ಕರಾವಳಿ ತೀರದಲ್ಲಿ ಚಿಗುರೊಡೆದಿದೆ ಪರಿಸರ ರಕ್ಷಕ ಕಾಂಡ್ಲ ಕಾಡು

ಗುಂಡ್ಮಿ-ಪಾರಂಪಳ್ಳಿಯ 15ಹೆಕ್ಟೇರ್‌ ಪ್ರದೇಶದಲ್ಲಿ ಯಶಸ್ವಿ ಕೃಷಿ

Team Udayavani, Apr 27, 2019, 10:34 AM IST

udupi-5-tdy..

••ರಾಜೇಶ ಗಾಣಿಗ ಅಚ್ಲಾಡಿ

ಕೋಟ, ಎ. 26: ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕಾಂಡ್ಲ ಕಾಡು ಇದೀಗ ನಶಿಸುತ್ತಿದೆ. ಇದರ ರಕ್ಷಣೆ ಮತ್ತು ಬೆಳೆಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸ್ಥಳೀಯರ ಮೂಲಕ ಕಾಂಡ್ಲ ವನಗಳ ನಿರ್ಮಾಣಕ್ಕೆ ಮುಂದಾಗಿದೆ. ವರ್ಷದ ಹಿಂದೆ ಗುಂಡ್ಮಿ, ಪಾರಂಪಳ್ಳಿ ಹೊಳೆಯ ಸುಮಾರು 15 ಹೆಕ್ಟೇರ್‌ ಪ್ರದೇಶದ ಹಿನ್ನೀರಿನಲ್ಲಿ ನಾಟಿ ಮಾಡಿದ ಕಾಂಡ್ಲ ಸಸಿಗಳಲ್ಲಿ ಶೇ.80ರಿಂದ ಶೇ.90ರಷ್ಟು ಬೆಳೆದು ನಿಂತಿದೆ.

4 ತಿಂಗಳು ನಾಟಿ:

ಅರಣ್ಯ ಇಲಾಖೆ ಸಹಕಾರದಲ್ಲಿ ಒಂದು ವರ್ಷದ ಹಿಂದೆ ಸಾಸ್ತಾನ ಸಮೀಪ ಕೋಡಿಕನ್ಯಾಣ ಸೇತುವೆಯಿಂದ ಉತ್ತರಕ್ಕೆ ಗುಂಡ್ಮಿ ಬಡಾಅಲಿತೋಟ ಮೂಲಕ ಪಾರಂಪಳ್ಳಿ ಸೇತುವೆ ತನಕ ಸ್ಥಳೀಯರು 4ತಿಂಗಳುಗಳ ಕಾಲ ಕಾರ್ಯ ನಿರ್ವಹಿಸಿ 15ಹೆಕ್ಟೇರ್‌ ಪ್ರದೇಶದ ಹೊಳೆಯಲ್ಲಿ ಕಾಂಡ್ಲ ಗಿಡಗಳನ್ನು ನಾಟಿ ಮಾಡಿದ್ದರು.

ಪರಿಸರ ಸಂರಕ್ಷಕ:

ಕಾಂಡ್ಲದಲ್ಲಿ ಸುಮಾರು 25ಕ್ಕೆ ಹೆಚ್ಚಿನ ಪ್ರಭೇದಗಳಿವೆ. ಇದರ ಬೇರುಗಳು ತೀರಪ್ರದೇಶದ ಮಣ್ಣನ್ನು ಬಿಗಿಯಾಗಿ ಹಿಡಿಯುವುದರಿಂದ ಸಮುದ್ರ ಹಾಗೂ ಭೂ ಕೊರೆತಕ್ಕೆ ತಡೆಯಾಗುತ್ತದೆ. ಮರಗಳು ತಡೆಗೋಡೆಯಂತೆ ಬೆಳೆದು ನಿಲ್ಲುವುದರಿಂದ ಬಿರುಗಾಳಿ, ಚಂಡಮಾರುತ, ಪ್ರವಾಹ, ಕಡಲ್ಕೊರೆತ, ಸುನಾಮಿಯಂಥ ಪ್ರಕೃತಿ ವಿಕೋಪದ ಜತೆಗೆ ಸಮುದ್ರದ ತೀರದಲ್ಲಿ ಉಂಟಾಗುವ ವಿನಾಶವನ್ನು ತಡೆಯುತ್ತದೆ. ಇದರ ದಪ್ಪ ಹಸುರು ಎಲೆಗಳು ಅಧಿಕ ಅಧಿಕ ಪ್ರಮಾಣದಲ್ಲಿ ಆಮ್ಲಜನಕ ಬಿಡುಗಡೆ ಮಾಡುತ್ತವೆ. ನದಿಗಳಿಂದ ಬರುವ ಸಾರಾಂಶವನ್ನು ಹಿಡಿದಿಟ್ಟು ಆ ಪ್ರದೇಶವನ್ನು ಸಮೃದ್ಧಗೊಳಿಸಲು ಇವು ಸಹಕಾರಿ. ಪ್ರಾಣಿ, ಪಕ್ಷಿ ಹಾಗೂ ಜಲಚರಗಳಾದ ಮೀನು, ಏಡಿ, ಕಪ್ಪೆ ಇತ್ಯಾದಿಗಳು ಮರಿಮೊಟ್ಟೆಗಳ ಸಂತಾನಾಭಿವೃದ್ಧಿ ಆಹಾರಕ್ಕಾಗಿ ಇದನ್ನು ಆಶ್ರಯಿಸುತ್ತವೆ.

ಕಾಂಡ್ಲ ವನ ನಿರ್ಮಾಣ ಹೇಗೆ ?

ಕಾಂಡ್ಲದ ಕಾಯಿ, ಕೋಡುಗಳೇ ಈ ಸಸ್ಯದ ಪರಂಪರೆಯ ಕೊಂಡಿ. ಮರದಿಂದ ಬೇರ್ಪಟ್ಟು, ನೀರಿನ ತಳದ ಕೆಸರಿಗೆ ಅಡಿಮುಖವಾಗಿ ಇಳಿಯುವ ಕೋಡುಗಳು, ಗಿಡಗಳಾಗಿ ರೂಪ ಪಡೆಯುತ್ತವೆ. ಇಂತಹ ಲಕ್ಷಾಂತರ ಕೋಡುಗಳನ್ನು ಸಂಗ್ರಹಿಸಿ ನಾಟಿ ಮಾಡಿ ಕಾಂಡ್ಲಾ ವನ ನಿರ್ಮಿಸಲಾಗುತ್ತದೆ.

ಕಾಂಡ್ಲ ವನ ರಕ್ಷಣೆಯಲ್ಲಿ ಕೈಜೋಡಿಸಿ

ಸಾಸ್ತಾನ ಸಮೀಪ ಗುಂಡ್ಮಿಯಲ್ಲಿ ಸ್ಥಳೀಯರ ಮೂಲಕ 15ಹೆಕ್ಟೇರ್‌ ಪ್ರದೇಶದಲ್ಲಿ ಕಾಂಡ್ಲವನ ನಿರ್ಮಿಸಲಾಗಿದೆ ಇದು ಪರಿಸರ ರಕ್ಷಣೆಗೆ ಸಹಕಾರಿಯಾಗಿದೆ. ಇದರ ರಕ್ಷಣೆಗೆ ಸ್ಥಳೀಯರು ಸಹಕಾರ ನೀಡಬೇಕು ಹಾಗೂ ಕಾಂಡ್ಲ ಗಿಡಗಳನ್ನು ನಾಶಪಡಿಸುವುದು ಅರಣ್ಯ ಕಾಯಿದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. -ಜೀವನದಾಸ್‌ ಶೆಟ್ಟಿ,ಉಪವಲಯ ಅರಣ್ಯಾಧಿಕಾರಿಗಳು, ಬ್ರಹ್ಮಾವರ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.