ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸಿ: ಪ್ರಮೋದ್ ಮಧ್ವರಾಜ್
Team Udayavani, Jul 6, 2017, 3:45 AM IST
ಉಡುಪಿ: ಪೋಷಕರು, ಶಿಕ್ಷಕರು ಪ್ರತಿಯೊಂದು ಮಗುವಿನ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸಬೇಕು. ಪ್ರಸ್ತುತ ವರ್ಷದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಚಿಗುರು ಕಾರ್ಯಕ್ರಮವನ್ನು ಹಮ್ಮಿ ಕೊಂಡಿರುವುದು ಸಂತಸದ ವಿಷಯ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಶುಕ್ರವಾರ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡುವಿನ ನಲಂದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಕ್ಕಳ ಸಾಂಸ್ಕೃತಿಕ ಹಬ್ಬ ಚಿಗುರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಓದುವುದರ ಜತೆ ಜತೆಗೆ ವಿವಿಧ ಕಲೆಗಳಾದ ಸಂಗೀತ, ನೃತ್ಯ, ನಾಟಕ ಮುಂತಾದವುಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳಬೇಕು ಹಾಗೂ ಮಕ್ಕಳ ಈ ಪ್ರತಿಭೆಯನ್ನು ಪ್ರೋತ್ಸಾಹಿಸುವ ಗುಣ ನಮ್ಮೆಲ್ಲರಲ್ಲಿÉ ಬರಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕಲೆಯನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಸ್ವಾಗತಿಸಿದರು. ವಿದ್ಯಾರ್ಥಿ ನಚಿಕೇತ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲಾ ವಂದಿಸಿದರು. ಶಾಸ್ತೀಯ ವಾದ್ಯ ಸಂಗೀತ, ಶಾಸ್ತ್ರೀಯ ಸಂಗೀತ, ದಾಸರಪದಗಳು, ಜನಪದಗೀತೆಗಳು, ಸಮೂಹ ನೃತ್ಯ, ಭರತನಾಟ್ಯ, ನಾಟಕ, ಏಕಪಾತ್ರಾಭಿನಯ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ