ಆಶಿಶ್ ಶೆಟ್ಟಿ ಎಂಬಾತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಜಂಕ್ಷನ್ ಬಸ್ ನಿಲ್ದಾಣದ ಬಳಿ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ ರಸ್ತೆ ಬದಿ ನಿಂತಿದ್ದ ನಾಗೇಶ್ ಡಿ. ಪ್ರಭು ಅವರಿಗೆ ಢಿಕ್ಕಿ ಹೊಡೆದ ಪರಿಣಾಮ, ನಾಗೇಶ್ ಡಿ. ಪ್ರಭು ಅವರು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಉಡುಪಿ ಸಂಚಾರ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆಶಿಶ್ ಶೆಟ್ಟಿಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ