Jal-jeevan-mission; ಉಭಯ ಜಿಲ್ಲೆಯ 177 ಹಳ್ಳಿಗಳಲ್ಲಿ ಶೇ. 100 ಪ್ರಗತಿ

ಜಲಜೀವನ್‌ ಮಿಷನ್‌ ಅಡಿ ಮನೆ ಮನೆಗೆ ನೀರು ಪೂರೈಕೆ

Team Udayavani, Jan 8, 2024, 7:00 AM IST

jal

ಉಡುಪಿ: ಮನೆ ಮನೆಗೆ ನಲ್ಲಿ ಮೂಲಕ ನೀರು ಪೂರೈಸುವ ಜಲಜೀವನ್‌ ಮಿಷನ್‌ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಮೂರು ಅಥವಾ ನಾಲ್ಕು ತಿಂಗಳು ಅಗತ್ಯವಿದೆ. ಹೀಗಾಗಿ ಪ್ರಸಕ್ತ ಸಾಲಿನ ಬೇಸಗೆಯಲ್ಲಿ ನಲ್ಲಿ ಮೂಲಕ ಪೂರ್ಣ ಪ್ರಮಾಣದಲ್ಲಿ ನೀರು ಪೂರೈಕೆಯೂ ಅಸಾಧ್ಯ.

ಉಭಯ ಜಿಲ್ಲೆಯ 612 ಹಳ್ಳಿಗಳಲ್ಲಿ 177 ಹಳ್ಳಿಗೆ ಶೇ. 100ರಷ್ಟು ನಲ್ಲಿ ಸಂಪರ್ಕ ಕಲ್ಪಿಸಲಾಗಿದ್ದು 438 ಹಳ್ಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಶೇ. 100ರಷ್ಟು ನಲ್ಲಿ ಸಂಪರ್ಕ ಪೂರ್ಣಗೊಂಡಿರುವ ಹಳ್ಳಿಯಲ್ಲೂ ನಲ್ಲಿ ಮೂಲಕ ನೀರು ಬರುತ್ತಿಲ್ಲ. ಕಾರಣ, ಓವರ್‌ಹೆಡ್‌ ಟ್ಯಾಂಕ್‌ ಕಾಮಗಾರಿ, ಓವರ್‌ ಹೆಡ್‌ ಟ್ಯಾಂಕ್‌ಗೆ ಸಂಪರ್ಕ ಕಲ್ಪಿಸುವುದು ಅಥವಾ ನೀರಿನ ಮೂಲಗಳಿಂದ ಓವರ್‌ಹೆಡ್‌ ಟ್ಯಾಂಕ್‌ಗೆ ನೀರು ಪೂರೈಸುವ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ.

ಎಲ್ಲ ಗ್ರಾ.ಪಂ.ಗಳಲ್ಲೂ ಜಲಜೀವನ್‌ ಮಿಷನ್‌ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಮನೆ ಮನೆಗೆ ನಲ್ಲಿ ಸಂರ್ಪಕಕ್ಕೆ ಬೇಕಾದ ಪೈಪ್‌ಲೈನ್‌ ಅಳವಡಿಸುವ ಜತೆಗೆ ಮನೆಯ ಸಮೀಪದಲ್ಲಿ ನಲ್ಲಿ ಜೋಡಿಸಲು ಬೇಕಾದ ಕಲ್ಲು ಮತ್ತು ಕಟ್ಟೆಯನ್ನು ನಿರ್ಮಿಸಲಾಗುತ್ತಿದೆ. ಇದರ ಜತೆಗೆ ಮೀಟರ್‌ ಕೂಡ ಅಳವಡಿಸಲಾಗುತ್ತಿದೆ.
ಜಲಜೀವನ್‌ ಮಿಷನ್‌ ಅಡಿಯಲ್ಲಿ ಈ ಬೇಸಗೆಯಲ್ಲಿ ಉಭಯ ಜಿಲ್ಲೆಯ ಮನೆ ಮನೆಗೆ ನೀರು ಪೂರೈಕೆಗೆ ಅಂದಾಜಿಸಲಾಗಿತ್ತು. ಅದರೆ, ಸರಕಾರ ಬದಲಾದ ಅನಂತರದಲ್ಲಿ ಕಾಮಗಾರಿ ಸ್ವಲ್ಪ ವಿಳಂಬವಾಗಿದ್ದರಿಂದ ಕಾಮಗಾರಿ ಪೂರ್ಣಗೊಳ್ಳಲು ಇನ್ನಷ್ಟು ಸಮಯ ತೆಗೆದುಕೊಳ್ಳುವ ಸಾಧ್ಯತೆ ಇರುವುದರಿಂದ ಈ ಬೇಸಗೆಯಲ್ಲಿ ಎಲ್ಲ ಮನೆಗೂ ನಲ್ಲಿ ಮೂಲಕ ನೀರು ಪೂರೈಕೆ ಅಸಾಧ್ಯ ಎಂದು ಹೇಳಲಾಗುತ್ತಿದೆ.

2019-20ನೇ ಸಾಲಿನಲ್ಲಿ ಕಾಮಗಾರಿ ಆರಂಭವಾಗಿದ್ದರೂ ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷ ಕಾಮಗಾರಿ ಸರಿಯಾಗಿ ನಡೆದಿರಲಿಲ್ಲ. 2022-23ನೇ ಸಾಲಿನಿಂದ ಕಾಮಗಾರಿ ವೇಗ ಪಡೆದುಕೊಂಡಿದೆ. ಉಡುಪಿ ಜಿಲ್ಲೆಯ 2,47,190 ಮನೆಗಳಿಗೆ ಜಲ ಜೀವನ್‌ ಮಿಷನ್‌ ಅಡಿಯಲ್ಲಿ ಮನೆ ಮನೆಗೆ ನೀರು ಪೂರೈಕೆಯ ಗುರಿ ಹೊಂದಲಾಗಿದೆ. ಈಗಾಗಲೇ ಜಿಲ್ಲೆಯ 1,98,763 ಮನೆಗಳಿಗೆ ನಲ್ಲಿ ಸಂಪರ್ಕ ನೀಡುವ ಕಾರ್ಯ ಪೂರ್ಣಗೊಂಡಿದೆ. ಶೇ. 80.41ರಷ್ಟು ಗುರಿ ಸಾಧನೆಯಾಗಿದೆ. ಇನ್ನು ಶೇ.20ರಷ್ಟು ಮನೆಗಳಿಗೆ ನಲ್ಲಿ ಸಂಪರ್ಕ/ಪೈಪ್‌ಲೈನ್‌ ಕಾಮಗಾರಿ ಆಗಬೇಕಿದೆ. 48,427 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲು ಬಾಕಿಯಿದೆ. ಜಿಲ್ಲೆಯ 246 ಹಳ್ಳಿಗಳಲ್ಲಿ 66 ಹಳ್ಳಿಗಳಿಗೆ ಶೇ.100ರಷ್ಟು ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ. 185 ಹಳ್ಳಿಗಳಲ್ಲಿ ನಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದೆ.
ದ.ಕ. ಜಿಲ್ಲೆಯ 3,34,185 ಮನೆಗಳಿಗೆ ನಲ್ಲಿ ಮೂಲಕ ನೀರು ಪೂರೈಸುವ ಗುರಿ ಹೊಂದಲಾಗಿತ್ತು. ಈಗಾಗಲೇ 2,93,456 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದ್ದು ಶೇ.87.81ರಷ್ಟು ಪ್ರಗತಿ ಸಾಧಿಸಲಾಗಿದೆ. ಜಿಲ್ಲೆಯ 366 ಹಳ್ಳಿಗಳಲ್ಲಿ 111 ಹಳ್ಳಿಗೆ ಶೇ.100ರಷ್ಟು ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ. 255 ಹಳ್ಳಿಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.

ಪುತ್ತೂರು ಟಾಪ್‌
ಜಲ ಜೀವನ್‌ ಮಿಷನ್‌ ಕಾಮಗಾರಿ ಪ್ರಗತಿಯಲ್ಲಿ ಪುತ್ತೂರು ತಾಲೂಕು ಶೇ.97.11ರಷ್ಟು ಸಾಧನೆಯ ಮೂಲಕ ಉಭಯ ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದೆ. ಬಂಟ್ವಾಳ 94.24ರಷ್ಟು ಸಾಧನೆ ಮಾಡಿದೆ. ಕಾಪು ಶೇ.70.80ರಷ್ಟು ಗುರಿ ಸಾಧಿಸಿದ್ದರೆ ಬೈಂದೂರು ತಾಲೂಕಿನಲ್ಲಿ ಶೇ.67.22ರಷ್ಟು ಕಾಮಗಾರಿ ಮಾತ್ರ ಪೂರ್ಣಗೊಂಡಿದೆ.

ಜಲ ಜೀವನ್‌ ಮಿಷನ್‌ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಈ ಬೇಸಗೆಯಲ್ಲಿ ಎಲ್ಲ ಮನೆಗೂ ನಲ್ಲಿ ಮೂಲಕ ನೀರು ಸಿಗಲಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಬಹುತೇಕ ಮನೆಗಳಿಗೆ ಜಲ ಜೀವನ್‌ ಮಿಷನ್‌ ಅಡಿಯಲ್ಲಿ ನೀರು ಪೂರೈಸಲು ಬೇಕಾದ ಕ್ರಮ ವಹಿಸುತ್ತಿದ್ದೇವೆ.
-ಪ್ರಸನ್ನ ಎಚ್‌. ಜಿ.ಪಂ. ಸಿಇಒ ಉಡುಪಿ

-ರಾಜು ಖಾರ್ವಿ

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.