ಕಾಪು : ಗೃಹೋಪಯೋಗಿ ಮಾರಾಟ ಮಳಿಗೆಯಲ್ಲಿ ಬೆಂಕಿ, ಅಪಾರ ಸೊತ್ತುಹಾನಿ
Team Udayavani, Sep 26, 2021, 12:35 PM IST
ಕಾಪು : ಕಾಪು ಪೇಟೆಯ ಉದಯ ಬಜಾರ್ ಮಳಿಗೆಯಲ್ಲಿ ಶನಿವಾರ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ನಷ್ಟ ಉಂಟಾಗಿದೆ.
ಶನಿವಾರ ರಾತ್ರಿ ಹೊಗೆ ಕಾಣಿಸಿಕೊಂಡಿದ್ದು, ಅದನ್ನು ಗಮನಿಸಿದ ಸ್ಥಳೀಯರು ಪರಿಶೀಲನೆ ನಡೆಸಿ, ಬಜಾರ್ ಒಳಗೆ ಬೆಂಕಿ ಆವರಿಸಿ ಕೊಂಡಿರುವುದನ್ನು ಗಮನಿಸಿದ್ದರು.
ಕೂಡಲೇ ಸ್ಥಳೀಯರು ಮತ್ತು ಕಟ್ಟಡದ ಮಾಲಕರು ಉಡುಪಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು , ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉದಯ ಬಜಾರ್ ನ ಒಳಗಿದ್ದ ಟಿವಿ, ಫ್ರಿಡ್ಜ್ ಸಹಿತ ವಿವಿಧ ಇಲೆಕ್ಟ್ರಾನಿಕ್ ಉಪಕರಣಗಳು, ಗ್ರಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಸೊತ್ತು ನಷ್ಟದ ವರದಿ ಇನ್ನಷ್ಟೇ ಅಂದಾಜಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!