ಡಾ| ಉಪ್ಪಂಗಳ ರಾಮಭಟ್ಟರಿಗೆ ತಾಳ್ತಜೆ ಕೇಶವ ಭಟ್ಟ ಪ್ರಶಸ್ತಿ

Team Udayavani, May 15, 2019, 6:20 AM IST

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ತಾಳ್ತಜೆ ಕೇಶವ ಭಟ್ಟ ಪ್ರಶಸ್ತಿಯನ್ನು ಬಹುಮುಖ ಸಾಧಕ ಡಾ| ಉಪ್ಪಂಗಳ ರಾಮಭಟ್ಟರಿಗೆ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ.

ಕನ್ನಡದ ವಿದ್ವಾಂಸರ ಪರಂಪರೆಯನ್ನು ಶ್ರೀಮಂತ ಗೊಳಿಸಿದ ಸಂಶೋಧಕ ಪ್ರೊ| ತಾಳ್ತಜೆ ಕೇಶವ ಭಟ್ಟರ ನೆನಪಿನಲ್ಲಿ ನೀಡಲಾಗುವ ಈ ಪ್ರಶಸ್ತಿಯನ್ನು ಡಾ| ಉಪ್ಪಂಗಳ ರಾಮ ಭಟ್ಟ ಅವರಿಗೆ ಮೇ 22ರಂದು ಬೆಳಗ್ಗೆ 10.30ಕ್ಕೆ ನೂತನ ರವೀಂದ್ರ ಮಂಟಪದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಇಪ್ಪತ್ತೆ„ದು ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ ಎಂದು ಸಂಯೋಜನಾಧಿಕಾರಿ ಪ್ರೊ| ವರದೇಶ ಹಿರೇಗಂಗೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಡಾ| ಉಪ್ಪಂಗಳ ರಾಮಭಟ್ಟರ ಹಲವಾರು ಕೃತಿಗಳಿಗೆ ಪ್ರಶಸ್ತಿಗಳು ಸಂದಿವೆ. ಅವರು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಅಧ್ಯಾಪಕ ಸಂಘದ ಅಧ್ಯಕ್ಷರಾಗಿ, ಸದಸ್ಯರಾಗಿ ವಿಚಾರಗೋಷ್ಠಿಗಳಲ್ಲಿ ಪ್ರಬಂಧ ಮಂಡಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಸಂಗೀತ, ಗಮಕಗಳಲ್ಲಿ ತನ್ನನ್ನು ತೊಡಗಿಸಿಕೊಂಡವರು.ಕಾಸರಗೋಡು ತಾಲೂಕಿನ ಕುಂಬಾxಜೆ ಗ್ರಾಮದ ಉಪ್ಪಂಗಳದವರಾದ ಇವರು ಉಪ್ಪಂಗಳ ಕೊಡೆ ಪರಮೇಶ್ವರ ಭಟ್ಟ ಹಾಗೂ ಲಕ್ಷ್ಮಿ ಅವರ ಪುತ್ರರಾಗಿದ್ದಾರೆ. ಪ್ರಾಥಮಿಕ ಹಾಗೂ ಹೈಸ್ಕೂಲ್‌ ವಿದ್ಯಾಭ್ಯಾಸವನ್ನು ಕಾಸರಗೋಡಿನಲ್ಲಿ, ಎಂ.ಎ. ಕಲ್ಲಿಕೋಟೆ ವಿಶ್ವವಿದ್ಯಾಲಯ, ಜೂನಿಯರ್‌ ಡಿಪ್ಲೊಮಾ ಇನ್‌ ಜರ್ಮನ್‌ ಮೈಸೂರು ವಿಶ್ವವಿದ್ಯಾಲಯದಲ್ಲಿ ಮುಗಿಸಿದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ಪಿ.ಎಚ್‌.ಡಿ. ಪದವಿಯನ್ನು ಪಡೆದು ಉಪನ್ಯಾಸಕರಾಗಿ ಕೊಡಗು ಹಾಗೂ 25 ವರ್ಷಗಳ ಕಾಲ ಎಂ.ಜಿ.ಎಂ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ, ವಿಭಾಗ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ