ಆಹಾರ ಸುರಕ್ಷತಾ ಕಾಯ್ದೆ: ಜಿಲ್ಲೆಯಲ್ಲಿ 5 ಸಾವಿರ ನೋಂದಣಿ

 ಕಾಯ್ದೆ ಉಲ್ಲಂಘಿಸಿದರೆ 5 ಲಕ್ಷ ರೂ.ವರೆಗೆ ದಂಡ

Team Udayavani, Jan 30, 2020, 5:36 AM IST

FOOD-VGE

ಆಹಾರ ಸುರಕ್ಷತಾ ಕಾಯ್ದೆಯಡಿ ವ್ಯಾಪಾರಿಗಳು ಪರವಾನಿಗೆ ನೋಂದಣಿ ಮಾಡಿಕೊಳ್ಳಬೇಕಾಗಿದೆ. ಜ. 31ಕ್ಕೆ ಪರವಾನಿಗೆ ಪಡೆದುಕೊಳ್ಳಲು ಅಂತಿಮ ದಿನಾಂಕವಾಗಿದ್ದು ಜಿಲ್ಲೆಯಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಉಡುಪಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಜಾರಿ ಬಳಿಕ ಉಡುಪಿ ಜಿಲ್ಲೆಯಲ್ಲಿ 4,980 ಮಂದಿ ಆಹಾರ ಉತ್ಪನ್ನಗಳ ತಯಾರಕರು ಮತ್ತು ಮಾರಾಟಗಾರರು ನೋಂದಣಿ ಮಾಡಿಕೊಂಡಿದ್ದು, 3,507 ಮಂದಿ ಪರವಾನಿಗೆ ಪಡೆದಿದ್ದಾರೆ. ಈ ವರ್ಷ 1364 ಮಂದಿ ನೋಂದಣಿ ಹಾಗೂ 895 ಮಂದಿ ಪರವಾನಿಗೆ ಪಡೆದಿದ್ದಾರೆ.

ನೋಂದಣಿ ಹೇಗೆ?
12 ಲಕ್ಷ ರೂ.ವರೆಗೆ ವಾರ್ಷಿಕ ವಹಿವಾಟು ಹೊಂದಿರುವ ಆಹಾರ ಪದಾರ್ಥಗಳ ಮಾರಾಟ ಮತ್ತು ಉತ್ಪಾದಕರು ವಾರ್ಷಿಕ 100 ರೂ. ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು. ಇದಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಒಂದು ವರ್ಷ, 2 ವರ್ಷ, 3 ವರ್ಷ, 5 ವರ್ಷ ಹೀಗೆ 4 ಹಂತಗಳಲ್ಲಿ ಪರವಾನಿಗೆ ಅಥವಾ ನೊಂದಣಿ ಮಾಡಿಕೊಳ್ಳಲು ಅವಕಾಶವಿದೆ. ಪರವಾನಿಗೆ ಪಡೆದವರು ತಮ್ಮ ಅಂಗಡಿ ಅಥವಾ ಸಂಸ್ಥೆಗಳಲ್ಲಿ ಪ್ರಮಾಣ ಪತ್ರವನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕಿದೆ.

ಯಾರೆಲ್ಲ ಪಡೆಯಬೇಕು? ಬೇಕರಿಗಳು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳು, ವೈನ್‌ ಸ್ಟೋರ್‌ಗಳು, ಹೋಟೆಲ್‌ಗ‌ಳು, ಕ್ಯಾಂಟೀನ್‌ಗಳು, ಕ್ಲಬ್‌ಗಳು, ತಂಪು ಪಾನೀಯ ತಯಾರಿಕ ಘಟಕಗಳು, ಪ್ಯಾಕೇಜ್‌x ಡ್ರಿಂಕಿಂಗ್‌ ನೀರಿನ ಘಟಕಗಳು, ರಸ್ತೆ ಬದಿಯ ಆಹಾರ ವ್ಯಾಪಾರಿಗಳು, ಡಾಬಾ, ಶಾಲಾ ಕಾಲೇಜು ಕಚೇರಿಯ ಕ್ಯಾಂಟೀನ್‌, ವಸತಿ ನಿಲಯಗಳು, ನ್ಯಾಯ ಬೆಲೆ ಅಂಗಡಿ, ಸರಕಾರಿ ಮತ್ತು ಸರಕಾರೇತರ ವಸತಿ ನಿಲಯಗಳು, ಕೋಳಿ, ಮೀನು ಮತ್ತು ಮಾಂಸ ಮಾರಾಟ ಅಂಗಡಿಗಳು, ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು,ಪ್ರಸಾದ ವಿತರಿಸುವ ಧಾರ್ಮಿಕ ಕೇಂದ್ರಗಳು, ಸಮುದಾಯ ಭವನ, ಕಲ್ಯಾಣ ಮಂಟಪಗಳ ಊಟದ ಸಂಯೋಜಕರು, ಕ್ಯಾಟರಿಂಗ್‌ ವ್ಯವಹಾರ ಮಾಡುವವರು, ಮೀನು ಹಾಗೂ ಇತರ ಆಹಾರ ಪದಾರ್ಥಗಳ ಸಾಗಣೆದಾರರು, ಆಹಾರ ಉಗ್ರಾಣ ಸಂಘಟನೆಗಳ ಎಲ್ಲಾ ಆಹಾರ ಸಂಸ್ಕರಣೆ ಘಟಕಗಳು ಮತ್ತು ಆಹಾರ ಪಧಾರ್ಥಗಳ ಆಮದುದಾರರು, ಎಲ್ಲಾ ಆಹಾರ ಪದಾರ್ಥ ವಹಿವಾಟುದಾರರು ನೋಂದಣಿ ಅಥವಾ ಪರವಾನಗಿ ಪಡೆದುಕೊಳ್ಳಬೇಕು. ಈ ವರ್ಷ ಕಡ್ಡಾಯವಾಗಿ ಜನವರಿ 31ರ ಒಳಗಾಗಿ ನೋಂದಣಿ ಮಾಡಿಸಿಕೊಳ್ಳಬೇಕಿದೆ.

ಪ್ರಕ್ರಿಯೆ ಹೇಗೆ? ತಳ್ಳುಗಾಡಿ ವ್ಯಾಪಾರಸ್ಥರು, ಜೋಳ, ಮಿಠಾಯಿ, ತರಕಾರಿ ವ್ಯಾಪಾರಸ್ಥರು ಸ್ಥಳೀಯ ಸಂಸ್ಥೆಗಳಿಂದ ನಿರಾಕ್ಷೇಪಣಾ ಪತ್ರದೊಂದಿಗೆ ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಿ ದಾಖಲೆಗಳನ್ನು ಸಲ್ಲಿಸಿ, ಪ್ರಮಾಣ ಪತ್ರ ಪಡೆಯಬಹುದು. ಕೆಲವು ಆಹಾರ ಉದ್ಯಮಗಳು ಸ್ಥಳೀಯ ಸಂಸ್ಥೆಗಳಿಂದ ನಿರಾಕ್ಷೇಪಣಾ ಪತ್ರದ ಜತೆಗೆ ನೀರಿನ ಪರೀಕ್ಷೆ, ಕೆಲಸಗಾರರ ವೈದ್ಯಕೀಯ ಪರೀಕ್ಷೆ ಇನ್ನಿತರ ದಾಖಲೆಗಳೊಂದಿಗೆ ಆನ್‌ಲೈನ್‌ ಶುಲ್ಕ ಪಾವತಿ ರಶೀದಿಯನ್ನು ಲಗತ್ತಿಸಿ ದಾಖಲೆ ಸಲ್ಲಿಸಬೇಕು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ 15 ದಿನಗಳಲ್ಲಿ ಪ್ರಮಾಣ ಪತ್ರ ಲಭಿಸುತ್ತದೆ. ಒಂದು ವೇಳೆ ನಿಯಮ ಪ್ರಕಾರ ಅಂಗಡಿಗಳು ಇಲ್ಲದಿದ್ದರೆ ಸ್ವತ್ಛತೆ ಕೊರತೆ ಇದ್ದರೆ ನೋಟಿಸ್‌ ನೀಡಿ 1 ತಿಂಗಳಿನ ಒಳಗೆ ಬದಲಾವಣೆ ಮಾಡಿಸಿಕೊಳ್ಳಲು ಸೂಚಿಸಬಹುದು.

ಜಿಲ್ಲಾ ಅಂಕಿತ ಅಧಿಕಾರಿಗಳು ಪರವಾನಿಗೆ ನೀಡುವ ಹಾಗೂ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳು ನೋಂದಣಿ ಮಾಡುವ ಅಧಿಕಾರ ಹೊಂದಿದ್ದಾರೆ.

ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.