ಕಾರಂತ ಥೀಮ್ ಪಾರ್ಕ್ಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ
Team Udayavani, Jun 14, 2019, 6:15 AM IST
ಕೋಟ: ಡಾ| ಶಿವರಾಮ ಕಾರಂತ ಥೀಮ್ ಪಾರ್ಕ್ ಕೋಟಕ್ಕೆ ಉಡುಪಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿಯವರು ಇತ್ತೀಚೆಗೆ ಭೇಟಿ ನೀಡಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಕಾರಂತ ಭವನದ ವಿಶೇಷತೆ ಹಾಗೂ ಕಾರ್ಯವೈಖರಿಯನ್ನು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ಕಾರಂತರ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಡಿ.ಸಿ.ಯವರು ರಂಗಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಮುಂದಿನ ದಿನಗಳಲ್ಲಿ ಇದರ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ತಿಳಿಸಿದರು.
ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ರಘು ತಿಂಗಳಾಯ, ನಿರ್ಮಿತಿ ಕೇಂದ್ರ ಉಡುಪಿಯ ಅರುಣ್ ಕುಮಾರ್ ಹಾಗೂ ಕಾರಂತ ಪ್ರತಿಷ್ಠಾನ ಮತ್ತು ಕೋಟತಟ್ಟು ಗ್ರಾ.ಪಂ. ಸದಸ್ಯರು, ಸಿಬಂದಿ ಉಪಸ್ಥಿತರಿದ್ದರು.