ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿ ಸಾವು!
Team Udayavani, Feb 8, 2021, 12:12 PM IST
ಕಾಪು: ಲೈಟ್ ಹೌಸ್ ಬಳಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಜಗದೀಶ್ ಅಧಿಕಾರಿಯ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ. ನೀಡುತ್ತೇನೆ : ಪ್ರತಿಭಾ ಕುಳಾಯಿ ಘೋಷಣೆ
ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಅವರು, ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆಯೇ ಬಲೆಯೊಳಗೆ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.
ಕಾಸ್ಮಾರ್ ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.
ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್