ಮಾರುಕಟ್ಟೆಗೆ ಇನ್ನೂ ಬಂದಿಲ್ಲ ಪ್ರಥಮ ಪಿಯುಸಿ ಪಠ್ಯಪುಸ್ತಕ

Team Udayavani, Jun 17, 2019, 10:27 AM IST

text-book

ಕಾರ್ಕಳ: ಪ್ರಥಮ ಪಿಯುಸಿ ತರಗತಿ ಮೇ 20ರಂದು ಪ್ರಾರಂಭಗೊಂಡಿದ್ದರೂ ವಿದ್ಯಾರ್ಥಿ ಗಳಿಗೆ ಇನ್ನೂ ಪಠ್ಯಪುಸ್ತಕ ದೊರೆತಿಲ್ಲ. ಇದರಿಂದ ಜೆರಾಕ್ಸ್‌ ಮಾಡಿಸಿಕೊಳ್ಳುವ ಅನಿವಾರ್ಯತೆ ಉಂಟಾಗಿದೆ. ಕಾಲೇಜು ಪ್ರಾರಂಭವಾಗಿ 27 ದಿನ ಗಳು ಕಳೆದರೂ ಪಠ್ಯಪುಸ್ತಕ ಲಭಿಸ ದಿರುವುದು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರನ್ನು ಕಷ್ಟಕ್ಕೀಡು ಮಾಡಿದೆ.

ಪಿಯುಸಿ ಪಠ್ಯಪುಸ್ತಕವನ್ನು ಸರಕಾರದ ವತಿಯಿಂದಲೇ ಮುದ್ರಿಸಿ, ಪುಸ್ತಕ ಮಳಿಗೆಗಳಿಗೆ ವಿತರಿಸ ಲಾಗುತ್ತದೆ. 2014ರ ಬಳಿಕ ಪಠ್ಯಕ್ರಮ ಬದಲಾಗದೆ ಪುಸ್ತಕ ಮುದ್ರಣ ವಾಗುತ್ತಿತ್ತು. ಈ ಬಾರಿ ಮಾತ್ರ ಪಠ್ಯಪುಸ್ತಕ ಪೂರೈಕೆಯಾಗದೆ ಪುಸ್ತಕ ಮಳಿಗೆಗಳಲ್ಲಿ ದೊರೆಯುತ್ತಿಲ್ಲ.

ಸ್ಪಷ್ಟತೆಯಿಲ್ಲ
ಪುಸ್ತಕ ಮಳಿಗೆಗಳಲ್ಲಿ ವಿಚಾರಿಸಿದರೆ, ಭಾಷಾ ವಿಷಯ ಹೊರತುಪಡಿಸಿ ಉಳಿದ ಪುಸ್ತಕ ಬಂದಿಲ್ಲ ಎನ್ನುತ್ತಾರೆ. ಯಾವಾಗ ಬರಲಿದೆ ಎಂಬ ಪ್ರಶ್ನೆಗೆ ಸಮರ್ಪಕವಾದ ಉತ್ತರ ಅವರಲ್ಲಿ ಇಲ್ಲ.

ವಿಜ್ಞಾನ ವಿದ್ಯಾರ್ಥಿಗಳಿಗೆ ಕಷ್ಟ
ಪಠ್ಯಪುಸ್ತಕ ಇಲ್ಲದೆ ಹೆಚ್ಚು ತೊಂದರೆಗೆ ಒಳಗಾಗುವವರು ವಿಜ್ಞಾನ ವಿದ್ಯಾರ್ಥಿಗಳು. ಅವರಿಗೆ ಹಳೆ ವಿದ್ಯಾರ್ಥಿಗಳ ಪಠ್ಯ ಪುಸ್ತಕ ದೊರೆಯುವ ಸಾಧ್ಯತೆ ಕಡಿಮೆ. ಸಿಇಟಿ, ನೀಟ್‌ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅವುಗಳ ಅಗತ್ಯ ಇರುತ್ತದೆ. ಹೀಗಾಗಿ ಪಥಮ ಪಿಯುಸಿ ಸೈನ್ಸ್‌ಗೆ ದಾಖಲಾದ ವಿದ್ಯಾರ್ಥಿಗಳು ಕಷ್ಟಪಡುವಂತಾಗಿದೆ.

ವಸತಿಯುತ ಕಾಲೇಜುಗಳಿಗೆ ತೊಂದರೆ
ವಸತಿಯುತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿ ಯಿಂದಲೇ ಪಠ್ಯಪುಸ್ತಕ ನೀಡುವುದು ರೂಢಿ. ಈ ಕಾಲೇಜುಗಳಲ್ಲಿ ಹೊರ ಜಿಲ್ಲೆಯ ವಿದ್ಯಾರ್ಥಿಗಳೇ ಅಧಿಕ ಸಂಖ್ಯೆಯಲ್ಲಿರುವುದರಿಂದ ಅಂತಹ ಕಾಲೇಜುಗಳಿಗೆ ಪುಸ್ತಕ ಹೊಂದಿಸುವುದು ತ್ರಾಸದಾಯಕ. ಉದಾಹರಣೆಗೆ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ 350 ವಿದ್ಯಾರ್ಥಿಗಳಿದ್ದಲ್ಲಿ ಅಷ್ಟೊಂದು ಪಠ್ಯಪುಸ್ತಕ ಹೊಂದಿಸುವುದು ಕಷ್ಟಸಾಧ್ಯ.

ರಾಜ್ಯದ ನಾಲ್ಕು ಕಡೆಗಳಲ್ಲಿ ಪಿಯುಸಿ ಪಠ್ಯಪುಸ್ತಕ ಮುದ್ರಣವಾಗುತ್ತಿದೆ. ಪುಸ್ತಕ ಮಳಿಗೆಗಳಿಗೆ ಪುಸ್ತಕ ಪೂರೈಕೆಯೂ ಆಗುತ್ತಿದೆ. ಕೆಲವು ಸಣ್ಣ ಪುಟ್ಟ ಸಮಸ್ಯೆಗಳಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದರೂ ವಿದ್ಯಾರ್ಥಿಗಳು, ಪೋಷಕರು ಆತಂಕ ಪಡಬೇಕಾಗಿಲ್ಲ.
ಸುಬ್ರಹ್ಮಣ್ಯ ಜೋಷಿ, ಜಿಲ್ಲಾ ಉಪನಿರ್ದೇಶಕರು, ಪ.ಪೂ. ಶಿಕ್ಷಣ ಇಲಾಖೆ, ಉಡುಪಿ

ಕಾಲೇಜಿಗೆ ಪೂರೈಕೆಯಾಗಲಿ
ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಸರಕಾರದಿಂದ ಪಠ್ಯಪುಸ್ತಕ ಪೂರೈಕೆಯಾದಂತೆ ಕಾಲೇಜುಗಳಿಗೂ ದಾಖಲಾತಿಗೆ ಅನುಗುಣವಾಗಿ ಸರಕಾರವೇ ಪಠ್ಯ ಪುಸ್ತಕಒದಗಿಸಲಿ ಎನ್ನುತ್ತಾರೆ ವಿದ್ಯಾರ್ಥಿನಿ ರಕ್ಷಾ ಸಂಪ್ಯ.

ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.