ಡಾ| ಜಿ. ಶಂಕರ್‌ ಮಾದರಿ ವ್ಯಕ್ತಿತ್ವ: ಡಾ| ಬಲ್ಲಾಳ್‌

ಹಾಲಾಡಿ: ಶಾಲಿನಿ ಜಿ. ಶಂಕರ್‌ ಕನ್ವೆನ್ಶನ್‌ ಸೆಂಟರ್‌ ಉದ್ಘಾಟನೆ

Team Udayavani, Feb 18, 2020, 1:00 AM IST

ben-43

ಸಿದ್ದಾಪುರ: ಸಮಾಜದಲ್ಲಿ ಬಹಳಷ್ಟು ಮಂದಿ ಶ್ರೀಮಂತರಿದ್ದಾರೆ. ದಾನ- ಧರ್ಮ ವಿಚಾರ ಬಂದಾಗ ಹಿಂದಕ್ಕೆ ಸರಿಯುತ್ತಾರೆ. ಆದರೆ ಡಾ| ಜಿ. ಶಂಕರ್‌ ಮಾತ್ರ ಸ್ವಂತಕ್ಕಿಂತ ಹೆಚ್ಚು ಸಮಾಜಕ್ಕಾಗಿ ಖರ್ಚು ಮಾಡಿ ಮಾದರಿಯಾಗಿದ್ದಾರೆ. ರಕ್ತದಾನ ಮತ್ತು ಆರೋಗ್ಯ ಶಿಬಿರದ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಿದ್ದಾರೆ ಎಂದು ಮಣಿಪಾಲದ ಮಾಹೆಯ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದರು. ಅವರು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಅಂಬಲಪಾಡಿ ಮತ್ತು ಶ್ಯಾಮಿಲಿ ಸಂಸ್ಥೆ ವತಿಯಿಂದ ಹಾಲಾಡಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನೂತನವಾಗಿ ನಿರ್ಮಿಸಿದ “ಶಾಲಿನಿ ಜಿ. ಶಂಕರ್‌ ಕನ್ವೆನ್ಶನ್‌ ಸೆಂಟರ್‌ ಮತ್ತು ಓಪನ್‌ ಗಾರ್ಡನ್‌ ಸಭಾಂಗಣವನ್ನು ಸೋಮವಾರ ಲೋಕಾರ್ಪಣೆಗೈದು ಮಾತನಾಡಿದರು.

ಶ್ರೀಮಂತರು ಸಂಪತ್ತು ಗಳಿಕೆಯ ಕನಸು ಕಂಡರೇ ಡಾ| ಜಿ. ಶಂಕರ್‌ ಸಮಾಜದ ಏಳಿಗೆಗಾಗಿ ದುಡಿಯುವ ಸೇವಾ ನಿಷ್ಠೆ ಹೊಂದಿದ್ದಾರೆ. ತಮ್ಮ ದುಡಿಮೆಯ ಬಹುಪಾಲನ್ನು ಗ್ರಾಮೀಣ ಭಾಗದ ಬಡ ಜನರ ಅಭಿವೃದ್ಧಿಗಾಗಿ ನೀಡಿದ್ದಾರೆ ಎಂದರು.

ವಿದ್ವಾನ್‌ ಕಬ್ಯಾಡಿ ಜಯರಾಮ ಆಚಾರ್ಯ ಮಾತನಾಡಿ, ಡಾ| ಜಿ. ಶಂಕರ್‌ ಅವರು ಧಾರ್ಮಿಕ, ಶೈಕ್ಷಣಿಕ, ವೈದ್ಯಕೀಯ ಸೇರಿದಂತೆ ಸಮಾಜ ಸೇವೆಗಾಗಿ ನೀಡಿದ ಕೊಡುಗೆಗಳು ಸರ್ವಶ್ರೇಷ್ಠವಾಗಿವೆ. ಪ್ರಸ್ತುತ 3 ಸಭಾಂಗಣಗಳನ್ನು ನಿರ್ಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಸಭಾಂಗಣಗಳನ್ನು ನಿರ್ಮಿಸುವ ಕನಸು ಹೊಂದಿದ್ದಾರೆ. ಜಿ. ಶಂಕರ್‌ ಅವರು ಹಲವು ಸಮಾಜಮುಖೀ ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿ ಮಾಡುತ್ತಿದ್ದಾರೆ ಎಂದರು.

ಅರ್ಚಕ ವಿಘ್ನೇಶ ಅಡಿಗ, ಕಿದಿಯೂರು ಹೊಟೇಲ್‌ ಮಾಲಕ ಭುವನೇಂದ್ರ ಕಿದಿಯೂರು, ಮೊಗವೀರ ಮಹಾಜನ ಸೇವಾ ಸಂಘದ ಬಗ್ವಾಡಿ ಹೋಬಳಿಯ ಕುಂದಾಪುರ ಶಾಖಾಧ್ಯಕ್ಷ ಕೆ.ಕೆ. ಕಾಂಚನ್‌, ಮೊಗವೀರ ಸಂಯುಕ್ತ ಸಭಾ ಬೆಣ್ಣೆಕುದ್ರು ಅಧ್ಯಕ್ಷ ಸತೀಶ ಅಮೀನ್‌ ಬಾಕೂìರು, ಮೊಗವೀರ ಯುವ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಶಿವರಾಮ ಕೆ.ಎಂ. ಕೋಟ, ಡಾ| ಜಿ. ಶಂಕರ್‌ ಅವರ ಪತ್ನಿ ಶಾಲಿನಿ ಜಿ. ಶಂಕರ್‌, ಅಳಿಯ ನವೀನ್‌, ಪುತ್ರಿ ಶಾಮಿಲಿ, ಮೊಮ್ಮಗಳು ಶನಾಯ, ಸಹೋದರ ಶಿವ ಜಿ. ಕರ್ಕೇರ, ವಸಂತಿ ಶಿವ ಕರ್ಕೇರ, ಕಟ್ಟಡದ ವಿನ್ಯಾಸಗಾರರಾದ ಯೋಗೀಶ್ಚಂದ್ರ, ಗೋಪಾಲ ಭಟ್‌ ಉಪಸ್ಥಿತರಿದ್ದರು. ಗಣೇಶ ಕಾಂಚನ್‌ ಕಾರ್ಯಕ್ರಮ ನಿರೂಪಿಸಿದರು.

ಸಮಾಜದ ಒಳಿತಿಗಾಗಿ ಈ ಸಭಾಭವನ
ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಸಭಾಭವನ ನಿರ್ಮಿಸಲಾಗಿದೆ. ಬಡವರ ಶಕ್ತಿ ಕೇಂದ್ರವಾಗಲಿರುವ ಈ ಸಭಾಭವನದಲ್ಲಿ ಉಚಿತ ಸಾಮೂಹಿಕ ವಿವಾಹ, ಮೊಗವೀರ ಸಂಘಟನೆಯ ಆಶಯದಂತೆ ಮುಂದಿನ ದಿನಗಳಲ್ಲಿ ಮಕ್ಕಳ ಆರೋಗ್ಯದ ಬಗ್ಗೆ, ವಿದ್ಯಾರ್ಥಿವೇತನ ನೀಡುವ ಕಾರ್ಯ, ಗುರಿಕಾರ ಸಮ್ಮಾನ ಕಾರ್ಯಕ್ರಮ ಮಾಡಲಾಗುತ್ತದೆ.

ಬಡವರು ಮದುವೆ ಮಾಡಲು ಕಷ್ಟ ಎಂದು ಬಂದಲ್ಲಿ ಸಭಾ ಭವನವನ್ನು ಉಚಿತವಾಗಿ ನೀಡಲಾಗುತ್ತದೆ. ಸಮಾಜದ 50 ಜೋಡಿಗಾದರೂ ಸಾಮೂಹಿಕ ಮದುವೆ ಮಾಡಿಸುವ ಉದ್ದೇಶ ಹೊಂದಿದ್ದೇವೆ. ಕೇವಲ ಮೊಗವೀರ ಸಮಾಜವಲ್ಲದೆ ಇತರ ಸಮಾಜದ 20ರಿಂದ 30 ಜೋಡಿಗಳಿಗೆ ಮದುವೆ ಮಾಡಿಸುವವರು ಮುಂದೆ ಬಂದಲ್ಲಿ ಸಭಾಭವನವನ್ನು ಉಚಿತವಾಗಿ ನೀಡಲಾಗುವುದು. ಸಮಾಜದ ಒಳಿತಿಗಾಗಿ ಈ ಸಭಾಭವನ ನಿರ್ಮಿಸಲಾಗಿದೆ.
– ಡಾ| ಜಿ. ಶಂಕರ್‌, ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಅಂಬಲಪಾಡಿ, ಉಡುಪಿ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.