“ಧರ್ಮ ಸಂಸದ್‌’ ನಿರ್ಣಯ ಶೀಘ್ರ ಕೇಂದ್ರಕ್ಕೆ ಸಲ್ಲಿಕೆ

Team Udayavani, Nov 28, 2017, 9:24 AM IST

27-8.jpg

ಉಡುಪಿ: ಉಡುಪಿಯಲ್ಲಿ ಜರಗಿದ “ಧರ್ಮಸಂಸದ್‌’ನಲ್ಲಿ ಸಂತರು ಕೈಗೊಂಡಿರುವ ನಿರ್ಣಯಗಳನ್ನು ಶೀಘ್ರ ದಲ್ಲಿಯೇ ಕೇಂದ್ರ ಸರಕಾರಕ್ಕೆ ಸಲ್ಲಿಸ ಲಾಗು ವುದು ಎಂದು ವಿಶ್ವ ಹಿಂದೂ ಪರಿಷತ್‌ ಕ್ಷೇತ್ರೀಯ ಸಂಘಟನ ಕಾರ್ಯದರ್ಶಿ ಗೋಪಾಲ್‌ ಅವರು ತಿಳಿಸಿದ್ದಾರೆ.

“ಧರ್ಮಸಂಸದ್‌’ ಯಶಸ್ಸಿಗೆ ಕಾರಣ ಕರ್ತರಾದವರಿಗೆ ಕೃತಜ್ಞತೆ ಸಲ್ಲಿಸುವ ಪ್ರಯಕ್ತ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಯೋಧ್ಯೆಯಲ್ಲಿ ಮುಂದಿನ ಒಂದು ವರ್ಷದೊಳಗೆ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ ವಾಗಬೇಕು, ಗೋರಕ್ಷಣೆಗಾಗಿ ಕಾನೂನು ರೂಪಿಸಿ ಗೋವು ರಾಷ್ಟ್ರೀಯ ಸಂಪತ್ತು ಎಂದು ಪರಿಗಣಿಸಲ್ಪಡಬೇಕು, ಅಸ್ಪೃಶ್ಯತೆ ಸಂಪೂರ್ಣವಾಗಿ ದೂರವಾಗಬೇಕು, ಅಲ್ಪ ಸಂಖ್ಯಾಕರಿಗೆ ದೊರೆಯುವ ಸೌಲಭ್ಯಗಳು ಬಹುಸಂಖ್ಯಾಕರಿಗೂ ದೊರೆಯಬೇಕು, ದೇವಸ್ಥಾನಗಳು ಸರಕಾರಿ ಆಡಳಿತದಿಂದ ಮುಕ್ತವಾಗಿ ಸಂತರು, ಭಕ್ತರ ಕೈಗೆ ಸಿಗ ಬೇಕು, ದೇವಾಲಯಗಳ ಹಣ ಧಾರ್ಮಿಕ ಕಾರ್ಯಗಳಿಗೆ ಮಾತ್ರ ಬಳಸಲ್ಪಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದನ್ನು ಸರಕಾರಕ್ಕೆ ನೀಡಲಾಗುವುದು ಎಂದು ತಿಳಿಸಿದರು. 

ಪೇಜಾವರ ಶ್ರೀಗಳು ಪ್ರೇರಕ ಶಕ್ತಿ
“ಧರ್ಮಸಂಸದ್‌’ ಸೇರಿದಂತೆ ನಮ್ಮೆಲ್ಲಾ ಚಟುವಟಿಕೆಗಳಿಗೆ ಪೇಜಾವರ ಶ್ರೀಗಳು ಪ್ರೇರಕ ಶಕ್ತಿಯಾಗಿದ್ದಾರೆ. ಕಾರ್ಯಕರ್ತರು ರೂಪಿಸಿದ “ಹಿಂದೂವೈಭವ ಪ್ರದರ್ಶಿನಿ’ ವೀಕ್ಷಣೆ ಮಾಡಲೇಬೇಕೆಂದು ನ. 26 ರಂದು (ಧರ್ಮಸಂಸದ್‌ ಕೊನೆಯ ದಿನ) ರಾತ್ರಿ 9.40ಕ್ಕೆ ಆಗಮಿಸಿ ಒಂದು ತಾಸು ವೀಕ್ಷಿಸಿದ್ದಾರೆ. ಇದು ಅವರು ನೀಡುತ್ತಿರುವ ಪ್ರೇರಣೆ, ಸ್ಫೂರ್ತಿಗೆ ಒಂದು ಉದಾಹರಣೆ ಎಂದು ಗೋಪಾಲ್‌ ಹೇಳಿದರು.

ಪೊಲೀಸರು ಕೂಡ ಉತ್ತಮವಾಗಿ ಸಹಕರಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಲ್ಲಿನ ಪೊಲೀಸರು ಹಿಂದೂ ಕಾರ್ಯಕರ್ತರಿಗೆ ಬೈಕ್‌ರ್ಯಾಲಿ ಮಾಡಲು ಬಿಡಲಿಲ್ಲ. ಆದರೆ ಉಡುಪಿಯಲ್ಲಿ ಅವಕಾಶ ದೊರೆಯಿತು. ಭಜನಮಂಡಳಿ, ಉಡುಪಿ ನಾಗರಿಕರು, ಹೊಟೇಲುಗಳು ಸಹಿತ ಎಲ್ಲರೂ ವಿಶೇಷ ರೀತಿ ಯಲ್ಲಿ ಸಹಕರಿ ಸಿದ್ದಾರೆ. ಉಡುಪಿಯ ಓರ್ವ ವೃದ್ಧ ಮಹಿಳೆ “ಧರ್ಮ ಸಂಸದ್‌’ ಗಾಗಿ 6,000 ರೂ. ಧನ ಸಹಾಯ ನೀಡಿ ದ್ದಾರೆ. ಇಡೀ ಸಮಾಜ ನಮ್ಮ ಜತೆಗೆ ಸಹಕರಿ ಸಿದೆ ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯೋಗಿ ಆದಿತ್ಯನಾಥ ಸಹಿತ ನಾವು ಆಹ್ವಾನಿಸಿದ ಗಣ್ಯರೆಲ್ಲರೂ ಆಗಮಿಸುವ ವಿಶ್ವಾಸವಿತ್ತು. ಆದರೆ ಕೆಲವೊಬ್ಬರು ಅನಿವಾರ್ಯ ಕಾರಣಗಳಿಂದ ಬಂದಿಲ್ಲ. ಉಳಿದವರೆಲ್ಲರೂ ನಿರೀಕ್ಷೆಯಂತೆಯೇ ಆಗಮಿಸಿದ್ದಾರೆ ಎಂದು ತಿಳಿಸಿದರು.

ವಿಹಿಂಪ ಪ್ರಾಂತಕಾರ್ಯದರ್ಶಿ ಟಿ.ಎ.ಪಿ. ಶೆಣೈ, ಜಿಲ್ಲಾಧ್ಯಕ್ಷ ವಿಲಾಸ್‌ ನಾಯಕ್‌, ನಗರಾಧ್ಯಕ್ಷ ಸಂತೋಷ್‌ ಸುವರ್ಣ ಬೊಳೆj ಉಪಸ್ಥಿತರಿದ್ದರು. 

ತಡೆಯಲಾಗದ ಜನಪ್ರವಾಹ
ಶೋಭಾಯಾತ್ರೆಯನ್ನು ನಿಗದಿತ ಸಮಯಕ್ಕಿಂತ 10 ನಿಮಿಷ ಮುಂಚಿತವಾಗಿ ಆರಂಭಿಸಲಾಯಿತು. ಜನಪ್ರವಾಹವನ್ನು ತಡೆಯಲು ಅಸಾಧ್ಯವಾದ ಕಾರಣ ಈ ರೀತಿ ಮಾಡುವುದು ಅನಿವಾರ್ಯವಾಯಿತು. ನಾವು ನಿರೀಕ್ಷೆ ಮಾಡಿರುವುದಕ್ಕಿಂತಲೂ ಹೆಚ್ಚಿನ ಹಿಂದೂ ಬಾಂಧವರು ಸ್ಪಂದಿಸಿದ್ದಾರೆ. ಸಂತರು ಕೂಡ ನಿರೀಕ್ಷಿತ ಸಂಖ್ಯೆಗಿಂತಲೂ ಹೆಚ್ಚಾಗಿ ಆಗಮಿಸಿ ಸಹಕರಿಸಿದ್ದಾರೆ ಎಂದು ಗೋಪಾಲ್‌ ತಿಳಿಸಿದರು.

24 ಗಂಟೆಗಳಲ್ಲಿ  ಸುತ್ತೋಲೆ ವಾಪಸ್‌!
“ಹಿಂದೂ ವೈಭವ’ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಪ್ರದರ್ಶನವಾಗಿತ್ತೇ ಹೊರತು ನಿರ್ದಿಷ್ಟ ಧರ್ಮ, ಜಾತಿಯನ್ನು ಪ್ರತಿನಿಧಿಸುವಂತದ್ದಾಗಿರಲಿಲ್ಲ. ಆದರೆ ಮೊದಲು ಇದರ ವೀಕ್ಷಣೆಗೆ ಶಾಲಾ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸುತ್ತೋಲೆ ಹೊರಡಿಸಿದ್ದ ಶಿಕ್ಷಣ ಇಲಾಖೆ 24 ಗಂಟೆಗಳಲ್ಲಿ ಅದನ್ನು ವಾಪಸ್‌ ತೆಗೆದುಕೊಂಡಿತು. ಆದರೂ ಅನೇಕ ಶಾಲೆಗಳ ಮುಖ್ಯಸ್ಥರು ವಿದ್ಯಾರ್ಥಿಗಳನ್ನು ಕರೆತಂದು ಅವರಿಗೆ ಅಪೂರ್ವ ವಸ್ತುಪ್ರದರ್ಶನ ತೋರಿಸಿ ಪುರಾತನ ವೈಭವ, ಸಂಸ್ಕೃತಿಯ ಜ್ಞಾನ ನೀಡಿದ್ದಾರೆ ಎಂದು ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್‌ ಅವರು ತಿಳಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.