ದನದ ಮಾಂಸ ಪತ್ತೆ: ಮೂವರ ಬಂಧನ
Team Udayavani, May 8, 2020, 6:32 PM IST
ಶಿರ್ವ: ಕಳತ್ತೂರು ಪೈಯ್ನಾರು ಬಳಿ ಹಾಜಬ್ಬ ಅವರ ವಾಸ್ತವ್ಯವಿಲ್ಲದ ಮನೆಯಲ್ಲಿ ದನ ಕಡಿದು ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮೂವರನ್ನು ಶಿರ್ವ ಪೊಲೀಸರು ಶುಕ್ರವಾರ ಬಂಧಿಸಿದ್ದು, ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಆರೋಪಿಗಳಾದ ಬದ್ರುದ್ದೀನ್, ಶೇಕ್ ಅಬ್ದುಲ್ಲಾ ಮತ್ತು ಲವ ಶೆಟ್ಟಿಯನ್ನು ಠಾಣಾಧಿಕಾರಿ ಶ್ರೀಶೈಲ ಮುರಗೋಡ ಬಂಧಿಸಿದ್ದಾರೆ. ದನ ಕಡಿಯಲು ಬಳಸಿದ್ದ ಆಯುಧಗಳು, ತಕ್ಕಡಿ, ಸುಮಾರು 80 ಕೆ.ಜಿ. ದನದ ಮಾಂಸದ ಪ್ಯಾಕೆಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಂದು ದನವನ್ನು ರಕ್ಷಿಸಲಾಗಿದ್ದು, ಗೋಶಾಲೆಗೆ ಬಿಡುವ ವ್ಯವಸ್ಥೆ ಮಾಡಲಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆ ಮೇರೆಗೆ ಶಿರ್ವ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ