ಹಣಕಾಸು ಕೊರತೆಯಿಂದ ಜಿಲ್ಲಾ ಕೇಂದ್ರ ಗ್ರಂಥಾಲಯ ಕಾಮಗಾರಿ ಸ್ಥಗಿತ


Team Udayavani, May 21, 2019, 6:20 AM IST

library

ಉಡುಪಿ: ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಒಳಾಂಗಣ ವಿನ್ಯಾಸಕ್ಕೆ ಹಣಕಾಸು ಕೊರತೆಯಿಂದ ಗ್ರಂಥಾಲಯದ ಕಾಮಗಾರಿ ಸ್ಥಗಿತಗೊಂಡಿದೆ.

5.35 ಕೋ ಅನುದಾನ
ನೂತನ ಡಿಜಿಟಲ್‌ ಗ್ರಂಥಾಲಯ ಅಜ್ಜರಕಾಡು ಸಮೀಪದ ಸುಮಾರು 20 ಸೆಂಟ್ಸ್‌ ಜಾಗದಲ್ಲಿ 5.35 ಕೋ.ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸುವ ಯೋಜನೆ ರೂಪಿಸಲಾಗಿತ್ತು. ಅದಕRಾಗಿ ಆಸ್ಕರ್‌ ಫೆರ್ನಾಂಡಿಸ್‌ ರಾಜ್ಯಸಭಾ ಸದಸ್ಯರ ನಿಧಿಯಿಂದ 99. 56 ಲ.ರೂ., ನಗರಾಭಿವೃದ್ಧಿ ಪ್ರಾಧಿಕಾರದಿಂದ 87.54 ಲ.ರೂ., ಗ್ರಂಥಾಲಯ ಇಲಾಖೆಯಿಂದ 1 ಕೋ., ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆಯವರ ಸಂಸದರ ನಿಧಿಯಿಂದ 5 ಲ. ರೂ. ಸೇರಿದಂತೆ ಒಟ್ಟು 3.35 ಕೋ. ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ.

ಒಳಾಂಗಣ ವಿನ್ಯಾಸ ಬಾಕಿ
ಕಟ್ಟಡ ಕಾಮಗಾರಿ ಪೂರ್ಣಗೊಂಡು ಮೂರು ತಿಂಗಳು ಕಳೆದಿವೆ. ಚುನಾವಣೆ ನೀತಿ ಸಂಹಿತೆ ಹಾಗೂ ಹಣಕಾಸು ಕೊರತೆಯಿಂದ ಒಳಾಂಗಣ ವಿನ್ಯಾಸ ಕಾಮಗಾರಿ ಸ್ಥಗಿತಗೊಂಡಿದೆ. ಒಳಾಂಗಣ ವಿನ್ಯಾಸಕ್ಕೆ ಇನ್ನೂ 2 ಕೋ ಅಗತ್ಯವಿದೆ.

ಹೈಟೆಕ್‌ ಮಾದರಿ ವಿನ್ಯಾಸ
ಹೊಸದಾಗಿ ನಿರ್ಮಾಣವಾಗಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡ ಹೈಟೆಕ್‌ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಅತ್ಯಾಧುನಿಕ ಮಾದರಿಯ ತಂತ್ರಜ್ಞಾನ ಸೌಲಭ್ಯಗಳನ್ನು ಆಳವಡಿಸಲಾಗಿದೆ. ತಳಮಹಡಿ ಸೇರಿದಂತೆ ಒಟ್ಟು ನಾಲ್ಕು ಮಹಡಿಗಳಿವೆ.

ತಳಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಮೆಟ್ಟಿಲು, ಜನರೇಟರ್‌ ಹಾಗೂ ಪುಸ್ತಕ ಸಂಗ್ರಹ ಕೊಠಡಿ ನಿರ್ಮಿಸಲಾಗಿದೆ. ನೆಲ ಮಹಡಿಯಲ್ಲಿ ಹಿರಿಯ ನಾಗರಿಕರ ಕೊಠಡಿ, ಮಕ್ಕಳ ಒಳಾಂಗಣ ಕ್ರೀಡೆ ಹಾಗೂ ಮಕ್ಕಳ ಪುಸ್ತಕ ವಿಭಾಗ, ದಿನಪತ್ರಿಕೆಗಳ ವಿಭಾಗ, ವಾರ ಹಾಗೂ ತಿಂಗಳ ಪತ್ರಿಕೆಗಳಿಗೆ ಪ್ರತ್ಯೇಕ ವಿಭಾಗಗಳಾಗಿ ವಿಂಗಡಿಸಲಾಗಿದೆ.

ಮೊದಲ ಮಹಡಿಯು ಕಂಪ್ಯೂಟರ್‌ ಕೊಠಡಿ, ಡಿಜಿಟಲ್‌ ಗ್ರಂಥಾಲಯ, ಕಿರು ಸಭಾಂಗಣ ನಿರ್ಮಿಸಲಾಗಿದೆ. ಎರಡನೇ ಮಹಡಿಯಲ್ಲಿ 100 ಜನರು ಕುಳಿತುಕೊಳ್ಳುವ ಸಭಾಂಗಣ, ಕಚೇರಿ, ಓದುವ ಕೊಠಡಿಯನ್ನು ಒಳಗೊಂಡಿದೆ.

ಸ್ಪರ್ಧಾತ್ಮಕ ಪರೀಕ್ಷೆ ತಯಾರಿ
ಗ್ರಂಥಾಲಯದಲ್ಲಿ ಐಎಎಸ್‌, ಕೆಎಎಸ್‌, ಐಎಎಸ್‌ ಮುಂತಾದ ಸಿವಿಲ್‌ ಸರ್ವಿಸ್‌ ಪರೀûಾರ್ಥಿಗಳಿಗೆ ಅನುಕೂಲವಾಗುವಂತೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ತರಬೇತಿ ನೀಡಲು ಕಿರು ಸಭಾಂಗಣ ಹಾಗೂ ಅಧ್ಯಯನಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

24×7 ವಿದ್ಯುತ್‌ ಸಂಪರ್ಕ
ವಿದ್ಯಾರ್ಥಿಗಳಿಗೆ, ಸಾರ್ವ ಜನಿಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವಂತೆ ಗ್ರಂಥಾಲಯಕ್ಕೆ 24×7 ವಿದ್ಯುತ್‌ ಸಂಪರ್ಕ ಒದಗಿಸಲಾಗುತ್ತದೆ. ಅದಕ್ಕೆ ಪೂರಕ ಜನರೇಟರ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನೆಲ ಮಹಡಿಯಲ್ಲಿ ಏಕಕಾಲಕ್ಕೆ 50ಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದು. ಕಟ್ಟಡ ಮುಂಭಾಗ ಇಂಟರ್‌ ಲಾಕ್‌ ಹಾಕಲಾಗಿದೆ.

ಓದುಗರ ಬೇಡಿಕೆ ಈಡೇರಿಕೆಗೆ ಕಾಲ ಸನ್ನಿಹಿತ
ನಗರದಲ್ಲಿ ಒಂದು ಸುಸಜ್ಜಿತ ಕೇಂದ್ರ ಗ್ರಂಥಾಲಯ ನಿರ್ಮಾಣವಾಗಬೇಕು. ಎಲ್ಲ ಸೌಲಭ್ಯಗಳು ಗ್ರಂಥಾಲ ಯದಲ್ಲಿ ಸಿಗಬೇಕು ಎನ್ನುವುದು ಓದುಗರರ ಹಲವು ದಶಕಗಳ ಆಸೆಯಾಗಿತ್ತು. ಆದರೆ, ಇದೀಗ ನನಸಾಗುವ ಕಾಲ ಸನ್ನಿಹಿತವಾಗಿದೆ. ಬಾಕಿ ಕಾಮಗಾರಿ ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಅನುಕೂಲ ಮಾಡಿಕೊಡಬೇಕು ಎನ್ನುವುದು ಓದುಗರ ಒತ್ತಾಸೆಯಾಗಿದೆ.

ವಿನ್ಯಾಸಕ್ಕೆ 2 ಕೋ.
ಕಟ್ಟಡ ಕಾಮಗಾರಿ ಸುಮಾರು 3.35 ಕೋ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಒಳಾಂಗಣ ವಿನ್ಯಾಸಕ್ಕೆ ಸುಮಾರು 2 ಕೋ. ಅಗತ್ಯವಿದೆ. ಸಿಆರ್‌ಎಸ್‌ ಅನುದಾನ ಬಿಡುಗಡೆಯಾದ ತತ್‌ಕ್ಷಣ ಬಾಕಿಯಿರುವ ಕೆಲಸ ಆರು ತಿಂಗಳ ಒಳಗೆ ಪೂರ್ಣಗೊಳಿಸಲಾಗುತ್ತದೆ.
-ಅರುಣ್‌ಕುಮಾರ್‌, ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ

ಓದುಗರಿಗೆ ಉತ್ತಮ ತಾಣ
ಗ್ರಂಥಾಲಯವನ್ನು ವಿನೂತನ ಮಾದರಿಯ ಕಟ್ಟಡ ನಿರ್ಮಿಸಲಾಗಿದ್ದು, ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಗ್ರಂಥಾಲಯಕ್ಕೆ ಭೇಟಿ ನೀಡುವ ಹವ್ಯಾಸ ಹೊಂದಿರುವ ಓದುಗರಿಗೆ ಉತ್ತಮ ತಾಣವಾಗಲಿದೆ. ಅತ್ಯಂತ ನಿಶ್ಯಬ್ದ ವಾತಾವಾರಣದಲ್ಲಿ ಹೆಚ್ಚು ಪುಸ್ತಕಗಳನ್ನು ಓದಲು ಓದುಗರಿಗೆ ಅವಕಾಶ ಲಭಿಸಲಿದೆ.
-ನಳಿನಿ, ಮುಖ್ಯ ಗ್ರಂಥಾಲಯಾಧಿಕಾರಿ, ಉಡುಪಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.