ಹಿಂಗಾರಿನಲ್ಲಿ ದ್ವಿದಳ ಧಾನ್ಯ ಬಿತ್ತನೆ ಕುಸಿತ: ಕಾಡುಪ್ರಾಣಿ ಹಾವಳಿ, ನಿರ್ವಹಣೆ ಕಷ್ಟ, ನಷ್ಟ ಕಾರಣ

Team Udayavani, Dec 2, 2022, 8:20 AM IST

ಹಿಂಗಾರಿನಲ್ಲಿ ದ್ವಿದಳ ಧಾನ್ಯ ಬಿತ್ತನೆ ಕುಸಿತ: ಕಾಡುಪ್ರಾಣಿ ಹಾವಳಿ, ನಿರ್ವಹಣೆ ಕಷ್ಟ, ನಷ್ಟ ಕಾರಣ

ಉಡುಪಿ: ಜಿಲ್ಲೆಯಲ್ಲಿ ಉದ್ದು, ಹುರುಳಿ, ಅಲಸಂಡೆ ಮೊದಲಾದ ದ್ವಿದಳ ಧಾನ್ಯಗಳು ಮತ್ತು ನೆಲಗಡಲೆ ಬಿತ್ತನೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿದೆ. ರೈತರಿಗೆ ಈ ಬೆಳೆಗಳ ನಿರ್ವಹಣೆ ಕಷ್ಟವಾಗುತ್ತಿರುವುದರ ಜತೆಗೆ ಲಾಭ ತಂದುಕೊಡದೆ ಇರುವುದೇ ಇದಕ್ಕೆ ಕಾರಣ.

ಜಿಲ್ಲಾದ್ಯಂತ ಮುಂಗಾರಿನಲ್ಲಿ ಭತ್ತವನ್ನೇ ಪ್ರಧಾನ ಬೆಳೆಯಾಗಿ ಬೆಳೆಯಲಾಗುತ್ತದೆ. ಭತ್ತದ ಕೊಯ್ಲಿನ ಅನಂತರ ಹಿಂಗಾರು ಬೆಳೆಯಾಗಿ ದ್ವಿದಳ ಧಾನ್ಯಗಳು, ಎಣ್ಣೆ ಕಾಳುಗಳು, ಮುಸುಕಿನ ಜೋಳ ಹೀಗೆ ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತದೆ. ಕುಂದಾಪುರ, ಉಡುಪಿ, ಕಾರ್ಕಳ ವ್ಯಾಪ್ತಿಯಲ್ಲಿ ಉದ್ದು ಬೆಳೆಯುವವರ ಸಂಖ್ಯೆ ಹೆಚ್ಚಿದೆ.

ಕೋಟ, ಕುಂದಾಪುರ, ಬೈಂದೂರು ಭಾಗದಲ್ಲಿ ನೆಲಗಡಲೆ ಹೆಚ್ಚು ಬೆಳೆಯಲಾಗುತ್ತದೆ.
2021-22ರಲ್ಲಿ 3,350 ಹೆಕ್ಟೇರ್‌ ಪ್ರದೇಶದಲ್ಲಿ ಉದ್ದು ಬೆಳೆಯುವ ಗುರಿ ಹೊಂದಿದ್ದು, 2,463 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. 30 ಹೆಕ್ಟೇರ್‌ ಪ್ರದೇಶವನ್ನು ಹುರುಳಿ ಬೆಳೆಯಲು ಗುರುತಿಸಿದ್ದು, 23 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. 75 ಹೆಕ್ಟೇರ್‌ ಗುರಿಯಲ್ಲಿ 71 ಹೆಕ್ಟೇರ್‌ನಲ್ಲಿ ಹೆಸರು, 235 ಹೆಕ್ಟೇರ್‌ ಪ್ರದೇಶದ ಗುರಿಯಲ್ಲಿ 152 ಹೆಕ್ಟೇರ್‌ನಲ್ಲಿ ಅಲಸಂದೆ ಬೆಳೆಯಾಗಿತ್ತು. ಒಟ್ಟು 3,690 ಹೆಕ್ಟೇರ್‌ ಗುರಿಯಲ್ಲಿ 2,709 ಹೆಕ್ಟೇರ್‌ ದ್ವಿದಳ ಧಾನ್ಯ ಬಿತ್ತನೆಯಾಗಿತ್ತು. 2 ಸಾವಿರ ಹೆಕ್ಟೇರ್‌ ಗುರಿಯಲ್ಲಿ 1,744 ಹೆಕ್ಟೇರ್‌ನಲ್ಲಿ ನೆಲಗಡಲೆ ಬೆಳೆಯಲಾಗಿತ್ತು. ವಿಶೇಷವೆಂಬಂತೆ 70 ಹೆಕ್ಟೇರ್‌ ಪೈಕಿ 58 ಹೆಕ್ಟೇರ್‌ನಲ್ಲಿ ಮುಸುಕಿನ ಜೋಳ ಬೆಳೆಯಾಗಿತ್ತು.

ಬಿತ್ತನೆ ಕುಸಿತ
ಮುಂಗಾರಿನ ಕೊಯ್ಲು ಮುಗಿಯುತ್ತಿದ್ದಂತೆ ದ್ವಿದಳ ಧಾನ್ಯ, ಎಣ್ಣೆಕಾಳುಗಳ ಬಿತ್ತನೆ ನಡೆಯುತ್ತಿದೆ. ಆದರೆ ಈ ವರ್ಷ 3,350 ಹೆಕ್ಟೇರ್‌ ಪ್ರದೇಶದಲ್ಲಿ ಉದ್ದು ಬೆಳೆಯುವ ಗುರಿ ಹೊಂದಿದ್ದರೂ ಈವರೆಗೆ ಬಿತ್ತನೆ ಆಗಿರುವುದು ಕೇವಲ 925 ಹೆಕ್ಟೇರ್‌. ಹುರುಳಿ, ಹೆಸರು, ಅಲಸಂದೆ ಎಲ್ಲಿಯೂ ಬಿತ್ತನೆಯಾಗಿಲ್ಲ. 1,750 ಹೆಕ್ಟೇರ್‌ನಲ್ಲಿ ನೆಲಗಡಲೆ ಬಿತ್ತನೆ ಗುರಿ ಹೊಂದಿದ್ದರೂ ಈವರೆಗೆ 400 ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಮಾಡಲಾಗಿದೆ.

ಕಾಡುಪ್ರಾಣಿಗಳ ಉಪಟಳ
ಮುಂಗಾರಿನಲ್ಲಿ ಬೆಳೆದ ಭತ್ತವನ್ನು ಸಂರಕ್ಷಿಸಿ, ದಾಸ್ತಾನು ಮಾಡುವುದೇ ಜಿಲ್ಲೆಯ ರೈತರಿಗೆ ಇತ್ತೀಚೆಗಿನ ವರ್ಷಗಳಲ್ಲಿ ಕಷ್ಟವಾಗುತ್ತಿದೆ. ಅಕಾಲಿಕ ಮಳೆ, ಕಾಡುಪ್ರಾಣಿ- ಪಕ್ಷಿಗಳ ಹಾವಳಿ ಮತ್ತು ದಾಸ್ತಾನಿಗೆ ಸರಿಯಾದ ಸ್ಥಳಾವಕಾಶ ಇಲ್ಲದ್ದರ ಸಹಿತ ಹಲವು ಸಮಸ್ಯೆಗಳು ಇವೆ. ಹಿಂದೆಲ್ಲ ಭತ್ತ ಕೊಯ್ಲು ಮುಗಿಯುತ್ತಿದ್ದಂತೆ ದ್ವಿದಳ ಧಾನ್ಯ, ನೆಲಗಡಲೆ ಇತ್ಯಾದಿ ಬಿತ್ತನೆ ಮಾಡುತ್ತಿದ್ದರು. ಈಗ ಹಿಂಗಾರು ಬಿತ್ತನೆಗೆ ರೈತರು ಆಸಕ್ತಿ ತೋರಿಸುತ್ತಿಲ್ಲ. ನಿರ್ವಹಣೆ, ಬೆಳೆದ ಬೆಳೆ ಉಳಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ. ಹಿಂಗಾರಿನಲ್ಲಿ ಮಳೆ ಬಂದರೆ ಬಿತ್ತನೆಗೆ ಆಗಿರುವ ಖರ್ಚು ಕೂಡ ದಕ್ಕುವುದಿಲ್ಲ. ಅಲ್ಲದೆ ಇದು ಲಾಭದಾಯಕವೂ ಅಲ್ಲ. ಹೀಗಾಗಿ ಹಿಂಗಾರಿನಲ್ಲಿ ಧಾನ್ಯಗಳ ಬಿತ್ತನೆ ಕುಸಿಯುತ್ತಿದೆ ಎಂದು ರೈತರೊಬ್ಬರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಎಲ್‌ಬಿಜಿ -791 ತಳಿಯ 20.50 ಕ್ವಿಂಟಾಲ್‌ ಹಾಗೂ ಇತರ ತಳಿಗಳ ಸುಮಾರು 11.50 ಕ್ವಿಂಟಾಲ್‌ ಸೇರಿದಂತೆ ಒಟ್ಟು 32 ಕ್ವಿಂಟಾಲ್‌ ಉದ್ದಿನ ಬೀಜವನ್ನು ರೈತರಿಗೆ ಹಂಚಿಕೆ ಮಾಡಿದ್ದೇವೆ. ಹಾಗೆಯೇ ಕೋಟದಲ್ಲಿ 225, ಕುಂದಾಪುರದಲ್ಲಿ 130 ಹಾಗೂ ಬೈಂದೂರಿನಲ್ಲಿ 248 ಕ್ವಿಂಟಾಲ್‌ ನೆಲಗಡಲೆ ಬಿತ್ತನೆಯಾಗಲಿದೆ.
-ಸತೀಶ್‌ ಬಿ. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.