ಜಿಲ್ಲಾಸ್ಪತ್ರೆ ನಿರ್ವಹಣೆಗೆ “ಡಿ’ ಗ್ರೂಪ್‌ ನೌಕರರೇ ಆಸರೆ!


Team Udayavani, Oct 5, 2020, 1:29 PM IST

udupi-tdy-1

ಉಡುಪಿ, ಅ.4:   ರಾಷ್ಟ್ರೀಯ ಆರೋಗ್ಯ ಮಿಷನ್‌ (ಎನ್‌ಎಚ್‌ಎಂ) ನೌಕರರ ಪ್ರತಿಭಟನೆಯ ನೇರ ಪರಿಣಾಮ ಎಲ್ಲ ಸರಕಾರಿ ಆಸ್ಪತ್ರೆಗಳ ಮೇಲೆ ಬೀರುತ್ತಿದ್ದರೂ, ಉಡುಪಿ ಜಿಲ್ಲಾಸ್ಪತ್ರೆಗೆ ಈ ಬಿಸಿ ತಟ್ಟಿಲ್ಲ. ಇದಕ್ಕೆ ಮುಖ್ಯ ಕಾರಣ ಆಸ್ಪತ್ರೆಯ ಸಮಸ್ಯೆಗಳಿಗೆ “ಗ್ರೂಪ್‌ ಡಿ’ ನೌಕರರು ಟ್ರಬಲ್‌ ಶೂಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವುದು.

ಆರೋಗ್ಯ ಇಲಾಖೆಗೆ ಒತ್ತಡ :  ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸುಪ್ರೀಂ ಕೋರ್ಟ್‌ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಹೊರಗುತ್ತಿಗೆಯನ್ನು ರದ್ದು ಮಾಡಿ ಇಲಾಖೆಯ ಅಡಿಯಲ್ಲೇ ನೇಮಕ ಮಾಡಿ  ಮುಂದುವರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎನ್‌ಎಚ್‌ಎಂ  ನೌಕರರು ಅನೇಕ ದಿನಗಳಿಂದ ಮುಷ್ಕರ ನಿರತರಾಗಿದ್ದಾರೆ. ಇದು ಆರೋಗ್ಯ ಇಲಾಖೆಯ ಬಹುತೇಕ ಕೆಲಸಗಳ ಮೇಲೆ ಪರಿಣಾಮ ಬೀರಿದೆ.

ಹೆಚ್ಚಿನ ವಿದ್ಯಾರ್ಹತೆ :  ಜಿಲ್ಲಾಸ್ಪತ್ರೆಯ “ಡಿ’ ಗ್ರೂಪ್‌ ನೌಕರರ ಶೈಕ್ಷಣಿಕ ವಿದ್ಯಾರ್ಹತೆ ಮೇಲ್ಮಟ್ಟದಲ್ಲಿದೆ. ಎಸೆಸೆಲ್ಸಿಯಿಂದ ಎಂಬಿಎ ಪದವಿ ಪಡೆದ ಮೆರಿಟ್‌ ಅಭ್ಯರ್ಥಿಗಳು ಜಿಲ್ಲಾಸ್ಪತ್ರೆಯಲ್ಲಿ “ಡಿ’ ಗ್ರೂಪ್‌ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಅವರಲ್ಲಿ ಕಂಪ್ಯೂಟರ್‌ ಜ್ಞಾನ ಹೊಂದಿರುವ “ಡಿ’ ಗ್ರೂಪ್‌ ನೌಕರರನ್ನು ಕೋವಿಡ್‌ ಲ್ಯಾಬ್‌, ರೋಗಿಗಳ ನೋಂದಣಿ ಸೇರಿದಂತೆ ಇತರ ಡಾಟಾ ಎಂಟ್ರಿ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಆಸ್ಪತ್ರೆಯಲ್ಲಿ ಸರಕಾರದಿಂದ ನಿಯೋಜಿತ 12 ಡಿ ಗ್ರೂಪ್‌ ನೌಕರರಿದ್ದು, ಅವರಲ್ಲಿ ಮೂರು ವರ್ಷದ ಹಿಂದೆ ಆಯ್ಕೆಯಾದ 8 ಮಂದಿಯೂ ಎಸೆಸೆಲ್ಸಿಯಲ್ಲಿ ಮೆರಿಟ್‌ ಅಂಕಗಳೊಂದಿಗೆ ಉತ್ತೀರ್ಣಗೊಂಡ ಅಭ್ಯರ್ಥಿಗಳಾಗಿದ್ದಾರೆ.

ಸಮರ್ಪಕ ನಿರ್ವಹಣೆ  :  ಉಡುಪಿ ಜಿಲ್ಲಾಸ್ಪತ್ರೆಗೆ ಎನ್‌ಎಚ್‌ಎಂ  ನೌಕರರ ಪ್ರತಿಭಟನೆ ಕಾವು ಹೆಚ್ಚಿನ ಪ್ರಮಾಣದಲ್ಲಿ ತಟ್ಟಿಲ್ಲ. ಆರಂಭಿಕ  ಹಂತದಲ್ಲಿ ಆಸ್ಪತ್ರೆಯ ಕೋವಿಡ್‌  ಲ್ಯಾಬ್‌ನಲ್ಲಿ ಡಾಟಾ ಎಂಟ್ರಿ ಆಪರೇಟರ್‌ಗಳು ಇಲ್ಲದೆ ಸಮಸ್ಯೆಯಾಗಿತ್ತು. ಇದರ ಪರಿಹಾರಕ್ಕಾಗಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು ಸರಕಾರದಿಂದ  ನಿಯೋಜಿತ 8 ಮಂದಿ ಶೈಕ್ಷಣಿಕ ಅರ್ಹತೆ ಹೊಂದಿರುವ ಗ್ರೂಪ್‌ “ಡಿ’ ನೌಕರರನ್ನು ಡಾಟಾ ಎಂಟ್ರಿ ಕೆಲಸಕ್ಕೆ ತಾತ್ಕಾಲಿವಾಗಿ ನಿಯೋಜಿಸಿದರು. ಇದರಿಂದ ಆಸ್ಪತ್ರೆ ಕೆಲಸ ಹಾಗೂ ರೋಗಿಗಳಿಗೆ ಯಾವುದೇ ಸಮಸ್ಯೆಯಾಗಲಿಲ್ಲ.

ಡಾಟಾ ಎಂಟ್ರಿ ಆಪರೇಟರ್‌ ಆಗಿ ಕೆಲಸ :  ಜಿಲ್ಲಾಸ್ಪತ್ರೆಯಲ್ಲಿ ಎನ್‌ಎಚ್‌ಎಂ ನೌಕರರ ಪ್ರತಿಭಟನೆಯಿಂದ ರೋಗಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಪರಿಸ್ಥಿತಿಯನ್ನು ನೋಡಿಕೊಳ್ಳುತ್ತಿದ್ದೇವೆ. ಪ್ರಸ್ತುತ ಪದವಿ ಸೇರಿದಂತೆ ಕಂಪ್ಯೂಟರ್‌ ಜ್ಞಾನ ಹೊಂದಿರುವ  “ಡಿ’ ಗ್ರೂಪ್‌ ನೌಕರರು ಡಾಟಾ ಎಂಟ್ರಿ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. -ಡಾ| ಮಧುಸೂದನ್‌ ನಾಯಕ್‌,  ಜಿಲ್ಲಾ ಸರ್ಜನ್‌, ಜಿಲ್ಲಾಸ್ಪತ್ರೆ, ಉಡುಪಿ.

 

-ವಿಶೇಷ ವರದಿ

ಟಾಪ್ ನ್ಯೂಸ್

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

ಜಿಲ್ಲೆಯಾದ್ಯಂತ 1-5ನೇ ತರಗತಿ ಇಂದಿನಿಂದ ಆರಂಭ

ಜಿಲ್ಲೆಯಾದ್ಯಂತ 1-5ನೇ ತರಗತಿ ಇಂದಿನಿಂದ ಆರಂಭ

ಹೊಸ್ಮಾರು ಜಂಕ್ಷನ್‌ನಲ್ಲೆ ಇದೆ ಸಮಸ್ಯೆ ಹತ್ತಾರು!

ಹೊಸ್ಮಾರು ಜಂಕ್ಷನ್‌ನಲ್ಲೆ ಇದೆ ಸಮಸ್ಯೆ ಹತ್ತಾರು!

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

9power

ನಿರಂತರ ವಿದ್ಯುತ್‌ ನೀಡಲು ಮನವಿ

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.