Udayavni Special

ಜಿಲ್ಲೆಯಲ್ಲಿ ಡಿಪಿಆರ್‌ ಸಿದ್ಧ


Team Udayavani, Jan 16, 2021, 4:00 AM IST

ಜಿಲ್ಲೆಯಲ್ಲಿ ಡಿಪಿಆರ್‌ ಸಿದ್ಧ

ಸಾಂದರ್ಭಿಕ ಚಿತ್ರ

ಉಡುಪಿ: ಕೇಂದ್ರ ಸರಕಾರದ ಮಹಾತ್ವಾಕಾಂಕ್ಷೆ ಯೋಜನೆಗಳಾದ ಜಲಜೀವನ್‌ ಮಿಷನ್‌ ಯೋಜನೆಗೆ ಉಡುಪಿ ಜಿಲ್ಲೆಯಲ್ಲಿ ಸರ್ವರೀತಿಯ ತಯಾರಿ ನಡೆಯುತ್ತಿದೆ. ಈ ಬಗೆಗಿನ ಕೆಲಸಕಾರ್ಯಗಳು ಮುಂದಿನ 15-20 ದಿನಗಳಲ್ಲಿ ನಡೆಯುವ ಸಾಧ್ಯತೆಗಳಿವೆ. ಇದರಿಂದ ಜಿಲ್ಲೆಯ 94 ಸಾವಿರ ಮನೆಗಳಿಗೆ ನೀರು ಲಭಿಸುವ ಉದ್ದೇಶ ಹೊಂದಲಾಗಿದೆ.

ಈ ಯೋಜನೆಯಡಿ ಜಿಲ್ಲೆಯಲ್ಲಿ391 ಕಾಮಗಾರಿಗಳಿಗೆ ಡಿಪಿಆರ್‌ ಸಿದ್ಧಪಡಿಸಲಾಗಿದ್ದು, 145 ಕೋ.ರೂ.ಅನುದಾನ ಮೀಸಲಿರಿಸಲಾಗಿದೆ. 150 ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ.

ಕಾರ್ಕಳ ತಾಲೂಕಿನಲ್ಲಿ ಗರಿಷ್ಠ ಕಾಮಗಾರಿ :

ಈ ಯೋಜನೆಯಂತೆ ಜಿಲ್ಲೆಯ ಕಾರ್ಕಳ ತಾಲೂಕಿಗೆ 242 ಡಿಪಿಆರ್‌ಸಿದ್ಧಪಡಿಸಲಾಗಿದ್ದು, ಒಟ್ಟು 61 ಕೋ.ರೂ.ಗಳ ಕಾಮಗಾರಿ ನಡೆಯಲಿದೆ. ಕುಂದಾಪುರ ತಾಲೂಕಿನಲ್ಲಿ 85 ಡಿಪಿಆರ್‌ ಸಿದ್ದಪಡಿಸಲಾಗಿದ್ದು, 36 ಕೋ.ರೂ. ಮೀಸಲಿರಿಸಲಾಗಿದೆ. ಉಡುಪಿ ತಾಲೂಕಿನಲ್ಲಿ 64 ಡಿಪಿಆರ್‌ ಸಿದ್ಧಪಡಿಸ ಲಾಗಿದ್ದು, 48 ಕೋ.ರೂ.ಗಳನ್ನು ಮೀಸಲಿರಿಸಲಾಗಿದೆ.

ಕಾರ್ಕಳ ತಾಲೂಕಿನ 34 ಗ್ರಾ.ಪಂ.ಗಳ 50 ಗ್ರಾಮಗಳಲ್ಲಿ, ಕುಂದಾಪುರ ತಾಲೂಕಿನ 23 ಗ್ರಾ.ಪಂ.ಗಳ 35 ಗ್ರಾಮಗಳಲ್ಲಿ, ಉಡುಪಿ ತಾಲೂಕಿನ 33 ಗ್ರಾಮ ಪಂಚಾಯತ್‌ಗಳ 55 ಗ್ರಾಮಗಳು ಸೇರಿದಂತೆ 90 ಗ್ರಾ.ಪಂ.ಗಳ 140 ಗ್ರಾಮ ಗಳಲ್ಲಿ ಈ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದೆ.

ಏನಿದು ಜಲ ಜೀವನ್‌ ಮಿಷನ್‌? :

ಕೇಂದ್ರ ಸರಕಾರ ಜೆಜೆ ಮಿಷನ್‌ ಅನ್ನು ಆ.2019 ರಲ್ಲಿ ಘೋಷಿಸಿತು. 2024ರ ವೇಳೆಗೆ ಎಲ್ಲ ಗ್ರಾಮೀಣ ಕುಟುಂಬಗಳಿಗೆ ಕೊಳವೆ ನೀರು ಸರಬರಾಜು ಒದಗಿಸು ವುದು ಈ ಮಿಷನ್‌ನ ಉದ್ದೇಶ. ದೇಶಾದ್ಯಂತ ಸುಸ್ಥಿರ ನೀರು ಸರಬರಾಜು ನಿರ್ವಹಣೆಯ ಉದ್ದೇಶಗಳನ್ನು ಸಾಧಿಸಲು ಕೇಂದ್ರ, ರಾಜ್ಯ ಸರಕಾರಗಳು ಒಂದಾಗಿವೆ.

ಜೀವನ್‌ ಮಿಷನ್‌ ಗುರಿ : ಮಳೆನೀರು ಕೊಯ್ಲು, ಅಂತರ್ಜಲ ಪುನರ್ಭರ್ತಿ, ಕೃಷಿಯಲ್ಲಿ ಮರುಬಳಕೆಗಾಗಿ ಮನೆಯ ತ್ಯಾಜ್ಯ ನೀರನ್ನು ನಿರ್ವಹಿಸಲು ಸ್ಥಳೀಯ ಮೂಲ ಸೌಕರ್ಯ ರಚಿಸುವ ಗುರಿಯನ್ನು ಹೊಂದಿದೆ. ಜತೆಗೆ, ಪಾಯಿಂಟ್‌ ರೀಚಾರ್ಜ್‌, ಸಣ್ಣ ನೀರಾವರಿ ಟ್ಯಾಂಕ್‌ಗಳ ನಿರ್ಜಲೀಕರಣ, ಕೃಷಿಗೆ ಗ್ರೇ ವಾಟರ್‌ ಬಳಕೆ ಮತ್ತು ಮೂಲ ಸುಸ್ಥಿರತೆಯಂತಹ ವಿವಿಧ ನೀರಿನ ಸಂರಕ್ಷಣಾ ಪ್ರಯತ್ನ ಗಳನ್ನೂ ಆಧರಿಸಿದೆ.

ನೀರಿನ ಬೇಡಿಕೆ,ಪೂರೈಕೆಗೆ ಕ್ರಮ :

ಅಂತರ್ಜಲ ಮಟ್ಟ ಕಡಿಮೆಯಾಗು ತ್ತಿರುವುದರಿಂದ, ಇಂದು ದೇಶದಲ್ಲಿ ನೀರಿನ ಸಂರಕ್ಷಣೆಯ ತುರ್ತು ಅವಶ್ಯಕತೆಯಾಗಿದೆ. ಆದ್ದರಿಂದ, ಜಲಜೀವನ್‌ ಮಿಷನ್‌ ಸ್ಥಳೀಯ ಮಟ್ಟದಲ್ಲಿ ಸಮಗ್ರ ಬೇಡಿಕೆ ಮತ್ತು ನೀರಿನ ಪೂರೈಕೆ ನಿರ್ವಹಣೆಯತ್ತ ಗಮನ ಹರಿಸಲಿದೆ.

ಬೈಂದೂರಿಗೆ ಪ್ರತ್ಯೇಕ ಡಿಪಿಆರ್‌ :

ಬೈಂದೂರು ತಾಲೂಕಿಗೆ ನಬಾರ್ಡ್‌ ಯೋಜನೆಯಡಿ ಪ್ರತ್ಯೇಕ ಡಿಪಿಆರ್‌ ಸಿದ್ದಪಡಿಸಲು ಯೋಜನೆ ರೂಪಿಸ ಲಾಗುತ್ತಿದೆ. ಇದು ಇನ್ನಷ್ಟೇ ಜಾರಿ ಯಾಗಬೇಕಿದೆ. ಈ ಬಗೆಗಿನ ಪ್ರಕ್ರಿಯೆ ಗಳು ಈಗ ಚಾಲ್ತಿಯಲ್ಲಿದೆ.

ಜಲಜೀವನ್‌ ಯೋಜನೆ ಮೂಲಕ ಜಿಲ್ಲೆಯಲ್ಲಿ ನೀರಿನ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶ  ಹೊಂದಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಪ್ರಥಮ ಹಂತದ ಟೆಂಡರ್‌ ಪ್ರಕ್ರಿಯೆ  ಪೂರ್ಣಗೊಂಡಿವೆ. ಕಾಮಗಾರಿಯ ಮೇಲೆ ಹಣ ಬಿಡುಗಡೆ ಆಗಲಿದೆ. 15-20 ದಿನಗಳೊಳಗೆ ಕಾಮಗಾರಿ ಪ್ರಕ್ರಿಯೆ ಜಿಲ್ಲೆಯಾದ್ಯಂತ ಆರಂಭವಾಗಲಿದೆ.ಡಾ| ನವೀನ್‌ ಭಟ್‌, ಜಿ.ಪಂ.ಸಿಇಒ, ಉಡುಪಿ.

ಟಾಪ್ ನ್ಯೂಸ್

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

Untitled-1

ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದ ಶಿವಮೊಗ್ಗದ ಅದೃಷ್ಟವಂತ!

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Siddaramaiah

ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

kaup

ಕಾಪು: ಜೆಡಿಎಸ್‌ ನ ಎಲ್ಲಾ ಘಟಕಗಳು ವಿಸರ್ಜನೆ: ಯೋಗೀಶ್ ಶೆಟ್ಟಿ

ಇಂದ್ರಾಳಿ: ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು!

ಇಂದ್ರಾಳಿ: ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು!

ಉಡುಪಿ: ಸಾವನ್ನಪ್ಪಿ ಎಂಟು ತಿಂಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ!

ಉಡುಪಿ: ಸಾವನ್ನಪ್ಪಿ ಎಂಟು ತಿಂಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ!

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಹೀಗೊಂದು ವೀಗನ್‌ ಶೈಲಿಯ ಮದುವೆ!

ಹೀಗೊಂದು ವೀಗನ್‌ ಶೈಲಿಯ ಮದುವೆ!

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

“ಒಟಿಟಿ ಶೋ ಸೆನ್ಸಾರ್‌ ಅಗತ್ಯ’

“ಒಟಿಟಿ ಶೋ ಸೆನ್ಸಾರ್‌ ಅಗತ್ಯ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.